ಬೆಳಗ್ಗೆಯಿಂದಲೇ ಮನೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಹೆಚ್ ಡಿ ರೇವಣ್ಣ : ಕೊನೆಗೂ ಪಲಿಸದ ಪೂಜೆ
ಹಾಸನ, ಆಗಸ್ಟ್ 02: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಕುಟುಂಬಕ್ಕೆ ಬಿಗ್ ಶಾಕ್ ಎದುರಾಗಿದೆ. ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಪುತ್ರ ಹಾಗೂ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂಬುದು ಸಾಬೀತಾಗಿದ್ದು, ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ ಹಾಗೂ 11 ಲಕ್ಷ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.
ಶುಕ್ರವಾರವೇ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂಬುದು ಸಾಬೀತಾಗಿದ ಹಿನ್ನೆಲೆ ಶಿಕ್ಷೆಯ ಪ್ರಮಾಣ ಕಡಿಮೆಯಾಗಲಿ ಎಂದು ಪ್ರಜ್ವಲ್ ರೇವಣ್ಣ ಅವರ ತಂದೆ ಹೆಚ್ ಡಿ ರೇವಣ್ಣ ಅವರು ತಮ್ಮ ಮನೆ ದೇವರಿಗೆ ಬೆಳಿಗ್ಗೆಯಿಂದಲೇ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಹೊಳೆನರಸೀಪುರದ ತಮ್ಮ ನಿವಾಸದಲ್ಲಿ ಆಗ್ನಿಕುಂಡ ನಿರ್ಮಿಸಿ ಮನೆ ದೇವರಿಗೆ ಹೋಮ ಹಾಗೂ ವಿಶೇಷ ಪೂಜೆ ನೆರವೇರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ಎರಡು ವರ್ಷದಿಂದ ಹೆಚ್ ಡಿ ರೇವಣ್ಣ ಅವರ ಕುಟುಂಬವು ಕೆಲವು ಸಂಕಷ್ಟಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ದುಃಖದಿಂದ ಪಾರಾಗಲು ಧಾರ್ಮಿಕ ವಿಧಿವಿಧಾನಗಳಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ತೊಡಗಿಕೊಂಡಿದ್ದಾರೆ. ಬೆಳಗ್ಗೆ 4.30ರಿಂದ 6 ಗಂಟೆವರೆಗೆ ಹತ್ತಿರದ ದೇವಾಲಯದಲ್ಲಿಯೂ ವಿಶೇಷ ಪೂಜೆ ನಡೆಸಿದ್ದು, . ಪೂಜಾ ಮನೆ ದೇವರಿಗೂ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಜ್ವಲ್ ಗೆ ಈಗಾಗಲೇ ದೋಷಿ ಎಂದು ನ್ಯಾಯಾಲಯ ತಿಳಿಸಿತ್ತು. ಶಿಕ್ಷೆ ಆಗುವುದಂತೂ ಗ್ಯಾರಂಟಿ ಇತ್ತು. ಆದರೆ ಶಿಕ್ಷೆಯ ಪ್ರಮಾಣ ಕಡಿಮೆಯಾಗಲಿ ಎಂದು ಹೆಚ್ ಡಿ ರೇವಣ್ಣ ಅವರು ದೇವರ ಮೊರೆ ಹೋಗಿದ್ರು. ಆದರೆ, ಕೊನೆಗೂ ಹೆಚ್ ಡಿ ರೇವಣ್ಣ ಅವರ ಪೂಜೆ ಪಲಿಸದಂತಾಗಿದೆ.
ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆ ನೋಡಿ ಕಣ್ಣೀರಿಟ್ಟ ಎಚ್‌ಡಿ ದೇವೇಗೌಡ!
ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಪುತ್ರ ಹಾಗೂ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂಬುದು ಸಾಬೀತಾಗಿದ್ದು, ಅತ್ಯಾಚಾರ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಜ್ವಲ್ ರೇವಣ್ಣಗೆ ನ್ಯಾಯಾಧೀಶರು ಶಿಕ್ಷೆಯ ಪ್ರಮಾಣ ಓದಿ ತಿಳಿಸುತ್ತಿದ್ದರೆ, ಇನ್ನೊಂದೆಡೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಮಧ್ಯಾಹ್ನದಿಂದಲೇ ಟಿವಿಯ ಎದುರು ಕಣ್ಣೀರಿಟ್ಟ ಕುಳಿತಿದ್ದರು.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತಿಳಿಸಿತ್ತು. ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟ ಮಾಡಲಾಗಿದೆ. ಕೋರ್ಟ್‌ನಲ್ಲಿ ಶಿಕ್ಷೆಯ ಪ್ರಮಾಣ ಪ್ರಕಟ ಆಗುತ್ತಿರುವಂತೆಯೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಗಳಗಳನೆ ಕಣ್ಣೀರಿಟ್ಟಿದ್ದಾರೆ.












Click it and Unblock the Notifications