Prajwal Revanna: ಪರಪ್ಪನ ಅಗ್ರಹಾರದಿಂದ ಹಿಂಡಲಗಾ ಜೈಲಿಗೆ ಪ್ರಜ್ವಲ್‌ ರೇವಣ್ಣ ಶಿಫ್ಟ್‌; ಕಾರಣವೇನು?

ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ಆದೇಶಿಸಲಾಗಿದೆ. ಪ್ರಜ್ವಲ್‌ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ ಮೊಬೈಲ್‌ ಫೋನ್‌ ಮತ್ತು ಪೆನ್‌ಡ್ರೈವ್‌ ಪತ್ತೆಯಾದ ಪ್ರಕರಣದ ಬೆನ್ನಲ್ಲೇ ಮಹತ್ವದ ಬೆಳವಣೆಗೆ ನಡೆದಿದೆ.

ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಡಿಜಿಪಿ ಅಲೋಕ್‌ ಕುಮಾರ್‌ ಅವರು ಪ್ರಜ್ವಲ್‌ ರೇವಣ್ಣ ಅವರನ್ನು ಸ್ಥಳಾಂತರಿಸುವಂತೆ ಆದೇಶ ಹೊರಡಿಸಿದ್ದಾರೆ.

Prajwal Revanna Prajwal Shifted to Hindalga Jail in Belagavi After Mobile Phone And Pen Drive Found

ಬ್ಯಾರಕ್‌ನಲ್ಲಿ ಮೊಬೈಲ್‌, ಪೆನ್‌ಡ್ರೈವ್‌ ಪತ್ತೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಪ್ರಜ್ವಲ್‌ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ ಮೊಬೈಲ್‌ ಫೋನ್‌ ಮತ್ತು ಪೆನ್‌ಡ್ರೈವ್‌ ಪತ್ತೆಯಾಗಿರುವುದು ಪ್ರಕರಣದ ಕುರಿತು ರಾಜ್ಯದಲ್ಲಿ ಹೆಚ್ಚು ಚರ್ಚೆಯಾಗಿದ್ದು. ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.

ಹಿಂಡಲಗಾ ಜೈಲಿಗೆ ಸ್ಥಳಾಂತರ

ಪ್ರಜ್ವಲ್‌ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರವನ್ನು ಕಾರಾಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಕೈಗೊಂಡಿದ್ದಾರೆ. ಈ ಕ್ರಮವು ಜೈಲಿನ ಭದ್ರತೆ ಮತ್ತು ಕೈದಿಗಳ ನಿರ್ವಹಣೆಗೆ ಸಂಬಂಧಿಸಿದ ಬೆಳವಣಿಗೆಯಾಗಿ ಗಮನ ಸೆಳೆದಿದೆ.

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಇದೀಗ ಅವರಿದ್ದ ಬ್ಯಾರಕ್‌ನಲ್ಲಿ ಮೊಬೈಲ್‌ ಮತ್ತು ಪೆನ್‌ಡ್ರೈವ್‌ ಪತ್ತೆಯಾದ ಪ್ರಕರಣದ ಹಿನ್ನೆಲೆಯಲ್ಲಿ ಜೈಲು ಸ್ಥಳಾಂತರದ ಆದೇಶ ಹೊರಬಂದಿರುವುದು ಚರ್ಚೆಗೆ ಕಾರಣವಾಗಿದೆ.

ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಸಿದ್ಧತೆ ನಡೆದಿದೆ. ಇಂದು ಸಂಜೆ ಅಥವಾ ರಾತ್ರಿ ಕಾರಾಗೃಹ ಇಲಾಖೆಯ ಸಿಬ್ಬಂದಿ ಅವರನ್ನು ಬೆಳಗಾವಿಗೆ ಕರೆದೊಯ್ಯುವ ಸಾಧ್ಯತೆಯಿದೆ.

ಕೈದಿಗಳ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಕಾರಾಗೃಹ ಇಲಾಖೆಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಆರು ಮಂದಿ ಕೈದಿಗಳು ಹಾಗೂ ಇಬ್ಬರು ಜೈಲಾಧಿಕಾರಿಗಳನ್ನು ಸ್ಥಳಾಂತರಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಇದೀಗ ಈ ಪಟ್ಟಿಗೆ ಪ್ರಜ್ವಲ್‌ ರೇವಣ್ಣ ಅವರ ಹೆಸರೂ ಸೇರಿದೆ.

Prajwal Revanna: ಹಿಂಡಲಗಾ ಜೈಲಿಗೆ ಸ್ಥಳಾಂತರಕ್ಕೆ ಸಿದ್ಧತೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಪ್ರಜ್ವಲ್‌ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ಕಾರಾಗೃಹ ಇಲಾಖೆ ಸಿದ್ಧತೆ ನಡೆಸಿದೆ. ಸ್ಥಳಾಂತರ ಪ್ರಕ್ರಿಯೆ ಇಂದು ಸಂಜೆ ಅಥವಾ ರಾತ್ರಿ ನಡೆಯುವ ಸಾಧ್ಯತೆಯಿದೆ. ಈ ಸಂಬಂಧ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಡಿಜಿಪಿ ಅಲೋಕ್‌ ಕುಮಾರ್‌ ಅವರ ಆದೇಶದ ಕುರಿತು ಮಾಹಿತಿ ಲಭ್ಯವಾಗಿದೆ.

ಪ್ರಜ್ವಲ್ ರೇವಣ್ಣ ಅವರಿಗಿದ್ದ ಪ್ರತ್ಯೇಕ ಸೆಲ್ ಸೌಲಭ್ಯವನ್ನು ರದ್ದುಗೊಳಿಸಿ, ಸಿಸಿಟಿವಿ ಕಣ್ಗಾವಲಿರುವ ಸಾಮಾನ್ಯ ಕೈದಿಗಳ ಬ್ಯಾರಕ್‌ಗೆ ಸ್ಥಳಾಂತರಿಸಲಾಯಿತು. ಆದರೆ, ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಪ್ರಭಾವ ಬಳಸಿ ಮತ್ತೆ ಅಕ್ರಮ ಚಟುವಟಿಕೆಗಳು ಮುಂದುವರಿಯುವ ಆತಂಕದಿಂದಾಗಿ, ಅವರನ್ನು ಕಠಿಣ ನಿಯಮಾವಳಿಗಳುಳ್ಳ ದೂರದ ಬೆಳಗಾವಿಯ ಹಿಂಡಲಗಾ ಜೈಲಿಗೆ ವರ್ಗಾಯಿಸಲು ಕಾರಾಗೃಹ ಇಲಾಖೆ ಮುಂದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+