ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

BREAKING: ಯೋಗಿ ಆದಿತ್ಯನಾಥ್ ಭೇಟಿ ಮಾಡಿದ ಪ್ರಭು ಚೌಹಾಣ್!

|
Google Oneindia Kannada News

ಬೆಂಗಳೂರು, ಡಿ. 03: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿ‌ ಕುರಿತು ಪರ ಹಾಗೂ ವಿರೋಧದ ಚರ್ಚೆ ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಉತ್ತರ ಪದೇಶದಲ್ಲಿ ಗೋಹತ್ಯೆ ನಿಷೇಧ ಕಾಯಿದೆ ಜಾರಿ ಮಾಡಲಾಗಿದೆ. ಹೀಗಾಗಿ ಕಾನೂನಿನ ರೂಪರೇಷೆ, ಪರ ವಿರೋಧ ಅಂಶಗಳು, ಕಾನೂನು ಅನುಷ್ಟಾನ ಸೇರಿದಂತೆ ಹಲವು ವಿಚಾರಗಳ ಕುರಿತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಸಲಹೆಯನ್ನು ಸಚಿವ ಪ್ರಭು ಚೌಹಾಣ್ ಅವರು ಪಡೆದಿದ್ದಾರೆ ಎನ್ನಲಾಗಿದೆ. ಜೊತೆಗೆ ಸಂಪುಟ ಪುನಾರಚನೆ ಸಂದರ್ಭದಲ್ಲಿ ತಮ್ಮನ್ನು ಸಂಪುಟದಿಂದ ಕೈ ಬಿಡಬಹುದು ಎಂಬ ಆತಂಕ ಕೂಡ ಸಚಿವ ಪ್ರಭು ಚೌಹಾಣ್ ಅವರಿಗೆ ಇದೆ ಎನ್ನಲಾಗಿದೆ. ಹೀಗಾಗಿ ಗೋಹತ್ಯೆ ನಿಷೇಧ ಕಾಯಿದೆ ಜಾರಿ ಮೂಲಕ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವುದು ಕೂಡ ಪ್ರಭು ಚೌಹಾಣ್ ಪ್ರಯತ್ನ ಎನ್ನಲಾಗಿದೆ.

Prabhu Chauhan Meets Up Cm Yogi Adityanath Regarding Of Cow Slaughter Ban Act

Recommended Video

Covid-19 Vaccine ಪಡೆಯಲು ಇಂಗ್ಲೆಂಡಿನತ್ತ ಭಾರತೀಯರು! | Oneindia Kannada

ಗೋಹತ್ಯೆ ನಿಷೇಧ ಕಾಯಿದೆ ಪರ ಇರುವವರಿಂದ ಬೆಂಬಲವೂ ಸಿಗುತ್ತದೆ. ಜೊತೆಗೆ ಇದು ರಾಜಕೀಯವಾಗಿ ಬಿಜೆಪಿಗೆ ಅನುಕೂಲವಾಗಲಿದೆ ಎಂಬ ಚರ್ಚೆಗಳು ನಡೆದಿವೆ. ಜೊತೆಗೆ ಗ್ರಾಮ ಪಂಚಾಯತ್ ಚುನಾವಣೆ ಘೋಷಣೆಯಾಗಿದ್ದು, ಬಿಬಿಎಂಪಿ ಚುನಾವಣೆ ಕೂಡ ಘೋಷಣೆಯಾಗುವ ಸಾಧ್ಯತೆಗಳಿವೆ. ಗೋಹತ್ಯೆ ನಿಷೇಧ ಕಾನೂನಿನಿಂದ ಬಿಜೆಪಿಗೆ ಹಿಂದೂ ಮತಗಳ ಕ್ರೂಢೀಕರಣ ಮಾಡಬಹುದು ಎಂಬ ಲೆಕ್ಕಾಚಾರದಲ್ಲಿ ಬಿಜೆಪಿಯಿದೆ ಎನ್ನಲಾಗಿದೆ. ಒಟ್ಟಾರೆ ಸಚಿವ ಪ್ರಭು ಚೌಹಾಣ್ ಅವರು ಯುಪಿ ಸಿಎಂ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

English summary
Karnataka animal husbandry minister Prabhu Chouhan meets Uttar Pradesh Chief Minister Yogi Adityanath regarding foramtion of Cow Slaughter Ban Act, Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X