ಸಚಿವ ಸ್ಥಾನ ತೊರೆಯುತ್ತಾರಂತೆ ಪ್ರಕಾಶ್ ಹುಕ್ಕೇರಿ
ಬೆಂಗಳೂರು, ಮೇ 19 : ಪಕ್ಷದ ಒತ್ತಾಯಕ್ಕೆ ಕಟ್ಟುಬಿದ್ದು ಚಿಕ್ಕೋಡಿ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿರುವ ಸಚಿವ ಪ್ರಕಾಶ್ ಹುಕ್ಕೇರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಇದರಿಂದ ಹುಕ್ಕೇರಿ ಅವರ ಮುಂದಿನ ತೀರ್ಮಾನವೇನು? ಎಂಬ ಪ್ರಶ್ನೆಗೆ ಉತ್ತರ ದೊರಕಿದೆ.
ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನಗಳನ್ನು ಗಳಿಸಲಿ ಎಂಬ ಕಾರಣಕ್ಕಾಗಿ ಮುಜರಾಯಿ ಮತ್ತು ಸಕ್ಕರೆ ಖಾತೆ ಸಚಿವ ಪ್ರಕಾಶ್ ಹುಕ್ಕೇರಿ ಅವರನ್ನು ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿತ್ತು. 3,003 ಮತಗಳ ಅಂತರದಿಂದ ಅವರು ಜಯಗಳಿಸಿದ್ದರು. [ಕರ್ನಾಟಕದಲ್ಲಿ ಸೋತು ಗೆದ್ದವರು]

ಆದರೆ, ತಾವು ರಾಜ್ಯದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸುತ್ತೇನೆ. ದೆಹಲಿಗೆ ಹೋಗುವುದಿಲ್ಲ ಎಂದು ಪ್ರಕಾಶ್ ಹುಕ್ಕೇರಿ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದರು. ಆದರೆ, ಈ ಕುರಿತು ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ರಾಜ್ಯನಾಯಕರು ಹೇಳಿದ್ದರು.
ಸೋಮವಾರ ವಿಧಾನಸೌಧದಲ್ಲಿ ಮಾತನಾಡಿದ ಪ್ರಕಾಶ್ ಹುಕ್ಕೇರಿ, ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಸಂಸದನಾಗಿ ಮುಂದುವರೆಯುತ್ತೇನೆ ಎಂದು ಹೇಳಿದರು. ಆದ್ದರಿಂದ ಹುಕ್ಕೇರಿ ಅವರು ಚಿಕ್ಕೋಡಿ-ಸದಲಗಾ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದು, ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುವುದು ಖಚಿತವಾಗಿದೆ.
ಚಿಕ್ಕೋಡಿ ಕ್ಷೇತ್ರದ ಫಲಿತಾಂಶ : ಲೋಕಸಭೆ ಚುನಾವಣೆಯಲ್ಲಿ 4,74,373 ಮತಗಳನ್ನು ಪಡೆದು ಪ್ರಕಾಶ್ ಹುಕ್ಕೇರಿ ಜಯಗಳಿಸಿದ್ದರು. ಹುಕ್ಕೇರಿ ಅವರಿಗೆ ಪ್ರಬಲ ಪೈಪೋಟಿ ನೀಡಿದ ಬಿಜೆಪಿಯ ರಮೇಶ್ ಕತ್ತಿ ಅವರು 4,71,370 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದರು. ಎಸ್ ಸಿಪಿಯ ಪ್ರತಾಪರಾವ್ ಪಾಟೀಲ 42,735 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications