Breaking; ಪ್ರಮೋದ್‌ ಮಧ್ವರಾಜ್‌, ವರ್ತೂರ್‌ ಪ್ರಕಾಶ್‌ ಬಿಜೆಪಿಗೆ

ಬೆಂಗಳೂರು, ಮೇ 07; ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಮತ್ತು ವರ್ತೂರ್‌ ಪ್ರಕಾಶ್‌ ಬಿಜೆಪಿ ಸೇರಿದರು. ಪ್ರಮೋದ್ ಮಧ್ವರಾಜ್ ಶನಿವಾರ ಮಧ್ಯಾಹ್ನ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ಶನಿವಾರ ಸಂಜೆ ದೆಹಲಿಯ ಪರಾಗ್ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಸಮ್ಮುಖದಲ್ಲಿ ಉಭಯ ನಾಯಕರು ಪಕ್ಷ ಸೇರಿದರು.

ಇದೇ ಸಂದರ್ಭದಲ್ಲಿ ಮಾಜಿ ಸಂಸದರಾದ ಕೆ. ಬಿ. ಕೃಷ್ಣಮೂರ್ತಿ, ಮಾಜಿ ಶಾಸಕ ಮಂಜುನಾಥ ಗೌಡ, ಮಾಜಿ ಪರಿಷತ್‌ ಸದಸ್ಯರಾದ ಸಂದೇಶ್‌ ನಾಗರಾಜ್‌ ಸಹ ಬಿಜೆಪಿಗೆ ಸೇರ್ಪಡೆಗೊಂಡರು.‌

Pramod Madhwaraj And Varthur Prakasha Joins BJP

ಮಂಡ್ಯ ಜಿಲ್ಲೆಯ ಅಶೋಕ್‌ ಜಯರಾಮ್, ಮಾಜಿ ಐಆರ್‌ಎಸ್‌ ಅಧಿಕಾರಿ ಡಾ. ಲಕ್ಷ್ಮಿ ಅಶ್ವಿನ್‌ ಗೌಡ ಅವರು ಬೆಂಬಲಿಗರ ಜೊತೆ ಬಿಜೆಪಿಗೆ ಸೇರ್ಪಡೆಯಾದರು. ನಳಿನ್ ಕುಮಾರ್ ಕಟೀಲ್ ಪಕ್ಷದ ಧ್ವಜ ನೀಡಿ ಎಲ್ಲಾ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡರು.

Pramod Madhwaraj And Varthur Prakasha Joins BJP

ವರ್ತೂರ್‌ ಪ್ರಕಾಶ್‌; 2018ರ ವಿಧಾನಸಭೆ ಚುನಾವಣೆ ಸಮಯದಲ್ಲಿ ನಮ್ಮ ಕಾಂಗ್ರೆಸ್ ಎಂಬ ಪಕ್ಷ ಕಟ್ಟಿದ್ದ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗ ವರ್ತೂರು ಪ್ರಕಾಶ್ ಸೋಲು ಕಂಡಿದ್ದರು. ಬಳಿಕ ಗ್ರಾಮ ಪಂಚಾಯಿತಿ, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಿಸಿದ್ದರು.

ಪ್ರಮೋದ್ ಮಧ್ವರಾಜ್; ಉಡುಪಿ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಶನಿವಾರ ಕಾಂಗ್ರೆಸ್ ಪಕ್ಷ ತೊರೆದಿದ್ದರು. 2013ರ ಚುನಾವಣೆಯಲ್ಲಿ ಗೆದ್ದು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಅವರು 2018ರ ಚುನಾವಣೆಯಲ್ಲಿ ಸೋಲು ಕಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+