ಪ್ರಜ್ವಲ್ ವಿಡಿಯೋ ವೈರಲ್ ಮಾಡಿದ ನವೀನ್ ಗೌಡ ಯಾರು? ಈತನಿಗೂ ಆ ಪ್ರಭಾವಿ ನಾಯಕನಿಗೂ ಇರುವ ನಂಟೇನು?

ಹಾಸನ, ಮೇ 03: ದೇಶಾದ್ಯಂತ ಸದ್ದು ಮಾಡಿರುವ ಹಾಸನ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣನಿಗೆ ಸೇರಿದ್ದು ಎನ್ನಲಾದ ಅಶ್ಲೀಲ ಪೆನ್‌ಡ್ರೈವ್‌ ಮೂಲ ಯಾವುದು ಎಂದು ಎಸ್‌ಐಟಿ ಬೆನ್ನತ್ತಿದ ಹಿನ್ನೆಲೆ ಹಲವು ಆಯಾಮಗಳು ತೆರೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಇಬ್ಬರು ಕೂಡ ಪೆನ್‌ಡ್ರೈವ್‌ ಬಿಡುಗಡೆ ಮಾಡಿದ್ದು ನಾನಲ್ಲ ಎನ್ನುತ್ತಿದ್ದು, ಇದೀಗ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ.

ಹೌದು, ಲೋಕಸಭಾ ಚುನಾವಣೆಯ ಹೊತ್ತಲಿ ಪೆನ್ ಡ್ರೈವ್‌ನಲ್ಲಿದ್ದ ಅಶ್ಲೀಲ ವಿಡಿಯೊಗಳನ್ನು ವೈರಲ್ ಮಾಡಿದ್ದು ಯಾರೆಂಬುದು ಇದೀಗ ಬಹಿರಂಗವಾಗಿದೆ. ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾಗಿರುವ ಈ ವಿಡಿಯೋವನ್ನ ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ ಅವರು ವೈರಲ್‌ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಈ ನವೀನ್‌ ಗೌಡ ಅವರು ಪ್ರಭಾವಿ ಸಚಿವ ಜಮೀರ್ ಅಹ್ಮದ್‌ ಖಾನ್ ಆಪ್ತ ಎಂದು ಹೇಳಲಾಗುತ್ತಿದೆ. ಈ ನಡುವೆ ಈ ಜಮೀರ್‌ ಜತೆಗೆ ನವೀನ್‌ ಗೌಡ ಇರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

Prajwal Case SIT Notice To Naveen Gowda Who Leaked Prajwa Revanna Sex Videos

ಇನ್ನೂ ಹಾಸನ ಹಾಲಿ ಸಂಸದ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ನವೀನ್ ಗೌಡ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದನು. ನಂತರ ಪ್ರಜ್ವಲ್ ರೇವಣ್ಣ ವೀಡಿಯೋ ನೋಡಲು ಈ ವಾಟ್ಸಾಪ್ ಚಾನಲ್ ಫಾಲೋ ಮಾಡಿ ಎಂದು ಪೋಸ್ಟ್ ಮಾಡಿದ್ದನು. ಇದನ್ನು ಗಮನಿಸಿದ್ದ ಜೆಡಿಎಸ್ ಪೋಸ್ಟ್ ನ ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡಿತ್ತು. ಈ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ನವೀನ್​ ಗೌಡ ಫೇಸ್ ಬುಕ್ ಅಕೌಂಟ್ ಡಿಲೀಟ್ ಮಾಡಿಕೊಂಡಿದ್ದಾನೆ. ಇದೀಗ ನವೀನ್ ಗೌಡನಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಎಸ್ಐಟಿಯಿಂದ ನವೀನ್‌ಗೌಡಗೆ ನೋಟೀಸ್

ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ನವೀನ್‌ ಗೌಡ ಅವರಿಗೆ ಎಸ್‌ ಐ ಟಿ ನೋಟಿಸ್‌ ನೀಡಿದೆ. ಮೇ 4 ರಂದು ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದು,ಖುದ್ದು ಎಸ್ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಈಗಾಗಲೇ ಫೋನ್‌ನಲ್ಲಿ ಪ್ರಾಥಮಿಕ ಮಾಹಿತಿ ನೀಡಿರುವ ನವೀನ್ ಗೌಡ ಅವರು ಪೆನ್‌ಡ್ರೈವ್ ಹಂಚಿಕೆ ಮಾಡಿದ್ದ ಎಂಬ ಆರೋಪ ಹೊತ್ತಿದ್ದಾರೆ.

ನವೀನ್‌ ಗೌಡ ವಿರುದ್ದ ಹಾಸನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ನವೀನ್‌ಗೌಡನನ್ನ ವಿಚಾರಣೆಗೆ ಕರೆದಿದ್ದು, ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ ವೇಳೆ ನಾನು ಪೆನ್‌ಡ್ರೈವ್ ಹಂಚಿಕೆ ಮಾಡಿಲ್ಲ ಎಂದು ನವೀನ್‌ಗೌಡ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+