Prajwal Revanna: ಪ್ರಜ್ವಲ್‌ ರೇವಣ್ಣ ಜೈಲು ಮೊಬೈಲ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌: ಮೂವರಿಗೂ ಜಾಮೀನು ತಿರಸ್ಕಾರ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್‌ ಫೋನ್‌ ಪೂರೈಕೆ ಮಾಡಿದ ಆರೋಪ ಎದುರಿಸುತ್ತಿರುವ ಮೂವರು ಆರೋಪಿಗಳ ಜಾಮೀನು ಅರ್ಜಿಗಳನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಆರೋಪಿಗಳಾದ ನವೀನ್‌ ಕುಮಾರ ಅಲಿಯಾಸ್‌ ರಾಜು, ಕೇಂದ್ರ ಕಾರಾಗೃಹದ ವಾರ್ಡರ್‌ ಪ್ರಕಾಶ್‌ ಮಹಾವೀರ್‌ ಗವಾಡೆ ಹಾಗೂ ಮಂಜುನಾಥ ಅಲಿಯಾಸ್‌ ಮಂಜು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಿವಪ್ರಸಾದ್‌ ಕೆ.ಬಿ. ಅವರು ವಜಾಗೊಳಿಸಿದ್ದಾರೆ. ಈ ಮೂವರು ಪ್ರಕರಣದಲ್ಲಿ ಕ್ರಮವಾಗಿ ಮೂರನೇ, ನಾಲ್ಕನೇ ಹಾಗೂ ಐದನೇ ಆರೋಪಿಗಳಾಗಿದ್ದಾರೆ.

Prajwal Revanna Prajwal Jail Mobile Phone Case Bail Denied to Three Accused Including Jail Warder

ಜೈಲಿನ ಭದ್ರತೆಗೆ ಧಕ್ಕೆ: ನ್ಯಾಯಾಲಯದ ಅಭಿಪ್ರಾಯ

ಮೂರನೇ ಆರೋಪಿಗೆ ಅಪರಾಧ ಹಿನ್ನೆಲೆ ಇದೆ. ಇನ್ನು ಎರಡನೇ ಅರ್ಜಿದಾರರಾದ ಜೈಲು ವಾರ್ಡರ್‌ ಜವಾಬ್ದಾರಿಯುತ ಹುದ್ದೆಯಲ್ಲಿದ್ದರೂ, ಜೈಲಿನಲ್ಲಿರುವ ಕೈದಿಗಳಿಗೆ ನಿಷೇಧಿತ ವಸ್ತುಗಳನ್ನು ಪೂರೈಸುವಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಆರೋಪಿಗಳು ಹಾಗೂ ಇತರರ ಸಹಭಾಗಿತ್ವದಲ್ಲಿ ಕೃತ್ಯ ನಡೆದಿರುವ ಸಾಧ್ಯತೆ ಕಂಡುಬಂದಿದ್ದು, ಇದು ಗಂಭೀರ ಸ್ವರೂಪದ ಅಪರಾಧವಾಗಿದೆ. ಪ್ರಕರಣವು ಕಾರಾಗೃಹದ ಭದ್ರತೆಗೆ ಸಂಬಂಧಿಸಿದ್ದರಿಂದ, ಆರೋಪಿಗಳ ಪಾತ್ರ ಮತ್ತು ಕೃತ್ಯದ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ತನಿಖೆ ಅಗತ್ಯವಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

‌ಆರೋಪಿಗಳಿಗೆ ಜಾಮೀನು ನೀಡಿದರೆ ತನಿಖೆಯ ಮೇಲೆ ಪರಿಣಾಮ ಬೀರಬಹುದು ಎಂಬ ಪ್ರಾಸಿಕ್ಯೂಷನ್‌ ಆತಂಕವನ್ನೂ ಪರಿಗಣಿಸಿದ ನ್ಯಾಯಾಲಯ, ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದೆ.

ಜೈಲಿನ ತಪಾಸಣೆ ವೇಳೆ ಮೊಬೈಲ್‌, ಚಾರ್ಜರ್‌ ಪತ್ತೆ

ಆಗಸ್ಟ್‌ 11ರಂದು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತಪಾಸಣೆ ನಡೆಸಿದ್ದರು. ಈ ವೇಳೆ ಆರೋಪಿ ಪ್ರತಾಪ್‌ ರಾಜು ಹಾಗೂ ಪ್ರಜ್ವಲ್‌ ರೇವಣ್ಣ ಅವರನ್ನು ಇರಿಸಲಾಗಿದ್ದ ಸೆಲ್‌ನಲ್ಲಿ ಮೊಬೈಲ್‌ ಫೋನ್‌, ಚಾರ್ಜರ್‌, ನೋಟ್‌ಬುಕ್‌ ಮತ್ತು ಪೆನ್‌ಡ್ರೈವ್‌ ಪತ್ತೆಯಾಗಿದ್ದವು.

Prajwal Revanna: ಪೆನ್‌ಡ್ರೈವ್‌ ಪ್ರತಾಪ್‌ ರೈಗೆ ಸೇರಿದ್ದು

ವಿಚಾರಣೆ ವೇಳೆ ಮೊಬೈಲ್‌ ಫೋನ್‌, ಚಾರ್ಜರ್‌ ಹಾಗೂ ಪೆನ್‌ಡ್ರೈವ್‌ ಪ್ರತಾಪ್‌ ರೈಗೆ ಸೇರಿದ್ದು, ನೋಟ್‌ಬುಕ್‌ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದೆ ಎಂಬುದು ತನಿಖೆಯಿಂದ ತಿಳಿದುಬಂದಿತ್ತು. ಇಬ್ಬರೂ ಮೊಬೈಲ್‌ ಫೋನ್‌ ಬಳಸಿ ತಮ್ಮ ಸಂಬಂಧಿಕರು ಮತ್ತು ವಕೀಲರನ್ನು ಸಂಪರ್ಕಿಸುತ್ತಿದ್ದರು ಎಂದು ಅಧಿಕಾರಿಗಳು ಪತ್ತೆಹಚ್ಚಿದ್ದರು.‌

ಕಾರಾಗೃಹದೊಳಗೆ ಮೊಬೈಲ್‌ ಸೇರಿದಂತೆ ಇಂತಹ ವಸ್ತುಗಳನ್ನು ಇಟ್ಟುಕೊಳ್ಳುವುದು ನಿಷೇಧಿತವಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವುಗಳನ್ನು ವಶಪಡಿಸಿಕೊಂಡು, ಪ್ರತಾಪ್‌ ರಾವ್‌ ಮತ್ತು ಪ್ರಜ್ವಲ್‌ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಪ್ರಕರಣದ ತನಿಖೆ ಇನ್ನೂ ಮುಂದುವರಿದಿದ್ದು, ಜೈಲಿನೊಳಗೆ ನಿಷೇಧಿತ ವಸ್ತುಗಳು ಹೇಗೆ ತಲುಪಿದವು ಮತ್ತು ಇದರಲ್ಲಿ ಯಾರ ಪಾತ್ರವಿದೆ ಎಂಬುದರ ಕುರಿತು ತನಿಖಾಧಿಕಾರಿಗಳು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಪ್ರಕರಣದ ಹಿನ್ನೆಲೆ ಏನು?

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ, ಒಂದು ಪ್ರಕರಣದಲ್ಲಿ ಆಜೀವ ಕಾರಾಗೃಹ ಶಿಕ್ಷೆಗೆ ಗುರಿಯಾಗಿದ್ದು, ಸದ್ಯ ಜೈಲಿನಲ್ಲಿದ್ದಾರೆ. ಜೈಲಿನ ಕೆಲವು ಸಿಬ್ಬಂದಿಯೊಂದಿಗೆ ಶಾಮೀಲಾಗಿ ಅವರು ಮೊಬೈಲ್‌ ಫೋನ್‌ ಬಳಸುತ್ತಿದ್ದರು ಹಾಗೂ ವಿಶೇಷ ಸವಲತ್ತುಗಳನ್ನು ಪಡೆಯುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಕಳೆದ ಆಗಸ್ಟ್‌ನಲ್ಲಿ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದಾಗ, ಪ್ರಜ್ವಲ್‌ ಇದ್ದ ಬ್ಯಾರಕ್‌ನಲ್ಲಿ ಆಂಡ್ರಾಯ್ಡ್‌ ಮೊಬೈಲ್‌ ಫೋನ್‌ ಹಾಗೂ ಪೆನ್‌ಡ್ರೈವ್‌ ಪತ್ತೆಯಾಗಿದ್ದವು. ಮೊಬೈಲ್‌ನಲ್ಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ, ನೆಟ್‌ಫ್ಲಿಕ್ಸ್‌ ಮತ್ತು ಅಮೆಜಾನ್‌ ಪ್ರೈಮ್‌ ವಿಡಿಯೊ ಸೇರಿದಂತೆ ಹಲವು ಆ್ಯಪ್‌ಗಳು ಇರುವುದು ಪತ್ತೆಯಾಗಿತ್ತು. ಅಲ್ಲದೆ, ಮೊಬೈಲ್‌ನಲ್ಲಿ ಕೆಲವು ವಿಡಿಯೊಗಳೂ ಇದ್ದವು ಎಂಬುದು ತನಿಖೆಯ ವೇಳೆ ಬೆಳಕಿಗೆ ಬಂದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+