ನಾನು ಹಿಂಗೆಲ್ಲ ಬದುಕಿಲ್ಲ ಬೇರೆ ರೂಂ ಕೊಡಿ: ಪ್ರಜ್ವಲ್ ರೇವಣ್ಣ ಮತ್ತೆ ಕಿರಿಕ್

ಬೆಂಗಳೂರು, ಜೂನ್‌ 02: ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣ ದೇಶಾದ್ಯಂತ ರಾಷ್ಟ್ರಮಟ್ಟದಲ್ಲೂ ಬಾರೀ ಸದ್ದು ಮಾಡಿದ್ದು, ಗುರುವಾರ ತಡರಾತ್ರಿ ಪ್ರಜ್ವಲ್‌ ಅವರನ್ನ ಎಸ್‌ ಐ ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸಂಸದ ಪ್ರಜ್ವಲ್ ರೇವಣ್ಣರನ್ನ ನ್ಯಾಯಾಲಯ ಆರು ದಿನಗಳ ಎಸ್‌ಐಟಿ ಕಸ್ಟಡಿಗೆ ನೀಡಿದ್ದು, ಎಸ್‌ ಐಟಿ ಅಧಿಕಾರಿಗಳ ಜೊತೆಗೆ ಪ್ರಜ್ವಲ್‌ ರೇವಣ್ಣ ಕಿರಿಕ್‌ ಮಾಡಿಕೊಂಡಿದ್ದಾರೆ.

ಈಗಾಗಲೇ ಪ್ರಜ್ವಲ್‌ ರೇವಣ್ಣ ಅವರನ್ನ ವಿಚಾರಣೆಗೆ ಒಳಪಡಿಸಿರುವ ಎಸ್‌ ಐಟಿ ಅಧಿಕಾರಗಳ ಜೊತೆಗೆ ಮೊದಲ ದಿನವೇ ಕಿರಿಕ್‌ ಮಾಡಿಕೊಂಡಿದ್ದಾರೆ. ಎಸ್‌ಐಟಿ ಕಚೇರಿಯಲ್ಲಿ ಶೌಚಾಲಯ, ಕೊಠಡಿ ಶುಚಿಯಾಗಿಲ್ಲ, ಕೆಟ್ಟ ವಾಸನೆ ಬರುತ್ತಿದೆ. ಎಸ್‌ಐಟಿ ಕಚೇರಿಯಲ್ಲಿ ಉಸಿರಾಡಲು ಕಷ್ಟವಾಗಿದೆ ಎಂದು ನ್ಯಾಯದೀಶರ ಮುಂದೆ ಗೋಳು ತೋಡಿಕೊಂಡಿದ್ದ ಪ್ರಜ್ವಲ್. ಇದೀಗ ಮತ್ತೆ ಎಸ್‌ಐಟಿ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ.

Prajwal Case Room And Toilet Not Clean MP Prajwal Revanna Kirik With SIT Officials

ಸಾಮಾನ್ಯರಿಗೆ ನೀಡುವಂತಹ ಕೊಠಡಿ ನೀಡಿರುವ ಹಿನ್ನೆಲೆ ಟಾಯ್ಲೆಟ್ ಹಾಗೂ ರೂಮ್ ವಿಚಾರವಾಗಿ ಮತ್ತೆ ಕಿರಿಕ್ ಮಾಡಿದ್ದಾರೆ. 'ನಾನು ಹಿಂಗೆಲ್ಲ ಬದುಕಿಲ್ಲ. ನನಗೆ ಸರಿಯಾದ ಟಾಯ್ಲೆಟ್ ಹಾಗೂ ಮಲಗಲು ರೂಂ ಕೊಡಿ ಎಂದು ಸಂಸದ ಪ್ರಜ್ವಲ್ ರೇವಣ್ಣ ಎಂದಿದ್ದಾರೆ.

ಇನ್ನೂ ಹಾಸನ ಸಂಸದ ಹಾಗೂ ಆರೋಪಿ ಪ್ರಜ್ವಲ್‌ ರೇವಣ್ಣ ಅವರ ಮನವಿಗೆ ಎಸ್‌ ಐ ಟಿ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಯಾವುದೇ ಆರೋಪಿಗಳಿಗಾದರೂ ಅದೇ ರೂಂ, ಅದೇ ಟಾಯ್ಲೆಟ್. ನಿಮ್ಮ ತಂದೆಗೆ ಸಹ ಇದೇ ರೂಂ, ಇದೇ ಟಾಯ್ಲೆಟ್ ಕೊಟ್ಟಿರುವುದಾಗಿ ಹೇಳಿದ್ದಾರೆ. ಇದೇ ವೇಳೆ ಕೆಟ್ಟ ವಾಸನೆ ಬರುತ್ತಿದೆ ಉಸಿರಾಡುವುದು ಕಷ್ಟವಾಗ್ತಿದೆ ಎಂದು ಪ್ರಜ್ವಲ್‌ ರೇವಣ್ಣ ಹೇಳಿದ್ದಾರೆ ಎನ್ನಲಾಗಿದೆ. ನ್ಯಾಯಾಲಯದಲ್ಲಿ ವಾದ ನಡೆದ ವೇಳೆ ವಕೀಲ, ಆರೋಪಿಗೆ ಯಾವುದೇ ಐಷಾರಾಮಿ ವ್ಯವಸ್ಥೆ ಬೇಡ, ಸಾಮಾನ್ಯ ಕೈದಿ ಇರುವಂತೆ ಸಾಮಾನ್ಯ ಕೊಠಡಿಯಲ್ಲಿರಲಿ ಎಂದಿದ್ದರು. ಹೀಗಾಗಿ ಎಸ್‌ ಐಟಿ ಅಧಿಕಾರಿಗಳು ಹಾಸನ ಹಾಲಿ ಸಂಸದ ಹಾಗೂ ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರಿಗೆ ಸಾಮಾನ್ಯರಂತೆ ಪ್ರಜ್ವಲ್‌ ಗೂ ಕೊಠಡಿಯನ್ನ ಎಸ್‌ ಐ ಟಿ ಅಧಿಕಾರಿಗಳು ನೀಡಿದ್ದಾರೆ.

ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ಪಕ್ಷದ ವರಿಷ್ಠರಾದ ಹೆಚ್‌ ಡಿ ದೇವೇಗೌಡರ ಮೊಮ್ಮಗನಾದ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಹುಟ್ಟಿನಿಂದಲೂ ಐಷಾರಾಮಿ ಜೀವನಶೈಲಿಯನ್ನ ರೂಢಿಸಿಕೊಂಡು ಬಂದಿದ್ದಾರೆ. ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದಿಂದಾಗಿ ಏಕಾಏಕಿ ಎಸಿ ಇಲ್ಲದ ಹಾಗೂ ಐಷಾರಾಮಿ ಜೀವನವನ್ನ ಕೈ ಬಿಟ್ಟು ಸಾಮಾನ್ಯ ಕೊಠಡಿಯಲ್ಲಿ ಇರುವಂತಹ ಪರಿಸ್ಥಿತಿ ಎದುರಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+