ವಿಧಾನ ಪರಿಷತ್‌ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್‌ ಮೈತ್ರಿ: ಯಾರಿಗೆ ಎಷ್ಟು ಸ್ಥಾನ?

ಮೈಸೂರು , ಮೇ 11: ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ - ಜೆಡಿಎಸ್‌ ಮೈತ್ರಿಯಾಗಿದೆ. ಪ್ರಜ್ವಲ್‌ ಪೆನ್‌ ಡ್ರೈವ್‌ ಪ್ರಕರಣದಿಂದ ತೀವ್ರ ಮುಜುಗರ ಅನುಭವಿಸಿರುವ ಬಿಜೆಪಿ ನಾಯಕರಿಂ ಮೈತ್ರಿ ವಿರುದ್ಧದ ಮಾತುಗಳು ಕೇಳಿ ಬರುತ್ತಿದ್ದು, ಮೈತ್ರಿ ಕುರಿತು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಜೆ.ಡಿ.ಎಸ್ ಬಿಜೆಪಿ ಮೈತ್ರಿ ಮುಂದುವರೆಯುತ್ತೆ. ಮೈತ್ರಿಗೆ ಯಾವುದೆ ಭಂಗವಾಗುವುದಿಲ್ಲ. ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಇರುತ್ತದೆ. ಜೆಡಿಎಸ್ ಗೆ ಎರಡು ಸ್ಥಾನ ಬಿಟ್ಟುಕೊಟ್ಟು ನಾವು 4 ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ. ಇಂದು ಸಂಜೆ ನಡ್ಡಾ ಅವರು ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದರು.

Prajwal Revanna Case Won t Affect BJP-JDS Alliance It Will Be Furthered BS Yediyurappa

ನರೇಂದ್ರ ಮೋದಿಯವರು 400 ಕ್ಕು ಹೆಚ್ಚು ಸ್ಥಾನ ಗೆದ್ದು ಮತ್ತೆ ಪ್ರಧಾನಿಯಾಗುತ್ತಾರೆ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯ ಇದು ಅಷ್ಟೆ ಸತ್ಯ.ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಮೋದಿಯವರು ಈಗಗಾಲೇ ಚಿಂತೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ಕನಿಷ್ಠ 24-25 ಸ್ಥಾ‌ ಗೆಲ್ಲುತ್ತೇನೆ. ಕಾಂಗ್ರೆಸ್ ನವರು ಏನೇ ಹೇಳಿದ್ರು ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್ ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದ್ರೆ ಮೋದಿಯವರು ಪ್ರಧಾನಿಯಾಗಬೇಕು ಎಂಬುದು ಎಲ್ಲರ ಅಭಿಪ್ರಾಯ ಎಂದು ತಿಳಿಸಿದರು.

ರಾಜ್ಯದಲ್ಲಿ ಬೀಕರ ಬರಗಾಲ ಬಂದಿದೆ. ಕೆರೆಕಟ್ಟೆ ಬತ್ತಿಹೋಗಿದೆ, ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲಮನ್ನ ಮಾಡಿ ರೈತರಿಗೆ ನೆರವಾಗಬೇಕು. ಸಾಲಮನ್ನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದ ಅವರು, ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಪಾರದರ್ಶನಕವಾಗಿ ನಡೆಯಬೇಕಿದ್ರೆ ಸಿಬಿಐಗೆ ಕೊಡಬೇಕು. ಬಹುತೇಕ ಜನರ ಅಭಿಪ್ರಾಯ ಇದೆ ಇದೆ, ಸಿಎಂ ಅಭಿಪ್ರಾಯ ಅವರದ್ದು. ಇದರಿಂದ ಸಿಬಿಐ ಗೆ ತನಿಖೆ ವಹಿಸಬೇಕು ಎಂದು ಹೇಳಿದರು. ಈಶ್ವರಪ್ಪರ ಬಗ್ಗೆ ಮಾಧ್ಯಮದವರು ಪ್ರಶ್ನೆ ಕೇಳುತ್ತಿದ್ದಂತೆ ಈ ಬಗ್ಗೆ ಮಾತನಾಡಲು ಇಷ್ಟ ಪಡುವುದಿಲ್ಲ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ರಾಘವೇಂದ್ರ 2.5 ಲಕ್ಷ ಲೀಡ್ ಗಳಿಂದ ಗೆಲ್ಲುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+