Ganesha Chaturthi 2023: ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆ?

ದೇಶಾದ್ಯಂತ ಗಣೇಶ ಚತುರ್ಥಿಗೆ ಅಬ್ಬರದ ತಯಾರಿ ನಡೆಸಲಾಗಿದೆ. ಆದ್ರೆ ಇದೇ ಸಂದರ್ಭ ಹುಬ್ಬಳ್ಳಿಯ ಗಣೇಶೋತ್ಸವ ಚರ್ಚೆಗೆ ಬಂದಿದೆ. ಅದರಲ್ಲೂ ಕೇಂದ್ರ ಸಚಿವರು ಕೇಳಿರುವ ಪ್ರಶ್ನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ. ಕಳೆದ ಬಾರಿಯಂತೆ ಈ ಬಾರಿ ಕೂಡ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ನಡೆಯುತ್ತಾ? ಎಂಬ ಪ್ರಶ್ನೆ ಮೂಡಿದೆ. ಹಾಗಾದರೆ ಕೇಂದ್ರ ಸಚಿವರು ಕೇಳಿದ ಪ್ರಶ್ನೆ ಏನು?

ಹೌದು ಕೇಂದ್ರ ಸಚಿವ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಸಂಸದ ಪ್ರಹ್ಲಾದ್ ಜೋಶಿ ಅವರು ಒಂದು ಟ್ವೀಟ್ ಮಾಡಿದ್ದಾರೆ. ಆ ಟ್ವೀಟ್‌ನಲ್ಲಿ ಹುಬ್ಬಳ್ಳಿ ಈದ್ಗಾ ಮೈದಾನದ ಬಗ್ಗೆ ಪ್ರಸ್ತಾಪ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಕಳೆದ ವರ್ಷ ಕೋರ್ಟ್ ಅನುಮತಿಯಂತೆ ಗಣಪತಿ ಕೂರಿಸಿ ಅತ್ಯಂತ ಶಾಂತಿಯುತವಾಗಿ ಸಾರ್ವಜನಿಕ ಗಣೇಶೋತ್ಸವ ಆಚರಿಸಲಾಗಿತ್ತು. ಈ ಬಾರಿ ಅನುಮತಿ ನೀಡಲ್ಲ, ಹೀಗಾಗಿ ಈ ಬಾರಿ ಕೂಡ ಅನುಮತಿ ನೀಡಿ ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ. ಹಾಗಾದರೆ ಕೇಂದ್ರ ಸಚಿವರ ಟ್ವೀಟ್‌ನಲ್ಲಿ ಏನಿದೆ? ಮುಂದೆ ಓದಿ.

celebrate-ganesh-chaturthi-in-hubballi-idgah

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ?

ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, 'ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಮತ್ತು ನಮ್ಮ ಹುಬ್ಬಳ್ಳಿ ಧಾರವಾಡದಲ್ಲೂ ಗಣೇಶೋತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಹುಬ್ಬಳ್ಳಿ ಚೆನ್ನಮ್ಮ ಮೈದಾನದಲ್ಲಿ(ಈದ್ಗಾ) ಕಳೆದ ವರ್ಷ ನ್ಯಾಯಾಲಯದ ಅನುಮತಿಯಂತೆ ಗಣಪತಿ ಕೂರಿಸಿ ಅತ್ಯಂತ ಶಾಂತಿಯುತವಾಗಿ ಸಾರ್ವಜನಿಕ ಗಣೇಶೋತ್ಸವ ಆಚರಿಸಲಾಗಿತ್ತು. ಆದರೆ ಈ ಬಾರಿ ರಾಜ್ಯ ಸರಕಾರ ಜಿಲ್ಲಾಡಳಿತದ ಮೂಲಕ ಚೆನ್ನಮ್ಮ ಮೈದಾನದಲ್ಲಿ ಗಣಪತಿ ಕೂರಿಸಲು ಅನುಮತಿ ನೀಡದೆ ಹಬ್ಬಕ್ಕೆ ಅಡ್ಡಿಪಡಿಸುತ್ತಿದೆ.' ಎಂದು ಆರೋಪಿಸಿದ್ದಾರೆ.

'ಹಿಂದೂಗಳ ಹಬ್ಬಕ್ಕೆ ಅನುಮತಿ ನೀಡಿ'

ಹಾಗೇ ತಮ್ಮ ಮಾತನ್ನು ಮುಂದುವರಿಸಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, 'ಹಿಂದೂಗಳ ಪವಿತ್ರ ಹಬ್ಬ ಗಣೇಶ ಚತುರ್ಥಿ ವಿಜೃಂಭಣೆಯಿಂದ ನಡೆಸಲು ಸರಕಾರ ಈ ಕೂಡಲೇ ಜಿಲ್ಲಾಡಳಿತಕ್ಕೆ ಸೂಚಿಸಿ ಅನುಮತಿ ನೀಡಬೇಕೆಂದು ಆಗ್ರಹಿಸುತ್ತೇನೆ.' ಎಂದು ಟ್ವೀಟ್ ಪೋಸ್ಟ್‌ನಲ್ಲಿ ಆಗ್ರಹಿಸಿದ್ದಾರೆ. ಆದರೆ ಈ ಬಗ್ಗೆ ಅಧಿಕಾರಿಗಳಿಂದ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹೀಗಾಗಿ ಗಣೇಶ ಚತುರ್ಥಿ ಸಂದರ್ಭ ಈ ವಿವಾದ ಮತ್ತಷ್ಟು ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ.

ಒಟ್ನಲ್ಲಿ ಇನ್ನೇನು ಗಣೇಶ ಚತುರ್ಥಿ ಆಗಮಿಸಲಿದ್ದು, ಗಣೇಶೋತ್ಸವ ಅದ್ಧೂರಿ ಆಚರಣೆಗೆ ಸಕಲ ಸಿದ್ಧತೆ ಸಾಗಿದೆ. ಇದೇ ವೇಳೆ ಹುಬ್ಬಳ್ಳಿ ಈದ್ಗಾ ಮೈದಾನ ವಿಚಾರ ಕೂಡ ಪ್ರಸ್ತಾಪ ಆಗಿದೆ. ಇದೀಗ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಆಗ್ರಹಕ್ಕೆ ಕರ್ನಾಟಕ ಸರ್ಕಾರ & ಜಿಲ್ಲಾಡಳಿತದ ಅಧಿಕಾರಿಗಳು ಯಾವ ರೀತಿ ಉತ್ತರ ನೀಡುತ್ತಾರೆ? ಅನ್ನೋದನ್ನು ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+