ಸಿದ್ದರಾಮಯ್ಯ ಮಗನ ಸಾವಿನ ದಿನ ಏನೇನಾಯಿತು ಎಲ್ಲವು ಹೊರಬರಲಿದೆ: ಹೊಸ ಬಾಂಬ್‌ ಸಿಡಿಸಿದ ಕುಮಾರಸ್ವಾಮಿ

ಹುಬ್ಬಳ್ಳಿ, ಏಪ್ರಿಲ್‌ 30: ಸಂಸದ ಜೆಡಿಎಸ್‌ ಮುಖಂಡ ಮಾಜಿಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೂ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಮಗನ ಕುರಿತು ಹೊಸ ಬಾಂಬ್‌ ಸಿಡಿಸಿದ್ದಾರೆ.

ಹೌದು, ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲ ದಾಖಲೆಗಳನ್ನು ನಾವು ಹೊರಗಡೆ ತರುತ್ತೇವೆ. ನಿಮ್ಮ ಕುಟುಂಬದಲ್ಲಿ ನಡೆದ ಘಟನೆ ಏನೇನಾಯಿತು ಎಲ್ಲವೂ ಹೊರಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದರು.

Prajwal Revanna Case HD Kumaraswamy Hits At Siddaramaiah And DK Shivakumar

ನಮ್ಮ ಮನೆಯ ಎದುರು ಏಕೆ ಪ್ರತಿಭಟನೆ ಮಾಡುತ್ತೀರಿ. ಇದನ್ನು ಇಷ್ಟಕ್ಕೆ ಬಿಡಲ್ಲ. ಎಲ್ಲ ವಿಷಯವೂ ತನಿಖೆಯಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿದ ‌ಎಚ್‌.ಡಿ. ಕುಮಾರಸ್ವಾಮಿ, ಇದರ ಹಿಂದೆ ಮಹಾನ್ ನಾಯಕರ ಕೈವಾಡವಿದೆ. 2012 ರಲ್ಲಿ ನಡೆದ ಪ್ರಕರಣಕ್ಕೆ ಜೀವ ಕೊಟ್ಟವರು ಮಹಾನ್ ನಾಯಕ. ಮಹಿಳೆಯರ ಬಗ್ಗೆ ಮಾತಾಡೋ ಮಹಾನ್ ನಾಯಕನಿಂದ ಮಾನ ಹರಾಜು ಆಗಿದೆ . ಕಾಂಗ್ರೆಸ್‌ನವರು ನಮ್ಮ ಮನೆ ಬಳಿ ಬಂದು ಪ್ರತಿಭಟಿಸುತ್ತಿದ್ದಾರೆ. ಮಹಾನುಭಾವನ ಡಿಸಿಎಂ ಡಿ.ಕೆ. ಶಿವಕುಮಾರ್‌ ಮನೆ ಬಳಿ ಹೋಗಿ ಪ್ರತಿಭಟನೆ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಚ್‌.ಡಿ. ರೇವಣ್ಣ ಕುಟುಂಬದ ವಿಷಯ ಕೆದಕಿದರೆ ನಾನು ಚರ್ಚೆ ಮಾಡಲು ಸಿದ್ಧ. ಪಲಾಯಾನ ಮಾಡುವುದಿಲ್ಲ. ಕಾಂಗ್ರೆಸ್‌ ನಾಯಕ ಮಹಾಪರಾಧ ಮಾಡಿದ್ದಾನೆ. ಎಷ್ಟು ತಿಂಗಳ ಹಿಂದೆ ಆ ಮಹಾನ್‌ ನಾಯಕನಿಗೆ ಗೊತ್ತಿತ್ತು. ಪೆನ್‌ಡ್ರೈವ್‌ ಯಾರು ಸರಬರಾಜು ಮಾಡಿದರು ಎಲ್ಲವೂ ಗೊತ್ತಿದೆ. ಈ ಮಹಾನ್‌ ನಾಯಕನ ನಡವಳಿಕೆಯ ಬಗ್ಗೆಯೂ ಚರ್ಚಿಸೋಣ. ನಿನ್ನೆ ಹಾಸನ ಜಿಲ್ಲಾಧಿಕಾರಿ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸರ್ಕಾರದ ಹುನ್ನಾರ ಅಡಗಿದೆ ಎಂದು ಕಿಡಿಕಾರಿದರು.

ಹಾಸನ ಸಂಸದ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಎನ್ ಡಿ ಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಮೇಲೆ ರಾಸಲೀಲೆ ವಿಡಿಯೋ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರ‌ಮೇಲೆ ಆರೋಪ ಸಾಬೀತಾಗಿದರೆ ಶಾಶ್ವತವಾಗಿ ಅಮಾಮತ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಸಂಸದ ಪ್ರಜ್ವಲ್ ರೇವಣ್ಣ ಉಚ್ಛಾಟನೆ ಎಷ್ಟು ವರ್ಷ ಕಾಲ ಮಾಡಬೇಕು. ಏನು ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಎಲ್ಲಿಂದ ಬಿಡುಗಡೆ ಆಯಿತು. ರಾಜ್ಯ ‌ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಯಾವ ಆಧಾರ ಮೇಲೆ ಎಸ್ ಐಟಿ ತನಿಖೆ ಎಂದರು ಈ ಬಗ್ಗೆ ಸ್ಪಷ್ಟವಾಗಿ ಹೇಳಬೇಕು.

ಇನ್ನು ನನ್ನ ಮನೆ ಮುಂದೆ ಸಹ ಕೆಲವರು ಪ್ರತಿಭಟನೆ ಸಹ ಮಾಡಿದರು ಈ ಪ್ರಕರಣಕ್ಕೋ ನನಗೂ ಯಾವುದೇ ಸಂಬಂಧ ಇಲ್ಲ. ಆದ್ದರಿಂದ ಯಾಕೆ ಅಂತಾ ಕೇಳಯಾ ಇದ್ದೇನೆ. ಇನ್ನು ರಾಸಲೀಲೆ ವಿಡಿಯೋ ದಲ್ಲಿ ಪಾಪ ಮಹಿಳೆಯರ ಮುಖ ಸಹ ಬ್ಲರ್ಬ್ ಮಾಡಬೇಕಿತ್ತು ಅದನ್ನ ಬಿಟ್ಟು ನೇರವಾಗಿ ಹರಿ ಬಿಟ್ಟಿದ್ದಾರೆ. ಮಹಿಳೆಯರ ಬಗ್ಗೆ ಇವರಿಗೆ ಇಷ್ಟೇನಾ ಅಂತಾ ಗೌರವ. ನೋಡೋಣ ಯಾರ ಬಗ್ಗೆ ಏನಾಗುತ್ತದೇ ನೋಡೋಣ ಎಂದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+