Prajwal Revanna: ಪ್ರಜ್ವಲ್‌ ರೇವಣ್ಣಗೆ ಶಾಕ್‌; ಅತ್ಯಾಚಾರ ಕೇಸ್‌ನಲ್ಲಿ ದೋಷಿ ಎಂದು ಕೋರ್ಟ್‌ನಿಂದ ತೀರ್ಪು!

ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಕೇಸ್‌ನಲ್ಲಿ ಜೈಲು ಸೇರಿರುವ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಮೇಲಿನ ಒಟ್ಟು ನಾಲ್ಕು ಕೇಸ್‌ಗಳ ಪೈಕಿ ಒಂದು ಕೇಸ್‌ನ ತೀರ್ಪು ಇಂದು ಪ್ರಕಟವಾಗಿದೆ. ಪ್ರಜ್ವಲ್‌ ರೇವಣ್ಣಗೆ ಮತ್ತೆ ಕೋರ್ಟ್‌ ಶಾಕ್‌ ನೀಡಿದ್ದು, ಅತ್ಯಾಚಾರ ಕೇಸ್‌ನಲ್ಲಿ ದೋಷಿ ಎಂದು ತೀರ್ಪು ನೀಡಿದೆ. ಅಲ್ಲದೆ ನಾಳೆ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ಹೇಳಿದೆ. ಕಳೆದ 14 ತಿಂಗಳಿಂದ ಪ್ರಜ್ವಲ್‌ ರೇವಣ್ಣ ಜೈಲಿನಲ್ಲೇ ಇದ್ದು, ಹಲವು ಬಾರಿ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರಜ್ವಲ್‌ಗೆ ಪ್ರತಿ ಬಾರಿ ಹಿನ್ನಡೆಯಾಗಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ ಮಹತ್ವದ ತೀರ್ಪು ಪ್ರಕಟವಾಗಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮನೆಕೆಲಸದ ಮಹಿಳೆ ಮೇಲೆ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಬಂದಿಸಲಾಗಿತ್ತು. ಈ ಕೇಸ್‌ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಆದೇಶವನ್ನು ಕಾಯ್ದಿರಿಸಿದ್ದರು. ತೀರ್ಪು ಪ್ರಕಟಿಸುವ ಮುನ್ನ ಎರಡೂ ಕಡೆಯ ವಕೀಲರಿಂದ ಕೆಲವು ಸ್ಪಷ್ಟೀಕರಣ ಕೇಳಿದ್ದರು. ಮುಖ್ಯವಾಗಿ ಗೂಗಲ್ ಮ್ಯಾಪ್ ಅನ್ನು ಸಾಕ್ಷಿಯಾಗಿ ಪರಿಗಣಿಸಿಸಬಹುದೇ? ಎಂದು ಕೇಳಿದ್ದರು. ಬಳಿಕ ಶುಕ್ರವಾರಕ್ಕೆ (ಆಗಸ್ಟ್‌ 1) ತೀರ್ಪು ಮುಂದೂಡಿದ್ದರು.

Prajwal Revanna Case Verdict Latest Updates Key Details

ಏನಿದು ಪ್ರಕರಣ?

ಕಳೆದ ಲೋಕಸಭೆ ಚುನಾವಣೆಗೂ ಮುನ್ನ ಹಾಸನ ಕ್ಷೇತ್ರದ ಜೆಡಿಎಸ್‌ ಮಾಜಿ ಸಂಸದರಾಗಿದ್ದ ಪ್ರಜ್ವಲ್‌ ರೇವಣ್ಣ ಅವರ ಮೇಲೆ ಗಂಭೀರ ಆರೋಪ ಕೇಳಿಬಂದಿತ್ತು. ಪ್ರಜ್ವಲ್‌ ಹಲವು ಮಹಿಳೆಯರನ್ನ ಅತ್ಯಾಚಾರ ಮಾಡಿದ್ದು, ಲೈಂಗಿಕ ಕಿರುಕುಳ ನೀಡಿ, ಹಿರಿಯ ವಯಸ್ಸಿನವರನ್ನೂ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದರು ಎನ್ನಲಾದ ನೂರಾರು ವಿಡಿಯೋಗಳ ಪೆನ್‌ಡ್ರೈವ್‌ ಹಾಸನದಾದ್ಯಂತ ಹಂಚಿಕೆಯಾಗಿತ್ತು. ಇದು ಇಡೀ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು. ಕೊನೆಗೆ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿದ್ದರಿಂದ ಪ್ರಜ್ವಲ್‌ ಅವರನ್ನ ಅರೆಸ್ಟ್‌ ಮಾಡಲಾಯಿತು. ಬಳಿಕ ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ಅವರನ್ನ ಉಚ್ಛಾಟನೆ ಮಾಡಲಾಯಿತು.

Prajwal Revanna Case Verdict Latest Updates Key Details

ಈ ಪೈಕಿ ಪ್ರಜ್ವಲ್ ರೇವಣ್ಣ ಅವರ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 47 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಆರೋಪವಿದೆ. ಈ ಕುರಿತು ಆ ಸಂತ್ರಸ್ತ ಮಹಿಳೆಯು ಕಳೆದ ವರ್ಷ ಏಪ್ರಿಲ್‌ನಲ್ಲಿ ಹಾಸನದ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಸ್‌ ದಾಖಲಿಸಿದ್ದರು. ಈ ಕೇಸ್‌ ವಿಚಾರಣೆ ನಡೆಸಿರುವ ಕೋರ್ಟ್‌ ಕೊನೆಗೂ ತೀರ್ಪು ಪ್ರಕಟಿಸಿದೆ. ಇದಲ್ಲದೆ ಇನ್ನೂ ಮೂರು ಪ್ರಕರಣಗಳಲ್ಲಿ ತೀರ್ಪು ಬಾಕಿ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+