ಹಿಂದುತ್ವವಾದಿಗಳ ದುರದೃಷ್ಟ: ಬಿಜೆಪಿ ನಾಯಕರ ವಿರುದ್ಧ ಪೋಸ್ಟ್ ಹಾಕಿ ಡಿಲೀಟ್ ಮಾಡಿದ ಪ್ರತಾಪ್ ಸಿಂಹ
ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಈಗ ತಮ್ಮದೇ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಬಳಿಕ ಡಿಲೀಟ್ ಮಾಡಿದ್ದಾರೆ.
ಬಿಜೆಪಿಯಿಂದ ರಘುಪತಿ ಭಟ್ ಅವರನ್ನು ಉಚ್ಛಾಟನೆ ಮಾಡಿದ್ದರ ಬಗ್ಗೆ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಹಿಂದುತ್ವವಾದಿಗಳ ದುರದರಷ್ಟ ಎಂದು ಹೇಳಿದ್ದಾರೆ.

ತಮ್ಮ ಪೋಸ್ಟ್‌ನಲ್ಲಿ, "ಉಡುಪಿಯ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಮವಸ್ತ್ರ ಸಂಹಿತೆಯನ್ನು ಮುರಿದು ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿಯ ವಿರುದ್ಧ ಹೋರಾಡಿದ, ರಘುಪತಿ ಭಟ್ಟರಿಗೆ ಎಂಎಲ್‌ಎ ಟಿಕೆಟ್ಟೂ ಸಿಗಲಿಲ್ಲ, ಎಂಎಲ್‌ಸಿ ಟಿಕೆಟ್ ಕೂಡ ಕೊಡಲಿಲ್ಲ. ಸಾಲದೆಂಬಂತೆ ಬುರ್ಖಾ ಸ್ಟೂಡೆಂಟ್ ಅಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಳಿಕ ಪ್ರತಾಪ್ ಸಿಂಹ ತಮ್ಮ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ. ಆದರೆ ಅಷ್ಟರಲ್ಲಾಗಲೆ ಅವರ ಪೋಸ್ಟ್‌ನ ಸ್ಕ್ರೀನ್ ಶಾಟ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿತ್ತು.
Mysuru MP #PratapSimha has indirectly expressed his displeasure over the decision to deny an MLC ticket to former #BJP MLA #RaghupatiBhat. The move has sparked a reaction on social media, with Simha voicing his concerns.
— Hate Detector 🔍 (@HateDetectors) June 3, 2024
In asocial media post, Simha highlighted the irony of the… pic.twitter.com/CeQqudQlXU
ರಾಜ್ಯ ಬಿಜೆಪಿ ನಾಯಕರ ವಿರುದ್ಧ ಪ್ರತಾಪ್ ಸಿಂಹ ಆಗಾಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜ್ಯ ಬಿಜೆಪಿ ನಾಯಕರನ್ನು ಎದುರುಹಾಕಿಕೊಂಡಿದ್ದಕ್ಕೇ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದೆ ಎನ್ನುವ ಗುಸುಗುಸು ಕೂಡ ಇದೆ.












Click it and Unblock the Notifications