ಮುಜರಾಯಿ ಖಾತೆ ಸಿಎಂ ಸಿದ್ದರಾಮಯ್ಯ ಕೈಗೆ
ಬೆಂಗಳೂರು, ಜೂನ್ 4 : ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದ ಮುಜರಾಯಿ, ಸಣ್ಣಕೈಗಾರಿಕೆ ಮತ್ತು ಸಕ್ಕರೆ ಖಾತೆ ಸಚಿವ ಪ್ರಕಾಶ್ ಹುಕ್ಕೇರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು, ಪ್ರಕಾಶ್ ಹುಕ್ಕೇರಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಪ್ರಕಾಶ್ ಹುಕ್ಕೇರಿ ರಾಜೀನಾಮೆ ಸಲ್ಲಿಸಿದ್ದರು. ಹುಕ್ಕೇರಿ ಅವರು ನಿರ್ವ ಹಿಸುತ್ತಿದ್ದ ಮುಜರಾಯಿ ಹಾಗೂ ಸಣ್ಣ ಕೈಗಾರಿಕೆ ಖಾತೆಗಳನ್ನು ಸಿಎಂ ಸಿದ್ದರಾಮಯ್ಯ ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. [ಕರ್ನಾಟಕದಲ್ಲಿ ಸೋತವರು, ಗೆದ್ದವರು]

ಸಕ್ಕರೆ ಖಾತೆಯ ಜವಾಬ್ದಾರಿಯನ್ನು ಸಚಿವ ಎಚ್.ಎಸ್.ಮಹದೇವಪ್ರಸಾದ್ ಅವರಿಗೆ ಹೆಚ್ಚುವರಿಯಾಗಿ ವಹಿಸಲಾಗಿದೆ. ಶಾಸಕ ಸ್ಥಾನಕ್ಕೆ ಸ್ಪೀಕರ್ ರಾಜೀನಾಮೆ ನೀಡಿದ್ದ ಹುಕ್ಕೇರಿ ನಂತರ ಸಚಿವ ಸ್ಥಾನಕ್ಕೂ ಸಿಎಂಗೆ ರಾಜೀನಾಮೆ ಸಲ್ಲಿಸಿದ್ದರು. ಇದನ್ನು ರಾಜ್ಯಪಾಲರಿಗೆ ರವಾನಿಸಲಾಗಿತ್ತು.
ಶಾಸಕ ಸ್ಥಾನಕ್ಕೆ ಪ್ರಕಾಶ್ ಹುಕ್ಕೇರಿ ಅವರು ರಾಜೀನಾಮೆ ಸಲ್ಲಿಸಿರುವುದರಿಂದ ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಾಗಿದೆ. ಕ್ಷೇತ್ರದಲ್ಲಿ ಹುಕ್ಕೇರಿ ಅವರು ತಮ್ಮ ಪುತ್ರ ಗಣೇಶ್ ಹುಕ್ಕೇರಿ ಅವರನ್ನು ಕಣಕ್ಕಿಳಿಸಲಿದ್ದಾರೆ ಎಂಬ ಮಾತುಗಳಿವೆ.
ಚಿಕ್ಕೋಡಿ ಕ್ಷೇತ್ರದ ಫಲಿತಾಂಶ : ಲೋಕಸಭೆ ಚುನಾವಣೆಯಲ್ಲಿ 4,74,373 ಮತಗಳನ್ನು ಪಡೆದು ಪ್ರಕಾಶ್ ಹುಕ್ಕೇರಿ ಜಯಗಳಿಸಿದ್ದರು. ಹುಕ್ಕೇರಿ ಅವರಿಗೆ ಪ್ರಬಲ ಪೈಪೋಟಿ ನೀಡಿದ ಬಿಜೆಪಿಯ ರಮೇಶ್ ಕತ್ತಿ ಅವರು 4,71,370 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದರು. ಎಸ್ ಸಿಪಿಯ ಪ್ರತಾಪರಾವ್ ಪಾಟೀಲ 42,735 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. [ಮಾಹಿತಿ ಚುನಾವಣಾ ಆಯೋಗ]
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications