'ಪ್ರಗತಿ 50' ಯೋಜನೆಗೆ ಬೆಂಗಳೂರು, ಮೈಸೂರು ಆಯ್ಕೆ: ಅನುದಾನ ಬಿಡುಗಡೆಗೆ ಮನವಿ: ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ದೇಶದ ಆಯ್ದ 50 ನಗರಗಳನ್ನು ಮಾದರಿ ಸ್ವಚ್ಛ ನಗರಗಳಾಗಿ ರೂಪಿಸುವ 'ಪ್ರಗತಿ 50' (PRAGATI 50) ಉಪಕ್ರಮಕ್ಕೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಈ ಮಹತ್ವದ ಯೋಜನೆಗೆ ಕರ್ನಾಟಕದ ಬೆಂಗಳೂರು ಮತ್ತು ಮೈಸೂರು ನಗರಗಳು ಆಯ್ಕೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು ಮಂಗಳವಾರ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾದ ಮನೋಹರ್ ಲಾಲ್ ಖಟ್ಟರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸ್ವಚ್ಛ ಭಾರತ ಮಿಷನ್-ನಗರ 2.0ರ ಹೊಸ ಕಾರ್ಯಕ್ರಮಗಳನ್ನು ಬಲಪಡಿಸುವ ಕುರಿತು ನಡೆದ ವೀಡಿಯೊ ಸಂವಾದ ಸಭೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಭಾಗವಹಿಸಿದರು.

PRAGATI 50

ಈ ಸಂದರ್ಭದಲ್ಲಿ 'ಪ್ರಗತಿ 50" ಉಪಕ್ರಮಕ್ಕೆ ಚಾಲನೆ ನೀಡಿರುವುದನ್ನು ಸ್ವಾಗತಿಸಿದ ಸಚಿವರು, ರಾಜ್ಯದ ಬೆಂಗಳೂರು ಮತ್ತು ಮೈಸೂರು ನಗರಗಳು ಯೋಜನೆಗೆ ಆಯ್ಕೆಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ರಾಜ್ಯದ ನಗರಾಭಿವೃದ್ಧಿ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳು ಹಾಗೂ ಪ್ರಮುಖ ಬೇಡಿಕೆಗಳ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಿದರು.

ಯೋಜನೆಗಳ ಯಶಸ್ವಿ ಜಾರಿಗೆ ಕೇಂದ್ರದಿಂದ ಅನುದಾನ ಅಗತ್ಯ

ಮಾದರಿ ನಗರಗಳ ಅಭಿವೃದ್ಧಿ ಸೇರಿದಂತೆ ವಿವಿಧ ಪ್ರಮುಖ ನಗರಾಭಿವೃದ್ಧಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಅನುದಾನದ ಪಾಲು ಅತ್ಯಂತ ಅಗತ್ಯವಾಗಿದೆ. ಬಾಕಿ ಇರುವ ಕೇಂದ್ರದ ಪಾಲಿನ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಭೆಯಲ್ಲಿ ಮನವಿ ಮಾಡಿದರು.

ರಾಜ್ಯದ ನಗರಾಭಿವೃದ್ಧಿ ಯೋಜನೆಗಳಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಸೇರಿದಂತೆ ಇತರ ಅಭಿವೃದ್ಧಿ ವಿಷಯಗಳ ಕುರಿತು ಪ್ರತ್ಯೇಕವಾಗಿ ಚರ್ಚಿಸಲು ಕೇಂದ್ರ ಸಚಿವರೊಂದಿಗೆ ಭೇಟಿಗೆ ಸಮಯ ಕೋರಲಾಗಿದ್ದು, ಶೀಘ್ರದಲ್ಲೇ ಭೇಟಿಗೆ ಸಮಯ ನಿಗದಿಪಡಿಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.

ಉನ್ನತ ಮಟ್ಟದ ವೀಡಿಯೊ ಸಂವಾದ ಸಭೆಯಲ್ಲಿ ವಿವಿಧ ರಾಜ್ಯಗಳ ನಗರಾಭಿವೃದ್ಧಿ ಸಚಿವರು, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಗಳಾದ ಶ್ರೀ ಸತ್ಯೇಂದ್ರ ಸಿಂಗ್ ಹಾಗೂ ಸ್ವಚ್ಛ ಭಾರತ ಮಿಷನ್ ರಾಷ್ಟ್ರೀಯ ನಿರ್ದೇಶಕರಾದ ಡಾ. ಶಾಲಿನಿ ಪಾಂಡೆ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾತಿ ವ್ಯವಸ್ಥೆ ವಿರುದ್ಧ ಯತೀಂದ್ರ ಕರೆ

ಚನ್ನಪಟ್ಟಣ: ಸಮಾಜದಲ್ಲಿ ಬೇರೂರಿರುವ ಜಾತಿ ವ್ಯವಸ್ಥೆಯನ್ನು ಬುಡಮೇಲು ಮಾಡಿ, ಹಿಂದುಳಿದ, ಶೋಷಿತ ಹಾಗೂ ದಮನಿತ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಗುಣಮಟ್ಟದ ಶಿಕ್ಷಣ ನೀಡಬೇಕು. ಸಮಾನ ಅವಕಾಶ ಒದಗಿಸಬೇಕು ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ಮೊನ್ನೆ ಚನ್ನಪಟ್ಟಣ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದ ಶತಮಾನೋತ್ಸವ ಭವನದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ 'ಶ್ರೀ ಡಾ. ಯತೀಂದ್ರ ಸಿದ್ದರಾಮಯ್ಯ ಅಭಿಮಾನಿ ಬಳಗ'ದ ವತಿಯಿಂದ ಜಿಲ್ಲೆಯ ಕುರುಬ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಆಯೋಜಿಸಲಾಗಿದ್ದ 2 ನೇ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಶಿಕ್ಷಣ ಎನ್ನುವುದು ಕೇವಲ ವೈಯಕ್ತಿಕ ಬೆಳವಣಿಗೆಗೆ ಸೀಮಿತವಾಗದೆ, ಸಮಗ್ರ ಸಮುದಾಯದ ಅಭಿವೃದ್ಧಿಗೆ ಬಳಕೆಯಾಗಬೇಕು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+