ಪ್ರಮೀಳಾ ನಾಯ್ಡು ರಾಜ್ಯ ಮಹಿಳಾ ಆಯೋಗದ ನೂತನ ಅಧ್ಯಕ್ಷೆ
ಬೆಂಗಳೂರು, ಮಾರ್ಚ್ 6: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಪ್ರಮೀಳಾ ನಾಯ್ಡು ಅವರನ್ನು ನೇಮಿಸಲಾಗಿದೆ.
ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ, ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಆಡಳಿತ ವ್ಯಾಪ್ತಿಗೆ ರಾಜ್ಯ ಮಹಿಳಾ ಆಯೋಗ ಬರುತ್ತದೆ.

ಇಲಾಖೆಯ ಜಂಟಿ ಕಾರ್ಯದರ್ಶಿ ಆರ್ ಕಲ್ಪನಾ ಅವರು ಆದೇಶ ಹೊರಡಿಸಿದ್ದು, ಪ್ರಮೀಳಾ ನಾಯ್ಡು ಆರ್, ಬೆಂಗಳೂರು ಇವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನಾಮ ನಿರ್ದೇಶನ ಮಾಡಿ ನೇಮಿಸಲಾಗಿದೆ.

ದಿನಾಂಕ 31.-07-2019ರಂದು ಹೊರಡಿಸಲಾಗಿದ್ದ ಅಧಿಸೂಚನೆಯನ್ನು ರದ್ದುಪಡಿಸಿರುವ ಸರ್ಕಾರ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ನೂತನ ಅಧ್ಯಕ್ಷೆಯಾಗಿ ಪ್ರಮೀಳಾ ನಾಯ್ಡು ಆರ್ ನೇಮಕೊಂಡಿದ್ದಾರೆ ಎಂದು ಮಾರ್ಚ್ 05 ದಿನಾಂಕದಂದು ಹೊರಡಿಸಿರುವ ಆದೇಶದಲ್ಲಿ ಹೇಳಲಾಗಿದೆ.












Click it and Unblock the Notifications