Prajwal Revanna Case: ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: ವಾದಿಸಲು ವಿಶೇಷ ಅಭಿಯೋಜಕರನ್ನ ನೇಮಿಸಿದ ಸರ್ಕಾರ
ಬೆಂಗಳೂರು, ಮೇ 01: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎಸ್ಐಟಿ ತಂಡ ತನಿಖೆಯನ್ನಯ ಚುರುಕುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದಿಸಲು ವಿಶೇಷ ಅಭಿಯೋಜಕರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೌದು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಾದಿಸಲು ವಿಶೇಷ ಅಭಿಯೋಜಕರನ್ನಾಗಿ ಎನ್.ಜಗದೀಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿಂತೆ ಕಾಂಗ್ರೆಸ್ ನಾಯಕರ ಟೀಕೆ ಟಿಪ್ಪಣಿಗಳು ಜೋರಾಗಿದ್ದು, ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಾದಿಸಲು ವಿಶೇಷ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ. ಇನ್ನೂ ಎನ್.ಜಗದೀಶ್ ಅವರು ಸದ್ಯ ಹಾಲಿ ಹೆಚ್ಚುವರಿ ರಾಜ್ಯ ಅಭಿಯೋಜಕರಾಗಿದ್ದಾರೆ
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ತಂದೆ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧವೂ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ 354 A, 354 D, 509 ಅಡಿ ಪ್ರಕರಣ ದಾಖಲಾಗಿದ್ದು, ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಆರೋಪಿ ನಂಬರ್1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ. ಇನ್ನೂ ಈ ಪ್ರಕರಣಕ್ಕೆ ಕುರಿತು ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದ್ದು, ಎಸ್ಐಟಿ ತಂಡ ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ.












Click it and Unblock the Notifications