Prajwal Case: ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ SIT; ಏನಿದು ನೋಟಿಸ್?
ಬೆಂಗಳೂರು, ಮೇ 02 : ಹಾಸನದಲ್ಲಿ ಭಾರೀ ಸದ್ದು ಮಾಡಿರುವ ಲೈಂಗಿಕ ದೌರ್ಜನ್ಯಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಸದ್ಯ ತಲೆಮರೆಸಿಕೊಂಡಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವರಾದ ಎಚ್.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ. ಅಲ್ಲದೇ ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದ್ದು, ಎಸ್ಐಟಿ ತಂಡ ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ.

ಇತ್ತ ಸಾವಿರಾರು ಮಹಿಳೆಯರ ಬದುಕಿಗೆ ನ್ಯಾಯ ಬೇಕು ಎಂದು ಕಾಂಗ್ರೆಸ್ ಕಿಡಿಕಾರರಿದೆ. ಇನ್ನೂ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಹಾಗೂ ಅವರ ಮಗ ಪ್ರಜ್ವಲ್ ಆರೋಪಿಗಳಾಗಿದ್ದಾರೆ. ಇನ್ನೂ ಏಪ್ರಿಲ್ 26 ರಂದು ಮತದಾನದ ಬಳಿಕ ಅಂದರೆ ಈ ಪ್ರಕರಣ ದಾಖಲಾಗುವ ಮುನ್ನವೇ ಪ್ರಜ್ವಲ್ ರೇವಣ್ಣ ದೇಶದಿಂದ ಪರಾರಿಯಾಗಿದ್ದಾರೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ನೋಟಿಸ್ ನೀಡಿದರೂ ಹಾಜರಾಗಿಲ್ಲ.
ಇನ್ನೂ ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಜರ್ಮನ್ ನಲ್ಲಿದ್ದಾರೆ ಎಂದು ಸ್ಐಟಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಪ್ರಜ್ವಲ್ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಜಾರಿ ಮಾಡಿ, ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ. ಎಸ್ಐಟಿ ನೀಡಿದ ಲುಕ್‌ಔಟ್ ನೋಟಿಸ್ ಬಳಿಕವೂ ಪ್ರಜ್ವಲ್ ರೇವಣ್ಣ ಪತ್ತೆಯಾಗದಿದ್ದರೆ, ಅವರ ಪತ್ತೆಗೆ ಕೋರ್ಟ್‌ನಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪ್ರಜ್ವಲ್ ರೇವಣ್ಣ ಅವರು ಈ ಹಿಂದೆ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲ ಮನವಿ ಮಾಡಿದ್ದು, ತಮ್ಮ ವಕೀಲ ಅರುಣ್ ಜಿ ಮೂಲಕ ಮನವಿ ಸಲ್ಲಿಸಿದ್ದಾರೆ. ವರದಿಗಳ ಪ್ರಕಾರ, ಪ್ರಜ್ವಲ್ ರೇವಣ್ಣ ಅವರು ಕಾಯ್ದಿರಿಸಿದ ಕಾರಣ ಮೇ 15 ರಂದು ಭಾರತಕ್ಕೆ ಮರಳುವ ನಿರೀಕ್ಷೆಯಿದೆ.
ಲುಕ್ ಔಟ್ ನೋಟಿಸ್ ಎಂದರೇನು?
ತಲೆಮರೆಸಿಕೊಂಡಿರುವ ಅಥವಾ ಕಾನೂನು ಜಾರಿ ಸಂಸ್ಥೆಗಳಿಗೆ ಬೇಕಾಗಿರುವ ವ್ಯಕ್ತಿಯು ದೇಶವನ್ನು ತೊರೆಯಲು ಸಾಧ್ಯವಾಗಂತೆ ಖಚಿತಪಡಿಸಿಕೊಳ್ಳಲು ಎಲ್ಒಸಿ ನೀಡಲಾಗುತ್ತದೆ. ಲುಕ್ ಔಟ್ ನೋಟಿಸ್ ಹೆಚ್ಚಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ಬಂದರುಗಳಲ್ಲಿನ ವಲಸೆ ತಪಾಸಣಾ ಕೇಂದ್ರಗಳಲ್ಲಿ ತಪಾಸಣೆಗೆ ಬಳಸಲಾಗುತ್ತದೆ. ಇನ್ನೂ ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಈಗಾಗಲೇ ಜರ್ಮನಿಯಲ್ಲಿದ್ದು, ವಿಮಾನ ನಿಲ್ದಾಣದಲ್ಲಿ ಮರಳುವ ಹೊತ್ತಿಗೆ ಬಂಧಿಸಲು ಚಿಂತಿಸಲಾಗಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ಈ ಮೂಲಕ ಎಸ್ ಐ ಟಿ ಲುಕ್ ನೋಟಿಸ್ ಜಾರಿ ಮಾಡಿರುವುದು ಜೆಡಿಎಸ್ ಹಾಗೂ ಬಿಜೆಪಿಗೆ ಮುಜುಗರ ಸೃಷ್ಟಿಸುವ ತಂತ್ರ ಎನ್ನಲಾಗಿದೆ.
ಪ್ರಜ್ವಲ್ ರೇವಣ್ಣ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಏಪ್ರಿಲ್ 27-28ರಂದು ರಾತ್ರೋರಾತ್ರಿ ಬೆಂಗಳೂರಿನಿಂದ ಜರ್ಮನಿಗೆ ತೆರಳಿದ್ದಾರೆ. ಆಪಾದಿತ ಲೈಂಗಿಕ ಹಗರಣದ ತನಿಖೆಗೆ ಎಸ್‌ಐಟಿಯನ್ನು ಸ್ಥಾಪಿಸುವ ಕೆಲವೇ ಗಂಟೆಗಳ ಮೊದಲು ಪ್ರಜ್ವಲ್ ರೇವಣ್ಣ ಅವರು ಪರಾರಿಯಾಗಿದ್ದಾರೆ. ಮೇ 1ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಮಧ್ಯಪ್ರವೇಶಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಕೇಂದ್ರ ಸರ್ಕಾರದ ಕಚೇರಿಗಳನ್ನು ಬಳಸಿಕೊಂಡು ಪರಾರಿಯಾದ ಸಂಸದರನ್ನು ಭಾರತಕ್ಕೆ ಕರೆತರಲು ಖಚಿತಪಡಿಸಿಕೊಳ್ಳುವಂತೆ ಕೋರಿದ್ದರು.












Click it and Unblock the Notifications