ಪೊಲೀಸ್ ಕಸ್ಟಡಿ ತಪ್ಪಿಸಿಕೊಳ್ಳಲು ಪ್ರಜ್ವಲ್‌ ರೇವಣ್ಣ ಹೈಕೋರ್ಟ್‌ಗೆ

ಬೆಂಗಳೂರು, ಜುಲೈ 06: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಠಾಣೆ ಮತ್ತು ಸಿಐಡಿ ದಾಖಲಿಸಿರುವ ಎಫ್‌ಐಆರ್ ಪ್ರಕರಣಗಳಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ಸಂಬಂಧ ಹೈಕೋರ್ಟ್ ಎಸ್‌ಐಟಿಗೆ ನೋಟಿಸ್ ಜಾರಿ ಮಾಡಿದೆ. ಅಷ್ಟೇ ಅಲ್ಲದೆ, ಮುಂದಿನ ವಿಚಾರಣೆ ವೇಳೆಗೆ ಉತ್ತರ ನೀಡುವಂತೆ ನ್ಯಾಯಾಲಯ ಸೂಚಿಸಿದೆ.

ಸದ್ಯ 3 ಪ್ರಕರಣಗಳನ್ನು ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣಗೆ ಒಂದರಲ್ಲಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಳಿದ ಪ್ರಕರಣಗಳಲ್ಲಿ ಇದೀಗ ಪೊಲೀಸರು ಕಸ್ಟಡಿಗೆ ಪಡೆಯುವುದನ್ನು ತಪ್ಪಿಸಿಕೊಳ್ಳಲು ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ.

Prajwal Revnna Bail Plea HC Sought Reply From SIT

ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ, ಜೆಡಿಎಸ್ ಪಕ್ಷದ ನಾಯಕ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ವಿಚಾರಣೆ ಮುಂದೂಡಿತು.

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಅರ್ಜಿದಾರ ಪ್ರಜ್ವಲ್ ರೇವಣ್ಣ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣದಲ್ಲಿ ರೆಗ್ಯೂಲರ್ ಜಾಮೀನು ಕೋರಿದ್ದಾರೆ. ಆದರೆ, ಹೈಕೋರ್ಟ್ ರಿಜಿಸ್ಟ್ರಾರ್ ಕಚೇರಿ ಆಕ್ಷೇಪಣೆಗಳನ್ನು ಎತ್ತಿದ್ದು, ಅದನ್ನು ಸರಿ ಪಡಿಸುವುದಕ್ಕಾಗಿ ಕಾಲಾವಕೋಶ ನೀಡಿಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿತು.

ಸಿಐಡಿ ದಾಖಲಿಸಿರುವ 2ನೇ ಎಫ್‌ಐಆರ್ ಸಂಬಂಧ ಪ್ರಜ್ವಲ್ ರೇವಣ್ಣ ಬಂಧಿಸಲಾಗಿದೆ ಎಂದು ತನಿಖಾಧಿಕಾರಿಗಳು ಈವರೆಗೂ ತೋರಿಸಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ ಎಂದು ವಕೀಲರು ವಿವರಿಸಿದರು. ಅರ್ಜಿಯ ವಿಚಾರಣೆಗೆ ಅರ್ಹತೆಗೆ ಸಂಬಂಧ ಕಛೇರಿ ಆಕ್ಷೇಪಣೆ ಎತ್ತಿದೆ ಎಂದು ತಿಳಿಸಿದರು.

ಈ ವೇಳೆ ನ್ಯಾಯಪೀಠ, ಸಿಐಡಿ ದಾಖಲಿಸಿರುವ ಎಫ್‌ಐಆರ್‌ನಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಲು ಅವಕಾಶ ಇದೆಯೇ? ಎಂದು ಪ್ರಶ್ನಿಸಿತು. ಅಲ್ಲದೆ, ಸರ್ಕಾರ ಈ ಸಂಬಂಧ ಆಕ್ಷೇಪಣೆ ಸಲ್ಲಿಸಲಿ ಎಂದು ತಿಳಿಸಿ ವಿಚಾರಣೆಯನ್ನು ಮುಂದೂಡಿತು.

2024ರ ಲೋಕಸಭೆ ಚುನಾವಣೆಗೆ ಮತದಾನ ಮಾಡಿದ ಬಳಿಕ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದರು. ಅವರ ವಿರುದ್ಧದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರ ಎಸ್‌ಐಟಿಗೆ ವಹಿಸಿತ್ತು. ಮೇ 31ರಂದು ಅವರು ಬೆಂಗಳೂರಿಗೆ ವಾಪಸ್ ಆದ ಬಳಿಕ ಏರ್‌ಪೋರ್ಟ್‌ನಲ್ಲಿಯೇ ಎಸ್‌ಐಟಿ ಬಂಧಿಸಿತ್ತು.

ಒಟ್ಟು ಮೂರು ಪ್ರಕರಣಗಳು ಅವರ ವಿರುದ್ಧ ದಾಖಲಾಗಿವೆ. ಪ್ರಜ್ವಲ್ ರೇವಣ್ಣರನ್ನು ಎಸ್‌ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಅಲ್ಲದೇ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಲಾದ ಸ್ಥಳಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದೆ. ಒಂದು ಪ್ರಕರಣದಲ್ಲಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+