ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ, ಆದೇಶ
ಬೆಂಗಳೂರು, ಮೇ 18: ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳನ್ನು ಹಂಚಿಕೆ ಮಾಡುವ ಕುರಿತು ಆದೇಶವೊಂದನ್ನು ಹೊರಡಿಸಿದೆ. ಸರ್ಕಾರದ ಆದೇಶ ದಿನಾಂಕ 29/09/2016, ಆದೇಶ ಸಂಖ್ಯೆ 01/10/2016. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಕಡತವನ್ನು ಉಲ್ಲೇಖಿಸಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಶ್ರೀಪತಿ ಪಿ. ಕೆ. ಸರ್ಕಾರದ ಅಧೀನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಭಾವೈವ ಮತ್ತು ಸಮನ್ವಯ) ಆದೇಶವನ್ನು ಹೊರಡಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ, ಹಾಗೂ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಮೂರು 200 ಜನೌಷಧಿ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿರುತ್ತದೆ.
ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ರೋಗಿಗಳಿಗೆ ಸಲಹಾ ಚೀಟಿ ರೂಪದಲ್ಲಿ ನೀಡುವುದನ್ನು ನಿಷೇಧಿಸಲಾಗಿದೆ ಹಾಗೂ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿರದ ಔಷಧಿಗಳನ್ನು ಸಂಬಂಧಿಸಿದ ವೈದ್ಯರುಗಳು, ರೋಗಿಗಳಿಗೆ ನೀಡುವ ಸಲಹಾ ಚೀಟಿಗಳನ್ನು Generic ಹೆಸರಿನಲ್ಲಿ ಬರೆಯಲು ಕಡ್ಡಾಯವಾಗಿ ಸೂಚಿಸಿದೆ.
ಈ ಔಷಧಿಗಳನ್ನು ಆರೋಗ್ಯ ಸಂಸ್ಥೆಯ ಆವರಣದಲ್ಲಿ ಸ್ಥಾಪಿಸಿರುವ ಜನೌಷಧಿ ಮಳಿಗೆಯಲ್ಲಿ ಕಡಿಮೆ ದರದಲ್ಲಿ ಔಷಧಿ ಸಿಗುವ ಬಗ್ಗೆ ರೋಗಿಗಳಿಗೆ ವಿವರಿಸಿ ಅಲ್ಲಿಂದ ಆ ಔಷಧಿಗಳನ್ನು ಖರೀದಿಸಲು ಸಲಹೆ ನೀಡುವಂತೆ ಸಹ ಸೂಚಿಸಿದೆ ಹಾಗೂ ಜನರಿಕ್ ಔಷಧಿಗಳು, ಬ್ರಾಂಡೆಡ್ ಔಷಧಿಯಷ್ಟೇ ಉತ್ತಮ ಗುಣಮಟ್ಟ, ರೋಗನಿವಾರಕ ಸಾಮರ್ಥ್ಯ ಹೊಂದಿರುತ್ತದೆ ಎಂದು ರೋಗಿಗಳಿಗೆ ಶಿಕ್ಷಣ ಹಾಗೂ ಪ್ರಚಾರದ ಮೂಲಕ ಜಾಗೃತಿ ಮೂಡಿಸುವುದು ಮತ್ತು ಜನರಿಕ್ ಔಷಧಿಗಳನ್ನು ಈ ಒಂದು ಜನೌಷಧಿ ಸದುದ್ದೇಶಕ್ಕಾಗಿ ತೆರೆದಿರುವ ಮಳಿಗೆಗಳ ಮೂಲಕವೇ ಖರೀದಿಸಲು ಜನಸಾಮಾನ್ಯರಿಗೆ ಉತ್ತೇಜನದ ಮುಖಾಂತರ ತಿಳುವಳಿಕೆ ನೀಡಲು ಆದೇಶಿಸಿದೆ.
ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಏಕಕಡತದಲ್ಲಿ ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಸ್ತುತ 207 ಜನೌಷಧಿ ಕೇಂದ್ರಗಳಿಗೆ ಅನುಮತಿ ನೀಡಲಾಗಿರುತ್ತದೆ. ಅರ್ಜಿದಾರರು ಜನೌಷಧಿ ಕೇಂದ್ರಗಳ ಸ್ಥಾಪನೆಗೆ ಸಲ್ಲಿಸಿದ ಅರ್ಜಿಯನ್ನು ಎಆರ್‌ಎಸ್ ಮುಂದೆ ಮಂಡಿಸಿ ಅದರ ಅನುಮೋದನೆಯ ನಂತರ ಆಯುಕ್ತರ ಮುಖಾಂತರ ಸರ್ಕಾರಕ್ಕೆ ಸಲ್ಲಿಸಿ, ಸರ್ಕಾರದಿಂದ ಅನುಮೋದನೆ ಆದ ನಂತರ ಅರ್ಜಿದಾರರಿಗೆ ಅನುಮತಿ ನೀಡಲಾಗುತ್ತದೆ. ಆದುದರಿಂದ, ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸುವ ನೀತಿಗೆ ಸಂಬಂಧಿಸಿದಂತೆ ಸಮಗ್ರವಾಗಿ ಪರಿಶೀಲಿಸುವ ಅಗತ್ಯವಿರುತ್ತದೆ.
ಪ್ರಸ್ತುತ ಜನೌಷಧಿ ಕೇಂದ್ರಗಳ ಸ್ಥಾಪನೆಗೆ 31 ಅರ್ಜಿಗಳು ಆಯುಕ್ತರ ಹಂತದಲ್ಲಿ ಬಾಕಿ ಇರುತ್ತವೆ. ಸದರಿ ಜನೌಷಧಿ ಕೇಂದ್ರಗಳ ಸ್ಥಾಪನೆಗೆ ಸಂಬಂಧಿಸಿದ ಈಗಿನ ನೀತಿಯು, ಕಾರ್ಯವಿಧಾನಕ್ಕೆ ಸಂಬಂಧಿಸಿದಂತೆ ಹಳೆಯದಾಗಿದೆ. ಈ ಹಿನ್ನೆಲೆಯಲ್ಲಿ ಪಾಲಿಸಿಯನ್ನು ಮರುಪರಿಶೀಲಿಸುವುದು ಅಗತ್ಯವಿರುತ್ತದೆ. ಆದುದರಿಂದ ಆಯುಕ್ತಾಲಯದಲ್ಲಿ ಸ್ವೀಕೃತವಾಗಿರುವ ಅರ್ಜಿಗಳ ಬಗ್ಗೆ ಕ್ರಮ ಕೈಗೊಳ್ಳುವ ಕುರಿತು ನಿರ್ದೇಶನ ಕೋರಿರುತ್ತಾರೆ.
ಪ್ರಸ್ತುತ ಆಸ್ಪತ್ರೆಗಳು ರೋಗಿಗಳಿಗೆ ಯಾವುದೇ ಔಷಧಿಗಳನ್ನು ಹೊರಗಿನಿಂದ ಖರೀದಿಸಲು ಶಿಫಾರಸ್ಸನ್ನು ಮಾಡದಂತೆ ನೋಡಿಕೊಳ್ಳುವುದು ಸರ್ಕಾರ ನೀತಿಯಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದೊಳಗೆ ಜನಔಷಧಿ ಕೇಂದ್ರಗಳನ್ನು ತೆರೆಯುವುದು ಸರ್ಕಾರದ ನೀತಿಗೆ ವ್ಯತಿರಿಕ್ತವಾಗುತ್ತದೆ.
ಭಾರತದ ಬಿ.ಪಿ.ಪಿ.ಐ ಬ್ಯೂರೋ ಆಫ್ ಫಾರ್ಮ ಈ ಜನೌಷಧಿ ಕೇಂದ್ರಗಳಿಗೆ ನೋಡಲ್ ಕೇಂದ್ರ ಸಂಸ್ಥೆಯಾಗಿದ್ದು, ಈ ಕೇಂದ್ರಗಳಿಂದ ಖರೀದಿಸುವ ಔಷಧಿಗಳಿಗೆ ವಿಶೇಷ ರಿಯಾಯಿತಿಯನ್ನು ಒದಗಿಸುತ್ತದೆ. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಪ್ರಸ್ತಾವನೆ ಮತ್ತು ಲಭ್ಯವಿರುವ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.
ಸರ್ಕಾರದ ಆದೇಶ: ಸಂಖ್ಯೆ: ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಜನೌಷಧಿ ಕೇಂದ್ರಗಳ ಹಂಚಿಕೆಯನ್ನು ಸ್ಥಗಿತಗೊಳಿಸಲು ಮತ್ತು ಅದಕ್ಕೆ ಅನುಗುಣವಾಗಿ ಜನೌಷಧಿ ಕೇಂದ್ರಗಳ ಪ್ರಾರಂಭಕ್ಕಾಗಿ ಆಯುಕ್ತಾಲಯದಲ್ಲಿ ಅನುಮೋದನೆಗಾಗಿ ಬಾಕಿ ಇರುವ 31 ಅರ್ಜಿಗಳನ್ನು ತಿರಸ್ಕರಿಸಲು ಅನುಮೋದನೆ ನೀಡಿ ಆದೇಶಿಸಿದೆ.
ಆದಾಗ್ಯೂ, ಸರ್ಕಾರಿ ಆಸ್ಪತ್ರೆಗಳ ಹೊರಗೆ ಜನೌಷಧಿ ಕೇಂದ್ರಗಳ ಸ್ಥಾಪನೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರದ ಕಾರಣ ಮುಂದುವರಿಯಬಹುದಾಗಿದೆ. ಮುಂದುವರೆದು, ಪ್ರಸ್ತುತ ಇಲಾಖೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಅಸ್ತಿತ್ವದಲ್ಲಿರುವ ಜನೌಷಧಿ ಕೇಂದ್ರಗಳನ್ನು ಅವರೊಂದಿಗೆ ಮಾಡಿಕೊಂಡಿರುವ ಒಪ್ಪಂದ ನಿಯಮಗಳ ಪ್ರಕಾರ ಸ್ಮಗಿತಗೊಳಿಸಲು ಅಗತ್ಯ ಕ್ರಮವಹಿಸತಕ್ಕದ್ದು.
ಹಾಗೆಯೇ, ಜೆನರಿಕ್ ಔಷಧಿಗಳ ಖರೀದಿಗೆ ಬಿ.ಪಿ.ಪಿ.ಐ ಯೊಂದಿಗೆ ಕೆ.ಎಸ್.ಎಂ.ಎಸ್.ಸಿ.ಎಲ್ ರವರು ವಿಶೇಷ ದರಗಳನ್ನು ರೂಪಿಸಲು ಸೂಚಿಸಿದೆ. ಪರ್ಯಾಯವಾಗಿ, ಆಸ್ಪತ್ರೆಗಳು ಬಿ.ಪಿ.ಪಿ.ಐಯಿಂದ ಔಷಧಿಗಳನ್ನು ಖರೀದಿಸಿ ರೋಗಿಗಳಿಗೆ ಉಚಿತವಾಗಿ ವಿತರಿಸಲು ಕ್ರಮವಹಿಸಕ್ಕದ್ದು.
-
Pomegranate Juice Benefits: 6 ದಿನಗಳಲ್ಲಿ ಕಾಣುವ ಆರೋಗ್ಯ ಬದಲಾವಣೆಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications