Prajwal Revanna; ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದಿಗೆ ಎಸ್‌ಐಟಿ ಪತ್ರ
ಬೆಂಗಳೂರು, ಮೇ 20: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ತಕ್ಷಣ ರದ್ದುಗೊಳಿಸಲು ಕೋರಿ ಎಸ್‌ಐಟಿ ಪತ್ರವನ್ನು ಬರೆದಿದೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಸೋಮವಾರ ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಪತ್ರವನ್ನು ಬರೆದಿದೆ. ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ.

ಪ್ರಜ್ವಲ್ ರೇವಣ್ಣ ಹೊರಡಿಸಿರುವ ಬ್ಲೂ ಕಾರ್ನರ್ ನೋಟಿಸ್ ಮತ್ತು ಬಂಧನದ ವಾರೆಂಟ್ ಉಲ್ಲೇಖ ಮಾಡಿ ಎಸ್‌ಐಟಿ ವಿದೇಶಾಂಗ ಸಚಿವಾಲಯಕ್ಕೆ ಪತ್ರವನ್ನು ಬರೆದಿದೆ. ತಕ್ಷಣ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದುಗೊಳಿಸಬೇಕು ಎಂದು ಮನವಿ ಮಾಡಿದೆ.
ದೇಶಕ್ಕೆ ಕರೆಸಲು ಯೋಜನೆ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಎದುರಿಸುತ್ತಿದ್ದಾರೆ. ಮೂರು ಪ್ರಕರಣಗಳು ಅವರ ವಿರುದ್ಧ ದಾಖಲಾಗಿದ್ದು, ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಿದೆ.
ಎಸ್‌ಐಟಿ ತನಿಖೆಗೆ ನೋಟಿಸ್ ನೀಡಿದರೂ ಸಹ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗಿಲ್ಲ. ವಿದೇಶದಲ್ಲಿರುವ ಅವರನ್ನು ದೇಶಕ್ಕೆ ಕರೆಸಲು ಎಸ್ಐಟಿ ಪೊಲೀಸರು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
ಪ್ರಜ್ವಲ್ ರೇವಣ್ಣಗೆ ಸೇರಿದ ಬ್ಯಾಂಕ್ ಖಾತೆಗಳ ವಹಿವಾಟು ಸ್ಥಗಿತಗೊಳಿಸುವುದು. ಅವರ ಪಾಸ್‌ಪೋರ್ಟ್ ರದ್ದುಗೊಳಿಸುವುದು ಈ ಕ್ರಮಗಳಲ್ಲಿ ಸೇರಿದೆ. ಪಾಸ್‌ಪೋರ್ಟ್ ಅನ್ನು ವಿದೇಶಾಂಗ ಸಚಿವಾಲಯ ರದ್ದುಗೊಳಸಬೇಕಾದ ಕಾರಣ ಎಸ್‌ಐಟಿ ಈಗ ಪತ್ರವನ್ನು ಬರೆದಿದೆ.
ಹಾಸನದ ಹಾಲಿ ಸಂಸದ, ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ. 2024ರ ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಒಮ್ಮತದ ಅಭ್ಯರ್ಥಿ. ಏಪ್ರಿಲ್ 26ರಂದು ಹಾಸನದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ಮಾಡಿದ ಬಳಿಕ ಅವರು ದೇಶ ಬಿಟ್ಟು ಪರಾರಿಯಾಗಿದ್ದಾರೆ.
ಮೇ 18ರ ಶನಿವಾರ ಬೆಂಗಳೂರು ನಗರದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಬಂಧನಕ್ಕೆ ವಾರೆಂಟ್ ಜಾರಿಗೊಳಿಸಿದೆ. ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವ ಮಾಹಿತಿ ಇದೆ. ಅವರನ್ನು ಬಂಧಿಸಲು ವಾರೆಂಟ್ ಜಾರಿಗೊಳಿಸುವಂತೆ ಎಸ್‌ಐಟಿ ನ್ಯಾಯಾಲಯಕ್ಕೆ ಮನವಿ ಸಲ್ಲಿಕೆ ಮಾಡಿತ್ತು.
ಈ ಮನವಿಯನ್ನು ಪುರಸ್ಕರಿಸಿದ್ದ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಬಂಧನಕ್ಕೆ ವಾರೆಂಟ್ ಜಾರಿಗೊಳಿಸಿತ್ತು. ಈಗ ಎಸ್ಐಟಿ ಈ ವಾರೆಂಟ್ ಮತ್ತು ಈಗಾಗಲೇ ಹೊರಡಿಸಿರುವ ಬ್ಲೂ ಕಾರ್ನರ್ ನೋಟಿಸ್ ಉಲ್ಲೇಖ ಮಾಡಿ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಪತ್ರವನ್ನು ಬರೆದಿದೆ.
ಸೋಮವಾರ ಮಾತನಾಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ, "ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಅವರನ್ನು ಕೋರಿದ್ದರು. ಈಗ ಕರ್ನಾಟಕ ಸರ್ಕಾರ ಅಧಿಕೃತವಾಗಿ ನ್ಯಾಯಾಲಯದ ವಾರೆಂಟ್ ಆದೇಶದ ಜೊತೆ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆಯಲಿದೆ. ಅದರಂತೆ ಪಾಸ್‌ಪೋರ್ಟ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು" ಎಂದು ಹೇಳಿದ್ದರು.
"ಪಾಸ್‌ಪೋರ್ಟ್ ರದ್ದಾದ ತಕ್ಷಣ ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿದ್ದರೂ ಸಹ ವಾಪಸ್ ಬರಲೇಬೇಕು. ಆಗ ನಾವು ಬಂಧಿಸುತ್ತೇವೆ. ಪ್ರಜ್ವಲ್ ಎಲ್ಲಿದ್ದಾರೆ ಎಂಬ ಮಾಹಿತಿ ನಮಗೆ ಇಲ್ಲ. ಬಂಧನಕ್ಕೆ ಸಹಕಾರ ನೀಡುವಂತೆ ಮೂರು ಬಾರಿ ಇಂಟರ್‌ಪೋಲ್‌ಗೆ ಪತ್ರ ಬರೆಯಲಾಗಿದೆ. ಉತ್ತರ ಬಂದಿಲ್ಲ, ಬ್ಲೂ ಕಾರ್ನರ್ ನೋಟಿಸ್ ಸಹ ಜಾರಿಗೊಳಿಸಲಾಗಿದೆ" ಎಂದು ಗೃಹ ಸಚಿವರು ತಿಳಿಸಿದ್ದರು.
ಅಪಹರಣ ಪ್ರಕರಣದಲ್ಲಿ ಎಸ್‌ಐಟಿ ಎಚ್. ಡಿ. ರೇವಣ್ಣ ಬಂಧಿಸಿತ್ತು. ಆಗ ಪ್ರಜ್ವಲ್ ರೇವಣ್ಣ ತವರಿಗೆ ಮರಳಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಭಾರತಕ್ಕೆ ಮರಳಲು ಎರಡು ಬಾರಿ ಟಿಕೆಟ್ ಬುಕ್ ಮಾಡಿದ್ದ ಅವರು ಬಳಿಕ ಅದನ್ನು ರದ್ದು ಮಾಡಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications