ಕರ್ನಾಟಕ ಬಿಜೆಪಿ ಚುನಾವಣೆ ಉಸ್ತುವಾರಿ ಜಾವ್ಡೇಕರ್ ಹೆಗಲಿಗೆ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 24 : 2018ರ ವಿಧಾನಸಭೆ ಚುನಾವಣೆಗೆ ಬಿಜೆಪಿ ತಯಾರಿ ಆರಂಭಿಸಿದ್ದು, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವರಾದ ಪ್ರಕಾಶ್ ಜಾವ್ಡೇಕರ್ ಹಾಗೂ ಪಿಯೂಶ್ ಗೋಯೆಲ್ ನೇಮಕಗೊಂಡಿದ್ದಾರೆ.

ಅಮಿತ್ ಶಾ ಕರ್ನಾಟಕಕ್ಕೆ ಬಂದ ಕಾರಣ ಬಿಚ್ಚಿಟ್ಟ ಎಚ್‌ಡಿಕೆ!

ಕರ್ನಾಟಕ ಬಿಜೆಪಿ ಚುನಾವಣೆ ಉಸ್ತುವಾರಿಯಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಹಾಗೂ ಸಹ ಉಸ್ತುವಾರಿಯಾಗಿ ಪಿಯೂಶ್ ಗೋಯೆಲ್ ಅವರನ್ನು ನೇಮಕಗೊಳಿಸಿ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.

Prakash Javadekar has been appointed as Karnataka BJP election in-charge

ಹಾಗೂ ರಾಜಕಾರಣದಲ್ಲಿ ಸಕ್ರಿಯರಾಗುವಂತೆ ಬಿ.ಎಲ್. ಸಂತೋಷ್ ಗೆ ಶಾ ಸೂಚಿಸಿದ್ದಾರೆ. ಅಮಿತ್ ಶಾ ಸೂಚನೆಗೆ ಮೇರೆಗೆ ಇದಕ್ಕೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒಪ್ಪಿಗೆ ಸೂಚಿಸಿದ್ದು, ಬಿಜೆಪಿ ಯುವಮೋರ್ಚಾ ಮಂಗಳೂರು ಚಲೋ ಸಂಪೂರ್ಣ ಜವಾಬ್ದಾರಿಯನ್ನು ಸಂತೋಷ್ ಹೆಗಲಿಗೆ ಹೊರಿಸಲಾಗಿದೆ.

ರಾಜ್ಯದಲ್ಲಿ ಬಿಜೆಪಿ ಸಂಘಟನೆ ಕುಸಿದಿರುವ ಹಿನ್ನಲೆಯಲ್ಲಿ ಮುಂಬರುವ ಚುನಾವಣೆ ದೃಷ್ಠಿಯಿಂದ ಶಾ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸಂತೋಷ್ ಅವರು ರಾಜ್ಯ ರಾಜಕಾರಣಕ್ಕೆ ಮರಳಿರುವುದರಿಂದ ಯಡಿಯೂರಪ್ಪ ಅವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಈ ಹಿಂದೆ ಬಿಎಸ್ ವೈ ಹಾಗೂ ಸಂತೋಷ ಅವರ ನಡುವೆ ಮುಸುಕಿನ ಗುದ್ದಾಟಗಳು ನಡೆದಿದ್ದವು. ಇದೀಗ ಸಂತೋಷ್ ಅವರನ್ನು ರಾಜ್ಯ ರಾಜಕಾರಣಕ್ಕೆ ಕಳುಹಿಸುತ್ತಿರುವುದರಿಂದ ತೀವ್ರ ಕುತೂಹಲಗಳಿಗೆ ಎಡೆ ಮಾಡಿ ಕೊಟ್ಟಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Union minister Prakash Javadekar has been appointed as BJP election in-charge of Karnataka for the upcoming polls.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ