ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಖಂಡ ಶ್ರೀನಿವಾಸಮೂರ್ತಿ ಪಕ್ಷ ಸೇರಲು ಕಾಂಗ್ರೆಸಿಗರ ವಿರೋಧ!

|
Google Oneindia Kannada News

ಬೆಂಗಳೂರು, ಜನವರಿ 24 : ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಕಾಂಗ್ರೆಸ್ ಸೇರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಅಖಂಡ ಶ್ರೀನಿವಾಸಮೂರ್ತಿ ಅವರು ಪುಲಿಕೇಶಿ ನಗರ ಕ್ಷೇತ್ರದ ಶಾಸಕರು.

ಅಖಂಡ ಶ್ರೀನಿವಾಸಮೂರ್ತಿ ಅವರು ಕಾಂಗ್ರೆಸ್ ಸೇರುವುದಕ್ಕೆ ಕ್ಷೇತ್ರದ ಮಾಜಿ ಶಾಸಕ ಬಿ.ಪ್ರಸನ್ನ ಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ದೂರು ನೀಡಿದ್ದಾರೆ.

ಚಿತ್ರಗಳು : ಜೆಡಿಎಸ್‌ ರೆಬಲ್ ಶಾಸಕರ ಮನೆಗೆ ಡಿ.ಕೆ.ಶಿವಕುಮಾರ್ ಭೇಟಿಚಿತ್ರಗಳು : ಜೆಡಿಎಸ್‌ ರೆಬಲ್ ಶಾಸಕರ ಮನೆಗೆ ಡಿ.ಕೆ.ಶಿವಕುಮಾರ್ ಭೇಟಿ

2013ರ ಚುನಾವಣೆಯಲ್ಲಿ ಬಿ.ಪ್ರಸನ್ನ ಕುಮಾರ್ ಅವರು 38,796 ಮತಗಳನ್ನು ಪಡೆದು ಸೋಲು ಕಂಡಿದ್ದರು. ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಜೆಡಿಎಸ್‌ನ ಅಖಂಡ ಶ್ರೀನಿವಾಸಮೂರ್ತಿ ಅವರು ಈಗ ಕಾಂಗ್ರೆಸ್‌ ಸೇರಲು ಸಿದ್ಧತೆ ನಡೆಸಿದ್ದಾರೆ. ಆದ್ದರಿಂದ, ಪ್ರಸನ್ನ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪುವ ಭೀತಿ ಎದುರಾಗಿದೆ.

ಜೆಡಿಎಸ್ ಬಂಡಾಯ ಶಾಸಕರ ಕಾಂಗ್ರೆಸ್ ಸೇರ್ಪಡೆ ಮುಂದಕ್ಕೆ!ಜೆಡಿಎಸ್ ಬಂಡಾಯ ಶಾಸಕರ ಕಾಂಗ್ರೆಸ್ ಸೇರ್ಪಡೆ ಮುಂದಕ್ಕೆ!

ಜನವರಿ 9ರಂದು ಕಾವಲ್ ಭೈರಸಂದ್ರದಲ್ಲಿರುವ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. 'ಜೆಡಿಎಸ್ ಪಕ್ಷದಿಂದ ಅಮಾನತುಗೊಂಡ ಎಲ್ಲಾ ಶಾಸಕರು ನಮ್ಮ ಜೊತೆಯೇ ಇದ್ದಾರೆ' ಎಂದು ಹೇಳಿದ್ದರು.

ಪಕ್ಷ ಕಟ್ಟಿ ಬೆಳೆಸಿದ್ದೇವೆ

ಪಕ್ಷ ಕಟ್ಟಿ ಬೆಳೆಸಿದ್ದೇವೆ

'ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ನಾವು ಕಟ್ಟಿ ಬೆಳೆಸಿದ್ದೇವೆ. ಈಗ ಪಕ್ಷ ಗೆಲ್ಲುವ ಸ್ಥಿತಿಯಲ್ಲಿದ್ದರೆ ನಮ್ಮಿಂದ. ಆದ್ದರಿಂದ, ಬೇರೆಯವರನ್ನು ಸೇರಿಸಿಕೊಳ್ಳುವ ಮುನ್ನ ಆಲೋಚಿಸಿ' ಎಂದು ಬಿ.ಪ್ರಸನ್ನ ಕುಮಾರ್ ಕೆಪಿಸಿಸಿ ಅಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಭೇಟಿ ನೀಡಿದ್ದ ಇಂಧನ ಸಚಿವ ಡಿ.ಕೆ.ಶಿವಕುಮಾರ್,'ರಾಜ್ಯಸಭೆ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಿದ ಎಲ್ಲಾ ಶಾಸಕರು ನಮ್ಮ ಜೊತೆಯೇ ಇದ್ದಾರೆ. ಅವರು ಕಾಂಗ್ರೆಸ್ ಸೇರುವುದು ಖಚಿತ' ಎಂದು ಹೇಳಿದ್ದರು.

ಟಿಕೆಟ್ ಕೊಡುವ ಕುರಿತು ತೀರ್ಮಾನ

ಟಿಕೆಟ್ ಕೊಡುವ ಕುರಿತು ತೀರ್ಮಾನ

'ಬಂಡಾಯ ಶಾಸಕರು ಕಾಂಗ್ರೆಸ್ ಸೇರುವ ದಿನಾಂಕದ ಬಗ್ಗೆ ರಾಹುಲ್ ಗಾಂಧಿ ತೀರ್ಮಾನ ಕೈಗೊಳ್ಳಲಿದ್ದಾರೆ. ಪಕ್ಷ ಸೇರುವ ನಾಯಕರಿಗೆ ಟಿಕೆಟ್ ಕೊಡುವ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ' ಎಂದು ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದರು.

ಟಿಕೆಟ್ 'ಕೈ' ತಪ್ಪುವ ಭೀತಿ

ಟಿಕೆಟ್ 'ಕೈ' ತಪ್ಪುವ ಭೀತಿ

ಅಖಂಡ ಶ್ರೀನಿವಾಸಮೂರ್ತಿ ಅವರು ಕಾಂಗ್ರೆಸ್ ಸೇರಿದರೆ ಸಹಜವಾಗಿ ಅವರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಲಿದ್ದಾರೆ. ಇದರಿಂದಾಗಿ ಬಿ.ಪ್ರಸನ್ನ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪುವ ಭೀತಿ ಎದುರಾಗಿದೆ. ಆದ್ದರಿಂದ, ಅವರು ಪಕ್ಷ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

2013ರ ಫಲಿತಾಂಶ

2013ರ ಫಲಿತಾಂಶ

2013ರ ಚುನಾವಣೆಯಲ್ಲಿ ಅಖಂಡ ಶ್ರೀನಿವಾಸಮೂರ್ತಿ 48,995 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್‌ನ ಬಿ.ಪ್ರಸನ್ನ ಕುಮಾರ್ 38,796 ಮತ, ಬಿಜೆಪಿಯ ಪಲ್ವಾನಿ ವೇಲು ಕೆ. ಕೇವಲ 4,589 ಮತ ಪಡೆದಿದ್ದರು.

English summary
Congress leader and Pulakeshi Nagar Former MLA B.Prasanna Kumar opposed for Akhanda Srinivas Murthy to join party. Pulakeshi Nagar MLA Akhanda Srinivas Murthy, who suspended from JDS for voting Congress candidate in Rajya Sabha election will join Congress soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X