
ನಮ್ಮ ಬಲಿದಾನ ಆದ್ರೂ ಸಹ ಮುಸ್ಲಿಂ ಕಾಲೇಜು ಸ್ಥಾಪನೆಗೆ ಅವಕಾಶ ಕೊಡಲ್ಲ: ಪ್ರಮೋದ್ ಮುತಾಲಿಕ್
ಹುಬ್ಬಳ್ಳಿ, ನವೆಂಬರ್ 30: ಯಾವುದೇ ಪರಿಸ್ಥಿತಿಯಲ್ಲಿ ಕರ್ನಾಟಕದಲ್ಲಿ ಮುಸ್ಲಿಂ ಕಾಲೇಜು ಸ್ಥಾಪನೆಗೆ ಅವಕಾಶ ಕೊಡುವುದಿಲ್ಲ, ನಮ್ಮ ಬಲಿದಾನ ಆದ್ರೂ 10 ಮುಸ್ಲೀಂ ಕಾಲೇಜು ಸ್ಥಾಪನೆಗೆ ಅವಕಾಶ ಕೊಡುವುದಿಲ್ಲ ಎಂದು ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ
ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಕಲಬುರಗಿ, ಯಾದಗರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಸರ್ಕಾರಿ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಮುಂದಾಗಿದ್ದಕ್ಕೆ ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ವಕ್ಫ್ ಬೋರ್ಡ್ ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸುವ ನಿರ್ಣಯ ಕೈಗೊಳ್ಳಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಸರ್ಕಾರದಿಂದ ಇದಕ್ಕೆ ಅನುಮೋದನೆಯೂ ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದ್ಧು ಇದು ಸರಿಯಲ್ಲ. ಸರ್ಕಾರದ ಈ ನಿರ್ಧಾರವನ್ನು ನಾನು ವಿರೋಧಿಸುತ್ತೇನೆ. ಶ್ರೀರಾಮ ಸೇನೆ ಸೇರಿದಂತೆ ಯಾವುದೇ ಹಿಂದು ಪರ ಸಂಘಟನೆಗಳ ಮುಖಂಡರು ಇದಕ್ಕೆ ಒಪ್ಪಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಶ್ರೀ ರಾಮಸೇನೆ ಮುಂದಾಳತ್ವದಲ್ಲಿ ಎಲ್ಲ ಹಿಂದು ಸಂಘಟನೆಗಳ ಸೇರಿದಂತೆ ಉಗ್ರ ಸ್ವರೂಪದ ಹೋರಾಟ ನಡೆಸಲಾವುದು ಎಂದು ಎಚ್ಚರಿಕೆ ನೀಡಿದ ಅವರು, ಕಾಂಗ್ರೆಸ್ ನವರು ಈ ರೀತಿಯಾದ ತುಷ್ಢೀಕರಣದಿಂದ ಇಂದು ಈ ಪರಿಸ್ಥಿತಿಗೆ ಬಂದಿದೆ. ಬಿಜೆಪಿಯೂ ಸಹ ತುಷ್ಠೀಕರಣ ಮಾಡಿ ಹತ್ತು ಮುಸ್ಲೀಂ ಕಾಲೇಜುಗಳನ್ನ ಕೊಡುತ್ತಿರುವುದು ತಪ್ಪು ಎಂದರು.
ಕಾಂಗ್ರೆಸ್ ನವರು ಓಟ್ ಗಾಗಿ ಹಿಜಾಬ್, ಹಲಾಲ್ ಕಟ್, ಅಜಾನ್ ,ಗುಂಬಜ್ , ಮೀಸಲಾತಿ ಸೇರಿದಂತೆ ಅನೇಕ ರೀತಿಯ ಇಂತಹ ಒಲೈಕೆ ರಾಜಕಾರಣ ಮಾಡುವುದಿಂದಲೇ ಈ ಪರಿಸ್ಥಿತಿ ಬಂದಿದೆ. ಈಗ ಅದನ್ನೇ ಭಾರತೀಯ ಜನತಾ ಪಕ್ಷದವರು ಮಾಡುತಿದ್ದು ಭಾರತೀಯ ಜನತಾ ಪಕ್ಷದವರು ಸಹ ಇಂದು ಮುಸಲ್ಮಾನರ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆಗೆ ಮುಂದಾಗಿದ್ದು ಇದು ಸಹ ತುಷ್ಟೀಕರಣ ರಾಜಕೀಯ ಮಾಡಲು ಹೊರಟಂತಾಗಿದೆ. ಆದ್ದರಿಂದ ಕೂಡಲೇ ಇದನ್ನು ಕೈ ಬೀಡಬೇಕು.ರಾಜ್ಯದ ಹತ್ತು ಮಹಿಳಾ ಕಾಲೇಜುಗಳಿಗೆ ನೀಡಿದ ಪರವಾನಗಿ ರದ್ದು ಮಾಡಬೇಕು ಎಂದು ಒತ್ತಾಯ ಮಾಡಿದರು.
ಪ್ರತಿ ಕಾಲೇಜಿಗೆ 2.5 ಕೋಟಿ ರೂ. ಅನುದಾನವನ್ನೂ ಮೀಸಲಿರಿಸಲಾಗಿದ್ದು, ಉಡುಪಿಯಿಂದ ಆರಂಭವಾದ ಹಿಜಾಬ್ ವಿವಾದ ರಾಜ್ಯಾದ್ಯಂತರ ಆರಂಭವಾಗಿತ್ತು. ಹಿಜಾಬ್ ವಿರುದ್ಧ ಸ್ವತಃ ಬಿಜೆಪಿ ಶಾಸಕರು, ಸಚಿವರೇ ತಿರುಗಿ ನಿಂತಿದ್ದರು. ಬಿಜೆಪಿ ಪರ ಸಂಘಟನೆಗಳು ಈ ವಿಚಾರವನ್ನು ದೊಡ್ಡ ವಿವಾದವಾಗಿ ಮಾರ್ಪಡಿಸಲು ಯಶಸ್ವಿಯಾಗಿತ್ತು. ಒಂದೆಡೆ ಕೋರ್ಟ್ ನಲ್ಲಿ ಹಿಜಾಬ್ ಪರ ಹೋರಾಟ ಮಾಡಿದ ವಿದ್ಯಾರ್ಥಿನಿಯರಿಗೆ ಸೋಲಾದಾಗ ಇದು ನಮಗೆ ಸಿಕ್ಕ ಗೆಲುವು ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದರು.
ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಕಣ್ಣೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಕಲಬುರಗಿ, ಯಾದಗರಿ, ರಾಯಚೂರು, ಉಡುಪಿ ಜಿಲ್ಲೆ ಸೇರಿದಂತೆ 10 ಕಡೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ಕಾಲೇಜು ಸ್ಥಾಪಿಸಲು ಮುಂದಾಗಿದ್ದು, ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ ಅನ್ನೋ ಮಾತುಗಳು ಲಭ್ಯವಾಗಿದ್ಧು ಸರ್ಕಾರದ ಈ ಕ್ರಮವನ್ನು ನಾನು ಬಲವಾಗಿ ಖಂಡಿಸುತ್ತೇನೆ ಮತ್ತು ವಿರೋಧಸುತ್ತೇನೆ. ಶ್ರೀ ರಾಮಸೇನೆ ಸೇರಿದಂತೆ ಇಡೀ ಹಿಂದು ಸಂಘಟನೆಗಳೂ ಹಾಗೂ ಹಿಂದುಪರ ಸಂಘಟನೆಗಳ ಬೆಂಬಲಿಗರು ಕೂಡಿಕೊಂಡು ಉಗ್ರವಾದ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ 10 ಮುಸ್ಲಿಂ ಹೆಣ್ಣು ಮಕ್ಕಳ ಕಾಲೇಜು ಸ್ಥಾಪನೆಗೆ ಶೀಘ್ರದಲ್ಲಿ ಶಂಕು ಸ್ಥಾಪನೆ
ರಾಜ್ಯದಲ್ಲಿ ಮುಸ್ಲಿಂ ಹೆಣ್ಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಂದಿನ ತಿಂಗಳು ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ನಿರೀಕ್ಷೆಯಿದೆ. ಮೂರು ತಿಂಗಳ ಹಿಂದೆ, ರಾಜ್ಯ ವಕ್ಫ್ ಬೋರ್ಡ್‌ನಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಸರ್ಕಾರದಿಂದ ಇದಕ್ಕೆ ಅನುಮೋದನೆಯೂ ದೊರೆತಿತ್ತು. ಪ್ರತಿ ಕಾಲೇಜಿಗೆ 2.50 ಕೋಟಿ ರು.ಅನುದಾನವನ್ನೂ ಮೀಸಲಿರಿಸಲಾಗಿದ್ದು, ವಕ್ಫ್ ಬೋರ್ಡ್‌ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿ ಈ ವೆಚ್ಚವನ್ನು ಭರಿಸಲು ನಿರ್ಧರಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ ಕಣ್ಣೂರಿನ 16 ಎಕರೆ ಜಾಗವನ್ನು ಮೀಸಲಿಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಇನ್ನೂ ಬೇರೆ ಕಡೆಗಳಲ್ಲಿ ಕಾಲೇಜು ಸ್ಥಾಪಿಸುವ ಉದ್ದೇಶ ಹೊಂದಿದೆ. ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕದ ಕೆಲವೆಡೆ ಕಾಲೇಜು ಆರಂಭಿಸಲಾಗುತ್ತದೆ. ಯಾವ ಭಾಗದಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹೆಚ್ಚಿರುತ್ತಾರೋ ಆ ಸ್ಥಳದಲ್ಲಿ ಸ್ಥಾಪಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಶಂಕುಸ್ಥಾಪನೆ ನೆರವೇರಿದ ಬಳಿಕ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ. 2024-25ನೇ ಸಾಲಿನಿಂದ ಕಾಲೇಜುಗಳು ಕಾರ್ಯಾರಂಭ ಮಾಡುವ ಸಾಧ್ಯತೆ ಹೆಚ್ಚಿದೆ. ಆರಂಭದಲ್ಲಿ ಪ್ರಥಮ ಪಿಯುಸಿ ಆರಂಭವಾಗಲಿದ್ದು ನಂತರದ ವರ್ಷ ದ್ವಿತೀಯ ಪಿಯುಸಿ ಹೀಗೆ ಪದವಿ ಕಾಲೇಜಿನ ವರೆಗು ಸ್ಥಾಪನೆಯಾಗುವ ನಿರೀಕ್ಷೆ ಇದೆ.