Prajwal Case: ಮನನೊಂದು ರಾಜೀನಾಮೆಗೆ ಮುಂದಾಗಿದ್ದ ದೇವೇಗೌಡ, ಸ್ಫೋಟಕ ಮಾಹಿತಿ ಬಹಿರಂಗ
ಬೆಂಗಳೂರು, ಮೇ 20: ಪ್ರಜ್ವಲ್ ರೆವಣ್ಣ ಪ್ರಕರಣದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಕುಟುಂಬಕ್ಕೆ ಮುಜುಗರ ಉಂಟು ಮಾಡಿದ್ದು, ಇಡೀ ದೊಡ್ಡಗೌಡರ ಕುಟುಂಬದಲ್ಲಿ ಆತಂಕ ಛಾಯೆ ಆವರಿಸಿದೆ. ಇದರಿಂದ ನೊಂದಿರುವ ಎಚ್‌ಡಿ ದೇವೇಗೌಡ ಅವರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎನ್ನುವ ಸ್ಫೋಟಕ ಅಂಶವನ್ನು ಮಾಜಿ ಮುಖ್ಯಮಂತ್ರಿ ಹೆಚ್ ಕುಮಾರಸ್ವಾಮಿ ಬಹಿರಂಗಪಡಿಸಿದ್ದಾರೆ.
ಸೋಮವಾರ ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಈ ಪ್ರಕರಣದಿಂದ ಮನ ನೊಂದ ದೇವೇಗೌಡರು ರಾಜ್ಯಸಭೆ ಸ್ಥಾನಕ್ಕೆ ರಾಜೀನಾಮೆ ನೋಡಲು ಮುಂದಾಗಿದ್ದರು ಎನ್ನುವ ಅಂಶವನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗಪಡಿಸಿದರು. ಅರವತ್ತು ವರ್ಷಗಳ ತಮ್ಮ ನಿಷ್ಕಳಂಕ ರಾಜಕೀಯ ಜೀವನಕ್ಕೆ ಗಾಯ ಮಾಡಿದ ಈ ಘಟನೆಯಿಂದ ಮಾಜಿ ಪ್ರಧಾನಿಗಳು ಬಹಳ ನೊಂದಿದ್ದಾರೆ.

ನಾನು ಹೇಗೆ ಹೋಗಿ ರಾಜ್ಯಸಭೆಯಲ್ಲಿ ಕೂರಲಿ ಎಂದು ಕಣ್ಣೀರು ಹಾಕಿದ್ದರು. ಆದರೆ, ನಾನೇ ಅವರ ಮನವೊಲಿಸಿದೆ. ರಾಜ್ಯದ ಹಿತಕ್ಕಾಗಿ ನೀವು ರಾಜೀನಾಮೆ ಕೊಡಬಾರದು. ನೀರಾವರಿ ಸೇರಿದಂತೆ ಅನೇಕ ವಿಷಯಗಳಲ್ಲಿ ನಿಮ್ಮಿಂದ ರಾಜ್ಯಕ್ಕೆ ನ್ಯಾಯ ಸಿಕ್ಕಿದೆ. ಇನ್ನೂ ನೀರಾವರಿಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಇಂಥ ಸಂದರ್ಭದಲ್ಲಿ ನೀವು ರಾಜೀನಾಮೆ ಕೊಟ್ಟರೆ ರಾಜ್ಯಕ್ಕೆ ನಷ್ಟ ಆಗುತ್ತದೆ. ರಾಜ್ಯದ ನೀರಾವರಿ ಯೋಜನೆಗಳ ಪರವಾಗಿ ಸಂಸತ್ತಿನಲ್ಲಿ ದನಿ ಎತ್ತಲು ನೀವು ಬೇಕು. ದಯಮಾಡಿ ನಿಮ್ಮ ನಿರ್ಧಾರ ಬದಲಿಸಿಕೊಳ್ಳಿ ಎಂದು ನಾನು ಮನವಿ ಮಾಡಿಕೊಂಡೆ ಎಂದು ಹೇಳಿದರು.
ನನ್ನ ಸುತ್ತಮುತ್ತಲಿನ 40 ಜನರ ಫೋನ್ʼಗಳನ್ನು ರಾಜ್ಯ ಸರಕಾರ ಟ್ಯಾಪ್ ಮಾಡುತ್ತಿದೆ. ರೇವಣ್ಣ ಅವರ ಫೋನ್ ಸೇರಿದಂತೆ ನನ್ನ ಸುತ್ತಮುತ್ತ ಇರುವ ಎಲ್ಲರ ಫೋನ್ ಗಳನ್ನೂ ಸರಕಾರ ಟ್ಯಾಪ್ ಮಾಡಿಸುತ್ತಿದೆ. ನನ್ನ ಫೋನ್ ಕೂಡ ಟ್ಯಾಪ್ ಆಗುತ್ತಿದೆ. ರಾಜಕೀಯವಾಗಿ ನಮ್ಮ ಕುಟುಂಬವನ್ನು ಮುಗಿಸಲೇಬೇಕು ಎಂದು ಈ ಸರಕಾರ ತೀರ್ಮಾನಕ್ಕೆ ಬಂದಿದೆ. ಅದು ಆಡಿಯೋ ಟೇಪುಗಳಲ್ಲಿಯೇ ಬಯಲಾಗಿದೆ. ಹೀಗಾಗಿ ನಮ್ಮ ಕುಟುಂಬದ ಎಲ್ಲರ ಮೊಬೈಲ್ ಫೋನ್ ಗಳನ್ನು ಸರಕಾರ ಕದ್ದಾಲಿಕೆ ಮಾಡಿಸುತ್ತಿದೆ. ಯಾರನ್ನೂ ಇವರು ಬಿಟ್ಟಿಲ್ಲ, ಎಲ್ಲರ ಫೋನ್ ಟ್ಯಾಪ್ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ನಾಶ ಮಾಡುವುದಕ್ಕೆ ಈ ಸರಕಾರದಲ್ಲಿರುವ ʼಸೀಡಿ ಶಿವುʼ ಸಂಚು ರೂಪಿಸಿರುವುದು ದೃಢಪಟ್ಟಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.
ಇಡೀ ಸಂಚಿನ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಾಯಿತಲ್ಲ, ಮೊಬೈಲ್ ಸಂಭಾಷಣೆಯಲ್ಲಿ ಎಲ್ಲವೂ ಬಯಲಾಗಿದೆ ಡಿ.ಕೆ.ಶಿವಕುಮಾರ್, ಎಲ್.ಆರ್.ಶಿವರಾಮೇಗೌಡ, ದೇವರಾಜೇಗೌಡ ನಡಿವಿನ ಸಂಭಾಷಣೆ ಆಡಿಯೋ ಲೀಕ್ ಆಗಿದೆ. ಸಂಚು ರೂಪಿಸಿರುವ ಶಿವರಾಮೇಗೌಡ, ಡಿ.ಕೆ.ಶಿವಕುಮಾರ್ ಮೇಲೆ ಕೂಡಲೇ ಪ್ರಕರಣ ದಾಖಲಿಸಿ, ವಿಚಾರಣೆಗೆ ಒಳಪಡಿಸಿ ಎಂದು ಗೃಹ ಡಾ.ಜಿ.ಪರಮೇಶ್ವರ್ ಅವರನ್ನು ಅವರು ಒತ್ತಾಯ ಮಾಡಿದರು
ಸೀಡಿ ಶಿವು ಅವರು ಪೆನ್ʼಡ್ರೈವುಗಳನ್ನು ಸೃಷ್ಟಿ ಮಾಡುವುದರಲ್ಲಿ ಇವರು ಎಕ್ಸ್ʼಪರ್ಟ್. ನಾನು ಬರೀ ಸಿನಿಮಾ ಹಂಚಿಕೆದಾರ. ಆದರೆ ಇವರ ಹಂಚಿಕೆಯೇ ಬೇರೆ. ಮೊದಲಿನಿಂದಲೂ ಅವರು ಅದನ್ನೇ ಮಾಡಿಕೊಂಡು ಬಂದರು. ಅವರ ಪಕ್ಷದ ಶಾಸಕನೊಬ್ಬ, ಪೆನ್ ಡ್ರೈವುಗಳ ಹಿಂದೆ ದೊಡ್ಡ ತಿಮಿಂಗಿಲ ಇದೆ ಎಂದು ಹೇಳಿದ್ದರಲ್ಲವೇ? ನಾನೆಲ್ಲಿ ಹೇಳಿದ್ದೆ ಪರಮೇಶ್ವರ್ ಅವರೇ. SIT ತನಿಖೆ ಪಾರದರ್ಶಕವಾಗಿದ್ದರೆ ಇವರಿಬ್ಬರ ಮೇಲೆ ಕೇಸ್ ಹಾಕಲಿ ಎಂದು ಕುಮಾರಸ್ವಾಮಿ ಅವರು ಸವಾಲು ಹಾಕಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು; ನಮ್ಮ ಕುಟುಂಬದ ಬಗ್ಗೆ ಅವರು ಏನೆಲ್ಲಾ ಷಡ್ಯಂತ್ರ್ಯ ನಡೆಸಿದ್ದಾರೆ ಎನ್ನುವುದು ಈ ಸಂಭಾಷಣೆಯ ಮೂಲಕ ಜಗಜ್ಜಾಹೀರು ಆಗಿದೆ ಎಂದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications