INDIA: ಇಂಡಿಯಾ ಮೈತ್ರಿಕೂಟ ಮಾಡಿದ್ದೇಕೆ? ಎಂದು ಕಾರಣ ಬಿಚ್ಚಿಟ್ಟ ಪ್ರಹ್ಲಾದ್ ಜೋಶಿ
ಧಾರವಾಡ, ಡಿಸೆಂಬರ್ 11: ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಇವೆರಡೂ ಒಂದೇ ನಾಣ್ಯದ ಎರಡು ಮುಖಗಳು. ಇದೂ ಮೊದಲಿನಿಂದಲೂ ಗೊತ್ತಿರುವ ವಿಚಾರ ಎದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಇಂಡಿಯಾ ಮೈತ್ರಿಕೂಟ (INDIA Alliance) ಮಾಡಿಕೊಂಡಿದ್ದೇಕೆ ಎಂಬ ಕಾರಣ ಬಿಚ್ಚಿಟ್ಟಿದ್ದಾರೆ.
ಭಾನುವಾರ ಧಾರವಾಡ ತಾಲೂಕಿನ ಉಪ್ಪಿನ ಬೇಟಗೇರಿ ಗ್ರಾಮದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಇತ್ತೀಚೆಗೆ ಇಂಡಿ ಅಲೈನ್ಸ್ ಎಂದು ಮಾಡಿದರು. ಯುಪಿಎ ಇದ್ದದ್ದನ್ನು ಇಂಡಿ ಅಲೈನ್ಸ್ ಯಾಕೆ ಮಾಡಿದರೆಂದರೆ ಯುಪಿಎದಲ್ಲಿ 12 ಲಕ್ಷ ಕೋಟಿಗಿಂತಲೂ ಹೆಚ್ಚು ಹಗರಣ ನಡೆದಿವೆ. ಅದಕ್ಕೆ ಬ್ರ್ಯಾಂಡ್ ನೇಮ್ ಹಾಳಾಗಿತ್ತು ಈಗ ಹೊಸ ಹೆಸರಿನಲ್ಲಿ ಟೊಪ್ಪಿಗೆ ಹಾಕಲು ತೀರ್ಮಾನಿಸಿ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು.

ಇನ್ನು ಮೂರೂ ರಾಜ್ಯಗಳಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಒಂದು ರಾಜ್ಯದಲ್ಲಿ ಮಾತ್ರ ಸ್ಥಳೀಯ ಕಾರಣದಿಂದ ಕಾಂಗ್ರೆಸ್ ಬಂದಿದೆ. ಕಾಂಗ್ರೆಸ್ ಪಾರ್ಟಿ ಅಂದರೆ ಅದೂ ಸಿಸಿಪಾರ್ಟಿ, ಕಾಂಗ್ರೆಸ್ ಭ್ರಷ್ಟಚಾರದ ಪಾರ್ಟಿ ಎಂದು ಜೋಶಿ ಕುಟುಕಿದರು.
ಬಿಜೆಪಿ ತೀರ್ಮಾನಕ್ಕೆ ನಾಯಕರು ಬದ್ಧ
ರಾಜಸ್ಥಾನ ಬಿಜೆಪಿಯಲ್ಲಿ ಭಿನ್ನಮತ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಎಲ್ಲವೂ ಸುಳ್ಳು, ವಸುಂಧರಾ ರಾಜೆ ಸೇರಿ ಎಲ್ಲರೂ ನನ್ನ ಸಂಪರ್ಕದಲ್ಲಿದ್ದಾರೆ. ಎಲ್ಲರೂ ನನ್ನೊಂದಿಗೆ ನೇರ ಸಂಪರ್ಕದಲ್ಲಿದ್ದಾರೆ. ಬಿಜೆಪಿ ರಾಷ್ಟ್ರೀಯ ನೇತೃತ್ವದಲ್ಲಿ ತೀರ್ಮಾನ ಆಗುತ್ತದೆ. ಈ ತಿರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದು ತಿಳಿಸಿದರು.

ಸಾವರ್ಕರ್ ಫೋಟೊ: ಸ್ಪೀಕರ್‌ಗೆ ಅಭಿನಂದನೆ
ಈಗ ರಾಜ್ಯದ ಸುವರ್ಣ ವಿಧಾನಸೌಧದ ಸಾವರ್ಕರ್ ಫೋಟೋ ವಿಚಾರದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಅಭಿನಂದನೆ ಸಲ್ಲುಸುತ್ತೇನೆ. ಸಾವರ್ಕರ್ ಫೋಟೋ ವಿಷಯದಲ್ಲಿ ವಿಧಾನಸಭೆ ಸ್ಪೀಕರ್ ನಿಲುವಿಗೆ ಅಭಿನಂದಿಸುತ್ತೇನೆ. ನಾನು ಕಿತ್ತು ಒಗೆಯಲು ಬಂದಿಲ್ಲ ಜೋಡಿಸಲು ಬಂದಿದ್ದೇನೆ ಎಂದಿದ್ದಾರೆ. ಈ ನಿಲುವು ಹಾಗೆಯೇ ಇರಬೇಕು ಆಗ ಸದನ ಯಾವುದೇ ವಿವಾದ ಇಲ್ಲದೇ ನಡೆಯುತ್ತದೆ.
ಸಾವರ್ಕರ್ ವಿಚಾರಧಾರೆ ಒಪ್ಪುವುದು ಬಿಡುವುದು ನಿಮಗೆ ಬಿಟ್ಟಿದ್ದು, ಆದರೆ ಸಾವರ್ಕರ್ ವಿಚಾರಧಾರೆ ಅನುಸರಿಸುವವರು ಅನೇಕರಿದ್ದಾರೆ. ಹೀಗಾಗಿ ಅಂಥ ವಿಚಾರಧಾರೆಯವರ ಫೋಟೋ ಕಿತ್ತು ಒಗೆಯುತ್ತೇನೆ ಎನ್ನುವುದು ಅಂಹಕಾರ ಎಂದು ಹೇಳಿದರು.
ನೆಹರು ಫೋಟೊ: ಖರ್ಗೆಗೆ ಜೋಶಿ ಟಾಂಗ್
ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಹೇಳಿಕೆ ಕೊಟ್ಟಿದ್ದರು, ಅದಕ್ಕೆ ಕಾಂಗ್ರೆಸ್ ಬೆಂಬಲಿಸಿತ್ತು. ಅದರ ಪರಿಣಾಮ ಮೂರು ರಾಜ್ಯದಲ್ಲಿ ಸೋಲು ಅನುಭವಿಸಿದ್ದಾರೆ. ಈಗ ಪ್ರಿಯಾಂಕ್ ಖರ್ಗೆಯವರು ಅಂತಹ ಮಾತುಗಳನ್ನು ಹೇಳುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಜನ ಇನ್ನೂ ಹೆಚ್ಚು ಇವರನ್ನು ಅರ್ಥ ಮಾಡಿಕೊಳ್ಳುತ್ತಾರೆ. ನೆ
ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ವಿಚಾರಗಳ ಬಗ್ಗೆ ನಮಗೆ ಭಿನ್ನಾಭಿಪ್ರಾಯ ಇದೆ. ಹಾಗಂತ ನಾವು ನೆಹರೂ ಫೋಟೊ ತೆಗೆಯುತ್ತೇನೆ ಎನ್ನಲಾಗುತ್ತದಾ?, ನೆಹರುರನ್ನು ಒಪ್ಪುವವರು ಅನೇಕರಿದ್ದಾರೆ. ಹೀಗಾಗಿ ಫೋಟೋ ತೆಗೆಯುವ ವಿಚಾರ ಸರಿಯಲ್ಲ ಎಂದು ಪ್ರಿಯಾಂಕ್ ಖರ್ಗೆಯವರಿಗೆ ಜೋಶಿ ಟಾಂಗ್ ನೀಡಿದರು.












Click it and Unblock the Notifications