ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಇವರೇನಾ?

|
Google Oneindia Kannada News

ಬೆಂಗಳೂರು, ಫೆ. 18: ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆಯಾ? ಹೌದು ಎಂಬಂತಿವೆ ಬಿಜೆಪಿಯಲ್ಲಿನ ಬೆಳವಣಿಗೆಗಳು. ಇತ್ತೀಚಿಗಷ್ಟೇ ಬಿಜೆಪಿ ಮೂಲ ಶಾಸಕರು ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಪತ್ರ ಬರೆದಿದ್ದರು. ರಾಜ್ಯ ಬಿಜೆಪಿ ಸರ್ಕಾರ ಬಿಜೆಪಿ ಸಿದ್ದಾಂತವನ್ನು ಕಡೆಗಣಿಸುತ್ತಿದೆ ಎಂದು ಪತ್ರದಲ್ಲಿ ಆರೋಪಿಸಿದ್ದರು. ಜೊತೆಗೆ ಈ ಬಗ್ಗೆ ಚರ್ಚೆ ಮಾಡಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯುವಂತೆಯೂ ಸರ್ಕಾರದ ಮುಖ್ಯ ಸಚೇತಕ, ಕಾರ್ಕಳ ವಿ. ಸುನೀಲ್ ಕುಮಾರ್ ಅವರು ಪತ್ರ ಬರೆದು ಒತ್ತಾಯಿಸಿದ್ದರು.

ಇದೇ ಸಂದರ್ಭದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯೂ ಸೇರಿದಂತೆ ಮೂರು ವಿಧಾನಸಭೆಯ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗಿದೆ. ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ದಿ. ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಕಿರಿಯ ಪುತ್ರಿ ಹಾಗೂ ಸಚಿವ ಜಗದೀಶ್ ಶೆಟ್ಟರ್ ಅವರ ಸೊಸೆ ಶ್ರದ್ಧಾ ಶೆಟ್ಟರ್ ಅವರು ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು.

ಆದರೆ ಇದೀಗ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ ಎಂಬ ಚರ್ಚೆ ತೀವ್ರವಾಗಿದೆ. ಅದಕ್ಕೆ ಪೂರಕವಾಗಿ ನಿನ್ನೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಕುಮಾರ್ ಅವರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ.

ಬೆಂಗಳೂರಿಗೆ ಬಂದ ಉಸ್ತುವಾರಿ

ಬೆಂಗಳೂರಿಗೆ ಬಂದ ಉಸ್ತುವಾರಿ

ರಾಜ್ಯ ಬಿಜೆಪಿಯಲ್ಲಿ ಸ್ಥಾನ ಬದಲಾವಣೆ ಕುರಿತು ಹೇಳಿಕೆ ನೀಡಿ ಮುಜುಗುರವನ್ನುಂಟು ಮಾಡಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೋಟಿಸ್​ ಜಾರಿ ಮಾಡಿದೆ. ಇದೇ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್ ಅವರು ಬೆಂಗಳೂರಿಗೆ ಬಂದಿದ್ದಾರೆ. ನಾಲ್ಕು ಉಪ ಚುನಾವಣೆಗಳ ಹಿನ್ನೆಲೆಯಲ್ಲಿ ಎಲ್ಲವೂ ಸರಿಯಾಗಿದೆ ಎಂಬ ಸಂದೇಶವನ್ನು ಪಕ್ಷ ಕಾರ್ಯಕರ್ತರಿಗೆ ರವಾನಿಸಲು ಅರುಣ್ ಸಿಂಗ್ ಅವರು ಪ್ರಯತ್ನಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಆಗಿದೆ.

ಶ್ರದ್ದಾ ಶೆಟ್ಟರ್‌ಗೆ ಟಿಕೆಟ್ ಇಲ್ಲವಾ?

ಶ್ರದ್ದಾ ಶೆಟ್ಟರ್‌ಗೆ ಟಿಕೆಟ್ ಇಲ್ಲವಾ?

ಬೆಳಗಾವಿನ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಶ್ರದ್ಧಾ ಶೆಟ್ಟರ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿತ್ತು. ಅದಕ್ಕೆ ಹೈಕಮಾಂಡ್ ಕೂಡ ಒಪ್ಪಿದೆ ಎಂಬ ಮಾತುಗಳು ರಾಜ್ಯ ಬಿಜೆಪಿ ವಲಯದಿಂದಲೇ ಕೇಳಿ ಬಂದಿದ್ದವು. ಅದಕ್ಕೆ ಪುಷ್ಠಿಕೊಡುವಂತೆ ಶ್ರದ್ಧಾ ಶೆಟ್ಟರ್ ಅವರು ಬಿಜೆಪಿಯ ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಆದರೆ ಇದೀಗ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ ದಿಕ್ಕು ಬದಲಾಗುವಂತೆ ಕಾಣುತ್ತಿದೆ.

ಕತೂಹಲ ಮೂಡಿಸಿದ ಭೇಟಿ

ಕತೂಹಲ ಮೂಡಿಸಿದ ಭೇಟಿ

ಮಹತ್ವದ ಬೆಳವಣಿಗೆಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಅರುಣ್ ಸಿಂಗ್ ಅವರನ್ನು ಕುಮಾರಕೃಪ ಅತಿಥಿಗೃಹದಲ್ಲಿ ಭೇಟಿ ಮಾಡಿದ್ದ ಮುತಾಲಿಕ್ ಅವರು, ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ.


ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ್ದ ಪ್ರಮೋದ್ ಮುತಾಲಿಕ್ ಅವರು ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಬೆಳಗಾವಿ ಲೋಕಸಭೆಯ ಉಪ ಚುನಾವಣೆಯಲ್ಲಿ ಸ್ಪರ್ಧೆ ಆಕಾಂಕ್ಷಿಯಾಗಿರುವ ಅವರು, ಬಿಜೆಪಿಯಿಂದ ತಮಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಅರುಣ್ ಸಿಂಗ್ ಭರವಸೆ

ಅರುಣ್ ಸಿಂಗ್ ಭರವಸೆ

ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರ ಬೇಡಿಕೆಗೆ ಅರುಣ್ ಸಿಂಗ್ ಅವಾರು ಸ್ಪಂಧಿಸಿದ್ದಾರೆ ಎನ್ನಲಾಗಿದೆ. ಸ್ಪರ್ಧೆ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುತ್ತೇನೆ ಎಂಬ ಭರವಸೆಯನ್ನು ಮುತಾಲಿಕ್ ಅವರಿಗೆ ಸಿಂಗ್ ಕೊಟ್ಟಿದ್ದಾರೆ. ಹೀಗಾಗಿ ಈ ಭೇಟಿ ರಾಜ್ಯ ಬಿಜೆಪಿ ನಾಯಕರಲ್ಲಿ ಸಂಚಲನ ಸೃಷ್ಟಿಸಿದೆ. ಒಂದೊಮ್ಮೆ ಪ್ರಮೋದ್ ಮುತಾಲಿಕ್ ಅವರಿಗೆ ಬಿಜೆಪಿ ಟಿಕೆಟ್ ಕೊಟ್ಟಲ್ಲಿ ಉಗ್ರ ಹಿಂದುತ್ವವಾದವನ್ನು ಪ್ರತಿಪಾದಿಸಿದಂತಾಗುತ್ತಿದೆ. ಸಿದ್ದಾಂತದಿಂದ ರಾಜ್ಯ ಬಿಜೆಪಿ ಸರ್ಕಾರ ದೂರಬ ಸರಿಯುತ್ತಿದೆ ಎಂಬ ಭಾವನೆಯನ್ನು ಬಿಜೆಪಿ ಶಾಸಕರಿಂದ ತೆಗೆದು ಹಾಕಲು ಸಾಧ್ಯವಾಗುತ್ತದೆ ಎಂಬುದು ಹೈಕಮಾಂಡ್ ಲೆಕ್ಕಾಚಾರ.

Recommended Video

ಬ್ರೆಜಿಲ್ ಹಾಗೂ ದಕ್ಷಿಣ ಆಫ್ರಿಕಾದಿಂದ ಬಂದ ನಾಲ್ವರಲ್ಲಿ ರೂಪಾಂತರಿ ವೈರಸ್ ಪತ್ತೆ | Oneindia Kannada
ಈ ಹಿಂದೆಯೂ ಪ್ರಯತ್ನಿಸಿದ್ದರು

ಈ ಹಿಂದೆಯೂ ಪ್ರಯತ್ನಿಸಿದ್ದರು

ಈ ಹಿಂದೆಯೂ ಪ್ರಮೋದ್ ಮುತಾಲಿಕ್ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಬಿಜೆಪಿಯಿಂದ ಟಿಕೆಟ್ ಕೇಳಿದ್ದರು. ಆದರೆ ಹೈಕಮಾಂಡ್ ಟಿಕೆಟ್ ಕೊಟ್ಟಿರಲಿಲ್ಲಿ. ಹೀಗಾಗಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಶ್ರೀರಾಮ ಸೇನೆ ಅಭ್ಯರ್ಥಿಗಳನ್ನು ಮುತಾಲಿಕ್ ಅವರು ಕಣಕ್ಕಿಳಿಸಿದ್ದರು. ಇದೀಗ ಟಿಕೆಟ್‌ಗಾಗಿ ಮುತಾಲಿಕ್ ಅವರು ಮತ್ತೊಮ್ಮೆ ಬಿಜೆಪಿ ಕದ ತಟ್ಟಿದ್ದಾರೆ. ಪ್ರಮೋದ್ ಮುತಾಲಿಕ್ ಅವರಿಗೆ ಟಿಕೆಟ್ ಸಿಗುತ್ತದೆಯಾ? ಅಥವಾ ಶ್ರದ್ಧಾ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ಕೊಡುತ್ತದೆಯಾ ಎಂಬುದು ಕುತೂಹಲ ಮೂಡಿಸಿದೆ!

English summary
Srirama Sena founder Pramod Muthalik has appealed to state BJP incharge Arun Singh to give the BJP ticket in Belagavi Lok Sabha by-election. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X