ಪ್ರಜ್ವಲ್ ರೇವಣ್ಣ ಸ್ಪರ್ಧೆ ಖಚಿತಪಡಿಸಿದ ಭವಾನಿ ರೇವಣ್ಣ
Recommended Video

ಹರದನಹಳ್ಳಿ, ನವೆಂಬರ್ 06: ಮಾಜಿ ಪ್ರಧಾನಿ ಎಚ್. ಡಿ ದೇವೆಗೌಡರ ಮೊಮ್ಮಗ ಮತ್ತು ಎಚ್.ಡಿ ರೇವಣ್ಣ ಅವರ ಮಗ ಪ್ರಜ್ವಲ್ ರೇವಣ್ಣ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ? ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ಬಗ್ಗೆ ಪ್ರಜ್ವಲ್ ಅವರ ತಾಯಿ ಭವಾನಿ ಅವರು ಸುಳಿವು ನೀಡಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿಲ್ಲ. ಆದರೆ, ಪ್ರಜ್ವಲ್ ರೇವಣ್ಣ ಸ್ಪರ್ಧೆ ಖಚಿತ. ಮನೆಯಲ್ಲಿ ಯಾವುದೇ ಶುಭ ಕಾರ್ಯ ಮಾಡುವ ಮುನ್ನ ಕುಲ ದೇವರಿಗೆ ಪೂಜೆ ಮಾಡಿಸುವುದು ರೂಢಿ. ಅದರಂತೆ, ಪೂಜೆ ಸಲ್ಲಿಸಿದ ಬಳಿಕ ಈ ಬಗ್ಗೆ ಹೇಳುತ್ತಿದ್ದೇನೆ. ಪ್ರಜ್ವಲ್ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಜೆಡಿಎಸ್ ವರಿಷ್ಠ ಎಚ್. ಡಿ ದೇವೇಗೌಡ ಅವರು ನಿರ್ಧರಿಸಲಿದ್ದಾರೆ ಎಂದು ಭವಾನಿ ರೇವಣ್ಣ ಅವರು ಹೇಳಿದರು.

ಪ್ರಜ್ವಲ್ ಅವರು ಹುಣಸೂರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಈ ಹಿಂದೆ ಸುದ್ದಿ ಹಬ್ಬಿತ್ತು. ಈ ಬಗ್ಗೆ ಪ್ರಜ್ವಲ್ ಕೂಡಾ ಒಲವು ತೋರಿದ್ದರು. ಆದರೆ, ಹುಣಸೂರಿನಲ್ಲಿ ಸ್ಪರ್ಧೆ ಸಾಧ್ಯವಾಗದ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಬಯಸಿದ್ದಾರೆ ಎಂಬ ಮಾಹಿತಿ ಇದೆ. ಜತೆಗೆ ಬೇಲೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕೂಡಾ ಕಾರ್ಯಕರ್ತರಿಂದ ಮನವಿ ಬಂದಿದೆ.












Click it and Unblock the Notifications