ಶೀಘ್ರದಲ್ಲೇ ಮತ್ತೊಂದು ಸಿಡಿ; ಯಾರದ್ದು? ಹೊಸ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ, ಮೇ 07: ದೇಶದಾದ್ಯಂತ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ಹೌದು, ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು, ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ ಎಂದು ಅವರು ಹೇಳಿದ್ದಾರೆ. ಪ್ರಜ್ವಲ್ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದರ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಆರೋಪಿಸಿದರು. ಸೋಮವಾರ ವಕೀಲ, ಬಿಜೆಪಿ ನಾಯಕ ದೇವೇರಾಜೇ ಗೌಡರು ಆರೋಪಿಸಿದಂತೆ ಪ್ರಕರಣದಲ್ಲಿ ಡಿಕೆಶಿ ಕೈವಾಡ ಇರುವುದು ಸ್ಪಷ್ಟ ಎಂದು ಯತ್ನಾಳ್ ಹೇಳಿದರು.

Prajwal Case BJP MLA Basangouda Patil Yatnal Hints Another Case Like This May Public Shortly

14 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸಲಿದೆ. ಅಬ್ ಕಿ ಬಾರ್ ಚಾರ್ ಸೋ ಬಾರ್ ಎನ್ನುವಂತೆ ಹೆಚ್ಚು ಸ್ಥಾನಗಳನ್ನು ಗಳಿಸುತ್ತೇವೆ, ದೇಶ ರಾಜ್ಯ ಮನೆ ಸುರಕ್ಷಿತವಾಗಬೇಕೆಂದರೆ ಮೋದಿ ಮತ್ತೇ ಪ್ರಧಾನಿಯಾಗಬೇಕು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಪ್ರಜ್ವಲ್ ರೇವಣ್ಣ ಅಶ್ಲೀಲ ಸಿಡಿ ಬಹಿರಂಗ ಹಾಗೂ ರೇವಣ್ಣ ಅರೆಸ್ಟ್ ವಿಚಾರವಾಗಿ ಮಾತನಾಡಿದ ಅವರು, ಮತದಾನದ ಮೇಲೆ ಪರಿಣಾಮ ಬೀರಲ್ಲ. ಈ ಪ್ರಕರಣದ ಹಿಂದೆ ಕಾಂಗ್ರೆಸ್ ನ ಮಹಾ ನಾಯಕನಿದ್ದಾನೆ. ನಿನ್ನೆ ದೇವರಾಜಗೌಡಾ ಸ್ಪಷ್ಟವಾಗಿ ಹೇಳಿದ್ದಾರೆ. ಇದನ್ನ ಮಾಡಿದವರ ಯಾರು ಅಂತಾ ಹೇಳಿದ್ದಾರೆ, ಆ ಆಡಿಯೊವನ್ನು ಬಿಡುಗಡೆ ಮಾಡಿದ್ದಾರೆ. ಇಲ್ಲಿ ಎಸ್ ಐಟಿ ಸಂಪೂರ್ಣ ಡಿ ಕೆ ಶಿವಕುಮಾರ್ ಏಜೆಂಟ್ ರಾಗಿ ಕೆಲಸ ಮಾಡುತ್ತಿದೆ
ಅದಕ್ಕಾಗಿ ಇದಕ್ಕೆ ನ್ಯಾಯ ಸಿಗಲ್ಲ‌ ಇದನ್ನ ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

ಎಸ್ ಐಟಿಯಲ್ಲಿ ಇರುವ ಅಧಿಕಾರಿಗಳೆಲ್ಲ ರಾಜ್ಯದವರು. ಡಿ ಕೆ ಶಿವಕುಮಾರ್ ಕಂಟ್ರೋಲ್ ನಲ್ಲಿ ಇರುವವರು, ಎಸ್ ಐಟಿ ಯಿಂದ ನಮಗೆ ನ್ಯಾಯ ಸಿಗಲ್ಲ. ಹಾಗಾಗಿ ಸಿಬಿಐ ತನಿಖೆಗೆ ಈ ಪ್ರಕರಣ ವಹಿಸಬೇಕು. ಮೊದಲೇ ಹೇಳಿದ್ದೆ ರಾಜ್ಯದಲ್ಲಿ ಎರಡು ಸಿಡಿ ಫ್ಯಾಕ್ಟರಿ ಇದೆಯಂತಾ. ಇದೊಂದು ಓಪನ್‌ ಆಗಿದೆ,ಇನ್ನೊಂದು ಓಪನ್ ಆಗುತ್ತದೆ ಎಂದು ಹೇಳಿದರು.

ಪ್ರಜ್ವಲ್‌ ರೇವಣ್ಣ ಅವರ ವಿಚಾರ ಮತದಾನದ ಮೇಲೆ ಪರಿಣಾಮ ಬೀರುತ್ತಾ ಎಂಬ ವಿಚಾರವಾಗಿ ಮಾತನಾಡಿ, ನಮ್ಮ ಮೇಲೆ ಯಾವುದೆ ಪರಿಣಾಮ ಅಗಲ್ಲ. 14 ಲೋಕಸಭಾಯಲ್ಲಿ ಬಿಜೆಪಿ ಅಭ್ಯರ್ಥಿಗಳು ಇದ್ದಾರೆ
ಇಲ್ಲಿ ಜೆಡಿಎಸ್ ನವರು ಯಾರು ಇಲ್ಲ. 2019 ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಇದ್ದಾಗ ಈ ಪ್ರಕರಣ ನಡೆದಿದೆ, ಹೀಗಾಗಿ ಇದಕ್ಕೆ ಕಾಂಗ್ರೆಸ್ ನೇರ ಹೊಣೆ.

ಲೋಕಸಭಾ ಚುನಾವಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ವಿಚಾರವಾಗಿ ಮಾತನಾಡಿ, ರಾಜ್ಯ ಬಿಜೆಪಿಯಲ್ಲಿ ಅಷ್ಟೇ ಅಲ್ಲ ಇಡೀ ದೇಶದಲ್ಲಿ ಬದಲಾವಣೆಯಾಗುತ್ತದೆ. ಮೋದಿ ಪ್ರಧಾನಿಯಾದ ಬಳಿಕ ಹಲವಾರು ಕಾಯ್ದೆಗಳನ್ನ ಜಾರಿ ಮಾಡಲಾಗುತ್ತದೆ. ವಕ್ಪ್ ಆಸ್ತಿ ವಶಪಡಿಸಿಕೊಂಡು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಬಡವರಿಗೆ ಮನೆ ಕಟ್ಟಲು ಉಪಯೋಗಿಸುತ್ತೇವೆ, ಹನಿ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗುವುದು ಖಚಿತ ಎಂದು ಯತ್ನಾಳ್ ‌ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+