Prajwal Revanna Case: ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣದ ಸಂತ್ರಸ್ತರಿಗೆ ಆರ್ಥಿಕ ನೆರವು ನೀಡಲಿದೆ ಕಾಂಗ್ರೆಸ್
ಬೆಂಗಳೂರು, ಮೇ. 05: ದೇಶಾದ್ಯಂತ ಸದ್ದು ಮಾಡುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪ್‌ಡೇಟ್ ಸಿಕ್ಕಿದೆ. ಪ್ರಕರಣದಲ್ಲಿ ದೌರ್ಜನ್ಯಕ್ಕೊಳಗಾದ ಸಂತ್ರಸ್ತರಿಗೆ ಆರ್ಥಿಕ ನೆರವು ನೀಡಲಿದೆ ಎಂದು ಆಡಳಿತರೂಢ ಕಾಂಗ್ರೆಸ್ ಪಕ್ಷ ಘೋಷಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಈ ಘೋಷಣೆ ಮಾಡಿದ್ದಾರೆ. ಈ ವೇಳೆ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

"ಕಳೆದ 75 ವರ್ಷಗಳಲ್ಲಿ ಎಂದೂ ನಡೆಯದ ಗಂಭೀರ ಪ್ರಕರಣ ಇದಾಗಿದ್ದು, ನೂರಾರು ಸಂಖ್ಯೆಯಲ್ಲಿರುವ ಅತ್ಯಾಚಾರ ಪ್ರಕರಣದ ಸಂತ್ರಸ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕ ನೆರವು ಘೋಷಿಸಿದ್ದಾರೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೊಮ್ಮಗ ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಅಣ್ಣನ ಮಗ. ನೂರಾರು ಸ್ಪಷ್ಟ ವೀಡಿಯೊಗಳು ಬಹಿರಂಗವಾಗಿ ಹೊರಬಂದ ನಂತರ ಅತ್ಯಾಚಾರ ಮತ್ತು ಕಿರುಕುಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದುರು ದಾಖಲಾಗಿದ್ದು, ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ.

ಮೈತ್ರಿ ನಾಯಕರಿಂದ ಪ್ರಜ್ವಲ್ ರಕ್ಷಣೆ!
ರಣದೀಪ್ ಸಿಂಗ್ ಸುರ್ಜೇವಾಲಾ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. 'ಸಾಮೂಹಿಕ ಅತ್ಯಾಚಾರಿ' ಪ್ರಜ್ವಲ್ ರೇವಣ್ಣ, ತಮ್ಮ ಮೈತ್ರಿ ಪಾಲುದಾರ ಜೆಡಿಎಸ್ ಅಭ್ಯರ್ಥಿಯನ್ನು ರಕ್ಷಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆರೋಪಿಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಜೊತೆಯಲ್ಲಿ ಇದ್ದರು.
ಪ್ರಜ್ವಲ್ ಬಗ್ಗೆ ಮಾಹಿತಿ ಇದ್ದರೂ ಬಿಜೆಪಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದು ಏಕೆ?. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪಲಾಯನ ಮಾಡುವುದನ್ನು ವಿದೇಶಾಂಗ ಸಚಿವಾಲಯ ಏಕೆ ತಡೆಯಲಿಲ್ಲ. ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಪ್ರಧಾನಿ ಏಕೆ ರದ್ದುಗೊಳಿಸಲಿಲ್ಲ ಮತ್ತು ಅವರನ್ನು ಮರಳಿ ಕರೆತರಲು ಇಂಟರ್‌ಪೋಲ್ ಮೂಲಕ ಬ್ಲೂ ಕಾರ್ನರ್ ನೋಟಿಸ್ ಏಕೆ ನೀಡಲಿಲ್ಲ..? ಎಂದು ಸುರ್ಜೇವಾಲಾ ಪ್ರಶ್ನಿಸಿದ್ದಾರೆ.












Click it and Unblock the Notifications