Maize Price: ಸಿಎಂಗೆ ಜ್ಞಾನೋದಯ, ಮಕ್ಕೆಜೋಳ ಖರೀದಿ ಬಗ್ಗೆ ಡಿಸ್ಟಿಲರಿಗಳಿಗೆ ಪತ್ರ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ, ನವೆಂಬರ್ 23: ಕರ್ನಾಟಕದ ಮಕ್ಕೆಜೋಳ ಖರೀದಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರ ಹೊರಗಿನಿಂದ ಮಾಡಿಕೊಳ್ಳುವ ಆಮದು ನಿಲ್ಲಿಸಬೇಕು ಎಂದೆಲ್ಲ ಆರೋಪ ಮಾಡಿದ್ದರು. ಇದನ್ನು ಖಂಡಿಸಿದ್ದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಅವರು, ರಾಜ್ಯದ ಸರ್ಕಾರದಲ್ಲಿನ ವೈಫಲ್ಯಗಳ ಬಗ್ಗೆ ವಿವರಿಸಿದ್ದರು. ಇದರ ಬೆನ್ನಲ್ಲೆ ಮುಖ್ಯಮಂತ್ರಿಗಳಿಗೆ ಡಿಸ್ಟಿಲರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಸಚಿವರು ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಭಾನುವಾರ ಪ್ರತಿಕ್ರಿಯಿಸಿರುವ ಅವರು, ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರರ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗ ಜ್ಞಾನೋದಯ ಆದಂತಿದೆ. ಕಬ್ಬು ಬೆಳೆಗಾರರು ಮತ್ತು ಮೆಕ್ಕೆಜೋಳ ರೈತರ ವಿಚಾರದಲ್ಲಿ ಸಿಎಂ ಸ್ವಲ್ಪ ತಡವಾಗಿ ಕುಂಭಕರ್ಣ ನಿದ್ದೆಯಿಂದ ಎಚ್ಚೆತ್ತುಕೊಂಡಿದ್ದಾರೆ. ಅಂತೂ ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳ ಖರೀದಿಗೆ ಒಪ್ಪಂದ ಮಾಡಿಕೊಳ್ಳುವಂತೆ ಡಿಸ್ಟಿಲರಿಗಳಿಗೆ ಪತ್ರ ಬರೆದಿದ್ದಾರೆಂದು ಜೋಶಿ ಅವರು ಹೇಳಿದರು.

ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳ ಖರೀದಿಗೆ NCCF ಮತ್ತು NAFED ಜತೆ ಒಪ್ಪಂದ ಮಾಡಿಕೊಳ್ಳುವಂತೆ ಡಿಸ್ಟಿಲರಿಗಳಿಗೆ ಪತ್ರ ಬರೆಯುವ ಬುದ್ಧಿ ಈಗಲಾದರೂ ಬಂದಿದೆಯಲ್ಲ. ಇಷ್ಟು ದಿನ ಪ್ರತಿಯೊಂದಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗ ಜ್ಞಾನೋದಯವಾಗಿದೆ ಎಂದು ಕುಟುಕಿದ್ದಾರೆ.
ಎಥೆನಾಲ್ ಉತ್ಪಾದನೆಗಾಗಿ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಿಕೊಳ್ಳಲು NCCF ಮತ್ತು NAFED ನೊಂದಿಗೆ ಒಪ್ಪಂದ ಮಾಡಿಕೊಳ್ಳತಕ್ಕದ್ದು ಎಂದು ಮುಖ್ಯಮಂತ್ರಿಗಳು ಇದೀಗ ಡಿಸ್ಟಿಲರಿಗಳಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರಕ್ಕೆ ತನ್ನ ಕಾರ್ಯದ ಬಗ್ಗೆ ಅರಿವಾದಂತಿದೆ ಎಂದು ಕಾಲೆಳೆದರು.
ರಾಜ್ಯ ಸರ್ಕಾರ ಹೊಣೆಗಾರಿಕೆ ಮರೆತ ಬಗ್ಗೆ ನಿನ್ನೆ ತಾನೇ ಮಾಧ್ಯಮಗಳೆದುರು ಪ್ರಸ್ತಾಪಿಸಿದ್ದೆ. ಮೆಕ್ಕೆಜೋಳ ಖರೀದಿ ವಿಚಾರವಾಗಿ ಕೇಂದ್ರ ಸರ್ಕಾರ ಸ್ಪಷ್ಟವಾಗಿ ಹೊರಡಿಸಿರುವ ಮಾರ್ಗಸೂಚಿಗಳನ್ನು (SOP) ಪಾಲಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿತ್ತು. ಕೆಟ್ಟ ಮೇಲೆ ಬುದ್ಧಿ ಬಂತು ಎನ್ನುವಂತೆ ರಾಜ್ಯ ಸರ್ಕಾರಕ್ಕೆ ಇದೀಗ ಬುದ್ಧಿ ಬಂದಿದೆ ಎಂದರು.
ಕೇಂದ್ರದತ್ತ ಬೆರಳು ತೋರಿಸುವುದು ನಿಲ್ಲಲಿ
ಇನ್ನಾದರೂ ರೈತರಲ್ಲಿ ಇಲ್ಲ ಸಲ್ಲದ ಗೊಂದಲ ಸೃಷ್ಟಿಸುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡಬೇಕು. ತಮ್ಮ ಸರ್ಕಾರದ ಆಡಳಿತ ವೈಫಲ್ಯ ಮರೆಮಾಚುವುದಕ್ಕಾಗಿ ಕೇಂದ್ರ ಸರ್ಕಾರದತ್ತ ಬೆರಳು ತೋರುವುದನ್ನು ಇಲ್ಲಿಗೇ ನಿಲ್ಲಿಸಲಿ. ರಾಜ್ಯದಲ್ಲಿ ಜನ ಕೊಟ್ಟ ಅಧಿಕಾರವನ್ನು ಜನರಿಗಾಗಿ ಸದ್ವಿನಿಯೋಗ ಆಗುವಂತೆ ಪಾರದರ್ಶಕ ಆಡಳಿತ ನಿರ್ವಹಿಸಲಿ ಎಂದು ಸಚಿವ ಪ್ರಹ್ಲಾದ್ ಜೋಶಿ ಸಲಹೆ ನೀಡಿದರು.
ಕೊನೆಗೂ ಸಕ್ಕರೆ ಹಾಗೂ ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ಮುಖ್ಯಮಂತ್ರಿ @siddaramaiah ಕುಂಭಕರ್ಣನ ನಿದ್ದೆಯಿಂದ ಎದ್ದಿದ್ದಾರೆ. ಮೆಕ್ಕೆಜೋಳ ಖರೀದಿಯ ವಿಷಯದಲ್ಲಿ ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳದ ಖರೀದಿಗೆ ಎನ್ ಸಿ ಸಿ ಎಫ್ (NCCF) ಹಾಗೂ ನಾಫೆಡ್ (NAFED) ನೊಂದಿಗೆ ಒಪ್ಪಂದ ಮಾಡಿಕೊಂಡು ಡಿಸ್ಟಿಲರಿಗಳು ಖರೀದಿ ಮಾಡಿಕೊಳ್ಳುವಂತೆ ಪತ್ರ… pic.twitter.com/AvTZy3oIVq
— Pralhad Joshi (@JoshiPralhad) November 23, 2025
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರು ಮೆಕ್ಕೆಜೋಳ ಖರೀದಿಗೆ ಕೇಂದ್ರ ತೆರೆಯಲು ಸೂಚಿಸಿದ್ದಾರೆ. ಹತ್ತು ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಸರ್ಕಾರ ಖರೀದಿಸಲಿದೆ ಎಂದಿದ್ದರು. ಈ ವೇಳೆ ಕೇಂದ್ರ ಸರ್ಕಾರ ಬೇರೆಡೆಯಿಂದ ಆಮದು ಮಾಡಿಕೊಳ್ಳುವ ಪ್ರಮಾಣ ಬಗ್ಗೆ ಆರೋಪಿಸಿದ್ದರು. ಈ ಆರೋಪ ಸುಳ್ಳು ಎಂದಿದ್ದ ಪ್ರಹ್ಲಾದ್ ಜೋಶಿಯವರು, ಮೆಕ್ಕೆಜೋಳ ಖರೀದಿಗೆ ಮುಂದಾಗದೇ ಕಾಲ ಹರಣ ಮಾಡಿತ್ತು. ಡಿಸ್ಟಿಲರಿಗಳಿಗೆ ಪತ್ರ ಹಸ ಬರೆದಿಲ್ಲ ಎಂದು ಸರ್ಕಾರ ವೈಫಲ್ಯ ಬಗ್ಗೆ ಮಾತನಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಡಿಸ್ಟಿಲರಿಗಳಿಗೆ ಪತ್ರ ಬರೆದಿದ್ದಾರೆ.












Click it and Unblock the Notifications