ವಿಧಾನಸೌಧದಲ್ಲಿ ಕುಮಾರಸ್ವಾಮಿ, ಡಿ ಕೆ ಶಿವಕುಮಾರ್ ಮುಖಾಮುಖಿ; ಮುಂದೆ ಆಗಿದ್ದೇನು?
ಬೆಂಗಳೂರು, ಜೂನ್ 03: ಹಾಸನ ಹಾಲಿ ಸಂಸದ ಹಾಗೂ ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸದ್ದು ಮಾಡಿದ್ದು, ಈ ಪ್ರಕರಣದ ರೂವಾರಿ ಮಹಾನಾಯಕ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ಅವರು ಪರೋಕ್ಷವಾಗಿ ಡಿ ಕೆ ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣದಿಂದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಕುಟುಂಬಸ್ಥರು ಹಾಗೂ ಜೆಡಿಎಸ್ ಕಾರ್ಯಕರ್ತರು ತೀವ್ರ ಮುಜುಗರವನ್ನ ಅನುಭವಿಸಿದ್ದು, ಈ ಪ್ರಕರಣದ ರೂವಾರಿಗೂ ಶಿಕ್ಷೆಯಾಗಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಕಿಡಿಕಾರಿದ್ರು. ಇದೀಗ ಈ ಪ್ರಕರಣದ ಕುರಿತು ಎಸ್ ಐಟಿ ಅಧಿಕಾರಿಗಳು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನ ವಿಚಾರಣೆ ಒಳಪಡಿಸಿದ್ದು, ಬಹುದಿನಗಳ ನಂತರ ಡಿ ಕೆ ಶಿವಕುಮಾರ್ ಹಾಗೂ ಹೆಚ್ ಡಿ ಕುಮಾರಸ್ವಾಮಿ ಅವರು ಮುಖಮುಖಿಯಾಗಿದ್ದಾರೆ.

ಹಾಸನ ಪೆನ್ ಡ್ರೈವ್ ವಿವಾದಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವೈಯಕ್ತಿಕವಾಗಿ ಆರೋಪ ಪ್ರತ್ಯಾರೋಪ ಮಾಡಿದ್ದರು. ಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಪಾತ್ರ ಇದೆ ಎಂದು ಕುಮಾರಸ್ವಾಮಿ ನೇರ ಆರೋಪ ಮಾಡಿದ್ದರು. ಕುಮಾರಸ್ವಾಮಿ ಅವರ ಈ ಆರೋಪವನ್ನ ಡಿ ಕೆ ಶಿವಕುಮಾರ್ ಅವರು ತಳ್ಳಿಹಾಕಿದ್ರು ಸಹ ಇಬ್ಬರು ನಾಯಕರ ನಡುವೆ ಪದೇ ಪದೇ ವೈಯುಕ್ತಿಕ ನೆಲೆಯಲ್ಲಿ ವಾಗ್ದಾಳಿ ನಡೆಸಿತ್ತಿದ್ರು, ಈ ನಡುವೆ ವಿಧಾನಸೌಧದಲ್ಲಿ ಮಾಜಿ ಸಿಎಂ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಪರಸ್ಪರ ಎದುರುಬದುರಾದರು ಉಭಯ ನಾಯಕರು ಕನಿಷ್ಠ ಮುಖವನ್ನು ನೋಡದೆ ಇರುವುದು ಕುತೂಹಲಕ್ಕೆ ಕಾರಣವಾಗಿದೆ.
ಪದೇ ಪದೇ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿದ್ದು, ಈ ಪರಿಣಾಮ ಏನು ಎಂಬುದು ಉಭಯ ನಾಯಕರ ನಡವಳಿಕೆಯಲ್ಲಿ ಬಹಿರಂಗವಾಗಿದೆ. ಕುಮಾರಸ್ವಾಮಿ ಹಾಗೂ ಡಿ ಕೆ ಶಿವಕುಮಾರ್ ಅವರು ಮುಖಮುಖಿಯಾದರೂ ಸಹ ಡಿಕೆ ಶಿವಕುಮಾರ್ ಮುಖವನ್ನು ನೋಡದ ಎಚ್ ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ಅವರಿಗೆ ನಮಸ್ಕರಿಸಿದರು.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಚುನಾವಣಾಧಿಕಾರಿ ಕಚೇರಿಯಿಂದ ನಾಮ ಪತ್ರ ಪ್ರಕ್ರಿಯೆ ಮುಗಿಸಿ ವಾಪಸ್ ಆದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಎದುರಾದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪರಸ್ಪರ ಮುಖಮುಖಿಯಾದಾಗ ಪರಸ್ಪರ ನಮಸ್ಕರಿಸಿದರು.












Click it and Unblock the Notifications