Prajwal Revanna Case: ಬಂಧನದ ಭೀತಿಯಲ್ಲಿರುವ ಹೆಚ್ ಡಿ ರೇವಣ್ಣಗೆ ಮತ್ತೊಂದು ಶಾಕ್
ಮೈಸೂರು, ಮೇ 03: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಮಾತ್ರವಲ್ಲದೇ ರಾಷ್ಟ್ರ ಮಟ್ಟದಲ್ಲೂ ಸಹ ಪ್ರಜ್ವಲ್ ರೇವಣ್ಣ ಅವರು ಪ್ರಕರಣ ಸಂಚಲನ ಮೂಡಿಸಿದೆ.
ಈಗಾಗಲೇ ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ ಐ ಟಿ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಇನ್ನೂ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಸ್ ದಾಖಲಾಗಿದ್ದು, ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಮೇಲೆ ಕೇಸ್ ದಾಖಲಾಗಿದ್ದು, ಬಂಧನದ ಭೀತಿಯಲ್ಲಿದ್ದ ಹೆಚ್ ಡಿ ರೇವಣ್ಣ ಅವರಿಗೆ ಮತ್ತೊಂದು ಶಾಕ್ ಎದುರಾಗಿದೆ.

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶದಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣರನ್ನು ಕೂಡ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಇನ್ನೂ ರೇವಣ್ಣ ಅವರ ವಿರುದ್ಧ ಮೈಸೂರಿನಲ್ಲಿಯೂ ಕೇಶ್ ದಾಖಲಾಗಿದ್ದು, ಹೆಚ್ಡಿ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಮೈಸೂರು ಜಿಲ್ಲೆಯ ಕೆಆರ್ ನಗರದಲ್ಲಿ ಮಹಿಳೆಯೊಬ್ಬರು ಕಾಣೆಯಾಗಿರುವ ಬಗ್ಗೆ ಮಾಜಿ ಸಚಿವ ಹೆಚ್ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ನಾಪತ್ತೆಯಾಗಿರುವ ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ.
ನಾಪತ್ತೆಯಾಗಿರುವ ಮಹಿಳೆಯ ಪುತ್ರ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದೆ. ವಿಡಿಯೋಗಳು ಬಹಿರಂಗವಾದ ಬಳಿಕ ನನ್ನ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ. ಈ ವಿಚಾರವಾಗಿ ಮೈಸೂರು ಪೊಲೀಸ್ ಹೆಚ್ಚುವರಿ ಆಯುಕ್ತೆ ಕೆಆರ್ ನಗರ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿದ್ದು ಭಾರತಕ್ಕೆ ಬರಲು ವಿಳಂಬ ಮಾಡುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಕುರಿತು ಕರ್ನಾಟಕದ ಗೃಹ ಸಚಿವ ಜಿ ಪರಮೇಶ್ವರ್ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, ಪ್ರಜ್ವಲ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಸಹಕರಿಸದಿದ್ದರೆ ಅವರನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.












Click it and Unblock the Notifications