Prakash Raj: ಸೌಜನ್ಯಾಳ ಹತ್ಯೆಗೆ ನ್ಯಾಯ ಕೇಳಿದರೆ ಇವರಿಗೇಕೆ ಕೋಪ : ನಟ ಪ್ರಕಾಶ್ ರಾಜ್ ವಿಡಿಯೋ ವೈರಲ್!

ಬೆಂಗಳೂರು, ಆಗಸ್ಟ್‌ 07: ಧರ್ಮಸ್ಥಳದಲ್ಲಿ ಅನುಮಾನಾಸ್ಪವಾಗಿ ನೂರಾರು ಸಾವುಗಳ ಆರೋಪ ಕುರಿತು ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳು ಉತ್ಖನನ ನಡೆಸಲಿದ್ದಾರೆ. ಇತ್ತ ರಾಜ್ಯದಲ್ಲಿ ಮತ್ತೆ ಸೌಜನ್ಯ ಪರ ಹೋರಾಟ ಮುಂದುವರೆದಿದೆ. ನಿನ್ನೆ ಧರ್ಮಸ್ಥಳದಲ್ಲಿ ಸೌಜನ್ಯ ಪರ ಹೋರಾಟಗಾರರು ಹಾಗೂ ಸ್ಥಳೀಯ ಗ್ರಾಮಸ್ಥರ ನಡುವೆ ಹೊಡೆದಾಟವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ.ಸೌಜನ್ಯ ವಿಚಾರವಾಗಿ ಪ್ರಶ್ನೆ ಕೇಳುತ್ತಿದ್ದ , ಯೂಟ್ಯೂಬರ್‌ಗಳಿಗೆ ಧರ್ಮದೇಟು ನೀಡಲಾಗಿದೆ. ಕ್ಷೇತ್ರಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಈ ಘಟನೆ ಬೆನ್ನಲ್ಲೇ ಮತ್ತೆ ಪರ-ವಿರೋಧ ಚರ್ಚೆ ಶುರುವಾಗಿದ್ದು, ಯುಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಹಾಗೂ ಬಹುಭಾಷಾ ನಟ ಪ್ರಕಾಶ್ ಕಿಡಿಕಾರಿದ್ದಾರೆ.

Prakash Raj Questions Why They Are Angry If Justice Is Sought For Sowjanya Murder

ಯೂಟ್ಯೂಬರ್‌ ಗಳ ಮೇಲೆ ಹಲ್ಲೆ ಘಟನೆ ಕುರಿತು ಪ್ರಕಾಶ್ ರಾಜ್ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸೌಜನ್ಯ ಪರ ದನಿ ಎತ್ತಿದ ನಿಷ್ಠಾವಂತ ಪತ್ರಕರ್ತರ ಮೇಲೆ ಹಲ್ಲೆ ನಡೆದಿದ್ದನ್ನು ಖಂಡಿಸಿದ್ದಾರೆ.ಇಂಥ ಗೂಂಡಾಗಳಿಂದಲೇ ಲಕ್ಷಾಂತರ ಜನರು ಪೂಜಿಸುವ ಧರ್ಮಸ್ಥಳಕ್ಕೆ ಕೆಟ್ಟ ಹೆಸರು ಹಾಗೂ ಕಳಂಕ ಎಂದಿರುವ ಪ್ರಕಾಶ್ ರಾಜ್ ಸೌಜನ್ಯಗೆ ನ್ಯಾಯ ಕೇಳಿದರೆ ಇವರಿಗೇನು ಕಷ್ಟ? ಇವರ ಹಿಂದೆ ಯಾರಿದ್ದಾರೆ? ಇವರನ್ನು ಕಳುಹಿಸಿ ಹೊಡೆಸುತ್ತಿರುವವರು ಯಾರು? ಎಂಬ ಅನುಮಾನ ಹೆಚ್ಚಾಗುತ್ತಿದೆ. ಪೊಲೀಸರು ಈ ಗೂಂಡಾಗಳನ್ನು ಬಂಧಿಸಬೇಕು ಎಂದು ನಟ ಪ್ರಕಾಶ್‌ ರಾಜ್ ಆಗ್ರಹಿಸಿದ್ದಾರೆ.

‌ಧರ್ಮಸ್ಥಳದಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ಮಾಧ್ಯಮ ಮಿತ್ರರ ಮೇಲಿನ ಹಲ್ಲೆ ಖಂಡನಾರ್ಹ.. ಇಂತಹ ಗೂಂಡಾಗಳಿದಲೇ ಭಕ್ತಾದಿಗಳು ನಂಬುವ ಧರ್ಮಸ್ಥಳಕ್ಕೆ ಕಳಂಕ ಬಂದಿರುವುದು.. ಸೌಜನ್ಯಾಳ ದಾರುಣ ಹತ್ಯೆಗೆ ನ್ಯಾಯ ಕೇಳಿದರೆ ಇವರಿಗೇಕೆ ಕೋಪ.. ದಯವಿಟ್ಟು ಬಂಧಿಸಿ ಸತ್ಯ ಹೊರತನ್ನಿ ಎಂದು ನಟ ಪ್ರಕಾಶ್‌ ರಾಜ್‌ ಮನವಿ ಮಾಡಿದ್ದಾರೆ.

ಸೌಜನ್ಯ ವಿಚಾರವನ್ನು ಹಿಡಿದುಕೊಂಡು ಧರ್ಮಸ್ಥಳ ಕ್ಷೇತ್ರ, ವೀರೇಂದ್ರ ಹೆಗ್ಗಡೆ ಹಾಗೂ ಧರ್ಮಾಧಿಕಾರಿ ಪೀಠಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದು ಹೇಳಿರುವ ಗ್ರಾಮಸ್ಥರು ಯೂಟ್ಯೂಬರ್‌ಗಳಿಗೆ ಧರ್ಮದೇಟು ನೀಡಿ ಕ್ಷೇತ್ರದಿಂದ ಓಡಿಸಿದ್ದಾರೆ. ಸೌಜನ್ಯ ಅನ್ನೋ ನಮ್ಮ ಹೆಣ್ಣುಮಗಳ ಮೇಲೆ ಇಂಥ ದಾರುಣ ಹತ್ಯೆ ಯಾಕೆ ನಡೆಯಿತು ಅಂತಾ ಕೇಳಿದರೆ ಈ ಗೂಂಡಾಗಳಿಗೆ ಯಾಕೆ ಕಿರಿಕಿರಿ ಆಗ್ತಾ ಇದೆ? ಯಾಕೆ ಕೋಪ ಬರ್ತಾ ಇದೆ? ಇವರ ಹಿಂದೆ ಯಾರಿದ್ದಾರೆ? ಯಾರು ಕಳಿಸಿ ಇವರಿಗೆ ಹೀಗೆ ಹೊಡೆಸುತ್ತಿದ್ದಾರೆ? ಅನುಮಾನ ಜಾಸ್ತಿ ಆಗ್ತಾ ಇದೆ. ಇದರ ಸತ್ಯಾಸತ್ಯತೆಯನ್ನು ತಿಳಿಸಬೇಕು. ಜನ ಅರ್ಥ ಮಾಡಿಕೊಳ್ಳಿ. ನ್ಯಾಯ ಕೇಳೋದು ನಮ್ಮ ಕರ್ತವ್ಯ, ನಮ್ಮ ಹಕ್ಕು ಎಂದು ಪ್ರಕಾಶ್‌ ರಾಜ್‌ ವಿಡಿಯೋದಲ್ಲಿ ಮಾತನಾಡಿದ್ದಾರೆ.

ಅಷ್ಟಕ್ಕೂ ಆಗಿದ್ದೇನು?

ಬಿಗ್‌ಬಾಸ್‌ ಸ್ಪರ್ಧಿ ರಜತ್‌ ಅವರು ನಿನ್ನೆ (ಬುಧವಾರ) ಧರ್ಮಸ್ಥಳಕ್ಕೆ ಭೇಟಿ ನೀಡಿ ಸೌಜನ್ಯ ಮನೆಗೆ ಹೋಗುವ ಪ್ರಯತ್ನ ಮಾಡಿದ್ದರು. ಈ ವೇಳೆ ಕೆಲ ಯೂಟ್ಯೂಬರ್‌ಗಳು ರಜತ್‌ರನ್ನು ನಿಲ್ಲಿಸಿ ಅವರಿಗೆ ಸೌಜನ್ಯ ಪರವಾಗಿ ಕೆಲವು ಪ್ರಶ್ನೆಗಳನ್ನು ಕೇಳುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಭಕ್ತರು ಅವರೊಂದಿಗೆ ಹಲ್ಲೆ ಮಾಡಿದ್ದಾರೆ. ಮಾತುಕತೆ ವಿಕೋಪಕ್ಕೆ ಹೋದ ಬಳಿಕ ಸ್ಥಳೀಯ ಗ್ರಾಮಸ್ಥರು ಯೂಟ್ಯೂಬರ್‌ಗೆ ಧರ್ಮದೇಟು ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+