ಜೆಡಿಎಸ್‌ ನಿಂದ ಪ್ರಜ್ವಲ್ ರೇವಣ್ಣ ಅಮಾನತು: ಕೋರ್‌ ಕಮಿಟಿ ಸಭೆಯಲ್ಲಿ ನಿರ್ಧಾರ

ಹುಬ್ಬಳ್ಳಿ,ಏಪ್ರಿಲ್‌ 30: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಜೆಡಿಎಸ್ ನಿಂದ ಅಮಾನತು ಮಾಡಿ ಅಧಿಕೃತವಾಗಿ ಜೆಡಿಎಸ್ ರಾಜ್ಯ ಘಟಕ ಆದೇಶ ಹೊರಡಿಸಿದೆ.

ಹೌದು, ಮಂಗಳವಾರ ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಶಾಸಕ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಪಕ್ಷದಿಂದ ಅಮಾನತು ಮಾಡಲು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.

Prajwal Revanna Case Prajwal Revanna suspended from JDS party

ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಕೋರ್‌ ಕಮಿಟಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಇನ್ನೂ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಸೋಮವಾರ ಹೇಳಿಕೆ ನೀಡಿದ್ದರು. ಆದರೆ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಅಮಾನತ್ತು ಆದೇಶ ಪ್ರತಿಯಲ್ಲಿ ಏನಿದೆ?

ಹಾಸನ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀ ಪ್ರಜ್ವಲ್ ರೇವಣ್ಣನವರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಪಕ್ಷದ ಘನತೆ ಮತ್ತು ಗೌರವಗಳಿಗೆ ಹಾಗೂ ಮುಖಂಡತ್ವಕ್ಕೆ ಸಾಕಷ್ಟು ಧಕ್ಕೆ ಉಂಟಾಗಿರುತ್ತದೆ.

Prajwal Revanna Case Prajwal Revanna suspended from JDS party

ಮುಂದುವರೆದು, ರಾಜ್ಯದಲ್ಲಿನ ಪ್ರಸ್ತುತ ಕಾಂಗ್ರೆಸ್ ಸರ್ಕಾರ ಮಹಿಳೆಯರ ಮೇಲೆ ಎಸಗಿದೆ ಎಂದು ಹೇಳಲಾಗಿರುವ ಚಿತ್ರಗಳು ಮತ್ತು ವಿಡಿಯೋಗಳ ಬಗ್ಗೆ ತನಿಖೆ ನಡೆಸಲು ಒಂದು ವಿಶೇಷ ತನಿಖಾದಳ (Special Investigation Team- SIT) ರಚಿಸಿದೆ ಮತ್ತು ಈ ತನಿಖಾದಳ ಈಗಾಗಲೇ ತನ್ನ ಕಾರ್ಯಗಳನ್ನು ಪ್ರಾರಂಭಿಸಿದೆ.

ಈ ಹಿನ್ನೆಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನ ಮತ್ತು ನಿಯಮಾವಳಿಗಳ ಅಡಿಯಲ್ಲಿ Article XXII-Breach of Discipline-4 ಹಾಗೂ Punishment-6 ರನ್ವಯ ಹಾಸನ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀ ಪ್ರಜ್ವಲ್ ರೇವಣ್ಣರವರನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತ್ತುಗೊಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+