ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ ಭೇಟಿಯಾದ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ

|
Google Oneindia Kannada News

Recommended Video

Lok Sabha Elections 2019 : ಸಿದ್ದರಾಮಯ್ಯ ಭೇಟಿಯಾದ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ

ಬೆಂಗಳೂರು, ಮಾರ್ಚ್ 26 : 'ಹಾಸನ ಮತ್ತು ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌-ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ಹೋಗುತ್ತೇನೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಮಂಗಳವಾರ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಹಾಸನ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರು ಪ್ರಚಾರಕ್ಕೆ ಬರುವಂತೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದರು.

ಹಾಸನ : ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ, ಸಾಲ ವಿವರಹಾಸನ : ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ, ಸಾಲ ವಿವರ

ಪ್ರಜ್ವಲ್ ರೇವಣ್ಣ ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, 'ಮಂಡ್ಯ ಮತ್ತು ಹಾಸನ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲು ಹೋಗುತ್ತೇನೆ' ಎಂದು ತಿಳಿಸಿದರು.

Prajwal Revanna meets Siddaramaiah

'ಹಾಸನ ದೇವೇಗೌಡರಂತಹ ಮುತ್ಸದ್ಧಿ ರಾಜಕಾರಣಿ ಪ್ರತಿನಿಧಿಸಿದ್ದ ಕ್ಷೇತ್ರ, ಕ್ಷೇತ್ರದಲ್ಲಿ ದೇವೇಗೌಡರು ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ. ಅದೇ ದಾರಿಯಲ್ಲಿ ಸಾಗುವಂತೆ ಮಾರ್ಗದರ್ಶನ ನೀಡಿ, ಶುಭ ಹಾರೈಸಿದೆ' ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಹಾಸನ : 'ಶುಭಗಳಿಗೆ' ಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಜ್ವಲ್ ರೇವಣ್ಣಹಾಸನ : 'ಶುಭಗಳಿಗೆ' ಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಜ್ವಲ್ ರೇವಣ್ಣ

ಹಾಸನ ಕ್ಷೇತ್ರದ ಚುನಾವಣೆ ಈ ಬಾರಿ ಕುತೂಹಲಕ್ಕೆ ಕಾರಣವಾಗಿದೆ. ಕ್ಷೇತ್ರದ ಹಾಲಿ ಸಂಸದ ಎಚ್.ಡಿ.ದೇವೇಗೌಡ ಅವರು ಮೊಮ್ಮಗ ಪ್ರಜ್ವಲ್ ರೇವಣ್ಣಗಾಗಿ ಕ್ಷೇತ್ರವನ್ನು ಬಿಟ್ಟುಕೊಟ್ಟು ತುಮಕೂರಿನಿಂದ ಕಣಕ್ಕಿಳಿದಿದ್ದಾರೆ.

ಮತ್ತೊಂದು ಕಡೆ ಕಾಂಗ್ರೆಸ್ ನಾಯಕರಾಗಿದ್ದ ಮಾಜಿ ಸಚಿವ ಎ.ಮಂಜು ಅವರು ಪ್ರಜ್ವಲ್ ರೇವಣ್ಣ ಅವರ ಸ್ಪರ್ಧೆಯನ್ನು ವಿರೋಧಿಸಿ, ಬಿಜೆಪಿ ಸೇರಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎ.ಮಂಜು ಬಿಜೆಪಿ ಅಭ್ಯರ್ಥಿಯಾದರೆ, ಪ್ರಜ್ವಲ್ ರೇವಣ್ಣ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದಾರೆ.

ಪ್ರಜ್ವಲ್ ರೇವಣ್ಣ ಮತ್ತು ಎ.ಮಂಜು ಅವರು ಈಗಾಗಲೇ ನಾಮಪತ್ರಗಳನ್ನು ಸಲ್ಲಿಸಿದ್ದು ಏಪ್ರಿಲ್ 18ರಂದು ಮತದಾನ ನಡೆಯಲಿದೆ. ಪ್ರಜ್ವಲ್ ರೇವಣ್ಣ ಅವರ ಪರವಾಗಿ ಕಾಂಗ್ರೆಸ್‌-ಜೆಡಿಎಸ್ ನಾಯಕರು ಬಿರುಸಿನಿಂದ ಪ್ರಚಾರವನ್ನು ಮಾಡುತ್ತಿದ್ದಾರೆ.

English summary
Hassan JD(S) and Congress candidate Prajwal Revanna met Siddaramaiah in Bengaluru on March 26, 2019. Prajwal Revanna invited Siddaramaiah for election campaign in Hassan seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X