Pratap Simha: ಬಣ ಇಲ್ಲ, ಅಸಮಾಧಾನ ಇಲ್ಲ ಒಟ್ಟಿಗೆ ಕಾಣಿಸಿಕೊಂಡ ವಿಜಯೇಂದ್ರ, ಪ್ರತಾಪ್ ಸಿಂಹ
ಮೈಸೂರು, ಫೆಬ್ರವರಿ 24: ಸಾಂಸ್ಕೃತಿಕ ನಗರಿ ಮೈಸೂರು ಸೋಮವಾರ ಹಲವು ರಾಜಕೀಯ ಬೆಳವಣಿಗೆಗೆ ಕಾರಣವಾಯಿತು. ಕರ್ನಾಟಕ ಬಿಜೆಪಿ ಮತ್ತು ಜೆಡಿಎಸ್‌ನ ಘಟಾನುಘಟಿ ನಾಯಕರು ನಗರದಲ್ಲಿದ್ದರು. ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಸರ್ಕಾರವನ್ನು ಟೀಕಿಸಿದರು. ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣ ಮುಂದಿಟ್ಟುಕೊಂಡು ಬಿಜೆಪಿಯ ರಾಜ್ಯ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್‌ನ ಹಲವು ನಾಯಕರು ಸೋಮವಾರ ಮೈಸೂರಿನಲ್ಲಿದ್ದರು. ಆದರೆ 'ಮೈಸೂರು ಚಲೋ' ಮೆರವಣಿಗೆ ನಡೆಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡದ ಕಾರಣ ಬಿಜೆಪಿ & ಜೆಡಿಎಸ್ ಮೈತ್ರಿಕೂಟದ ಲೆಕ್ಕಾಚಾರ ಬುಡಮೇಲಾಯಿತು.

ವಿಜಯೇಂದ್ರ ಭೇಟಿ ಮಾಡಿದ ಪ್ರತಾಪ್ ಸಿಂಹ: ಇಂದು ಮೈಸೂರಿನಲ್ಲಿ ಗಮನ ಸೆಳೆದಿದ್ದು ಮಾಜಿ ಸಂಸದ ಪ್ರತಾಪ್ ಸಿಂಹ. ಮೈಸೂರು ನಗರಕ್ಕೆ ಆಗಮಿಸಿದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರರನ್ನು ಅವರು ಭೇಟಿ ಮಾಡಿದರು.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, 'ಮೈಸೂರಿನಲ್ಲಿಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಮಾನ್ಯ ಶ್ರೀ ಬಿ. ವೈ. ವಿಜಯೇಂದ್ರರವರು ಹಾಗೂ ನಮ್ಮ ಪಕ್ಷದ ಮುಖಂಡರೊಂದಿಗೆ' ಎಂದು ಹೇಳಿದ್ದಾರೆ.
ಬಿ. ವೈ. ವಿಜಯೇಂದ್ರ ಜೊತೆ ಕುಳಿತು ನಗು ನಗುತ್ತಾ ಮಾತನಾಡಿದ್ದಾರೆ. ಒಟ್ಟಿಗೆ ಕಾಫಿ ಸವಿದಿದ್ದಾರೆ. ಪ್ರತಾಪ್ ಸಿಂಹ ಈ ನಡೆ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಅದಕ್ಕೆ ಕಾರಣ ಹಲವು ದಿನಗಳಿಂದ ಪ್ರತಾಪ್ ಸಿಂಹ ವಿಜಯೇಂದ್ರ ವಿರೋಧಿ ಬಣವಾದ ಬಸನಗೌಡ ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿದ್ದರು.
ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಜಿ. ಎಂ. ಸಿದ್ದೇಶ್ವರ ನಡೆದ ಅನೇಕ ಸಭೆಗಳಲ್ಲಿ ಪ್ರತಾಪ್ ಸಿಂಹ ಪಾಲ್ಗೊಂಡಿದ್ದರು. ಪತ್ರಿಕಾಗೋಷ್ಠಿಗಳನ್ನು ನಡೆಸಿದ್ದರು. ಯತ್ನಾಳ್ ನೇತೃತ್ವದಲ್ಲಿ ನಡೆದ ವಕ್ಫ್ ವಿರೋಧಿ ಹೋರಾಟದಲ್ಲಿ ಪಾಲ್ಗೊಂಡಿದ್ದರು.
2024ರ ಲೋಕಸಭೆ ಚುನಾವಣೆ ಟಿಕೆಟ್ ಕೈ ತಪ್ಪಿದ ಬಳಿಕ ಪ್ರತಾಪ್ ಸಿಂಹ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಮತ್ತು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದು ಅಂದಾಜಿಸಲಾಗಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಯತ್ನಾಳ್ ಬಣದ ಚಟುವಟಿಕೆಗಳಲ್ಲಿ ಪ್ರತಾಪ್ ಪಾಲ್ಗೊಳ್ಳುತ್ತಿದ್ದರು.
ಬಿಜೆಪಿಯ ಪಾದಯಾತ್ರೆ ಠುಸ್; ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೈಸೂರು ಚಲೋ ಮೆರವಣಿಗೆ ನಡೆಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಲಿಲ್ಲ. ಆದ್ದರಿಂದ ಬಿಜೆಪಿ ನಾಯಕರ ಮೈಸೂರು ಚಲೋ ಠುಸ್ ಆಯಿತು. ಕೋರ್ಟ್ ಪುಟ್‌ಬಾಲ್ ಕ್ರೀಡಾಂಗಣದಲ್ಲಿ ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ ನೀಡಿತ್ತು. ಮೈಸೂರು ಪೊಲೀಸರು ಮೈಸೂರು ಚಲೋ ನಡೆಸಲು ಅನುಮತಿ ನಿರಾಕರಿಸಿದ್ದರು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗಿತ್ತು.
ಕೆಲವು ದಿನಗಳ ಹಿಂದೆ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣವನ್ನು ಖಂಡಿಸಿ ಕರ್ನಾಟಕದ ಬಿಜೆಪಿ ನಾಯಕರು ಮೈಸೂರು ಚಲೋ ನಡೆಸಲು ನಗರದಲ್ಲಿ ಸೋಮವಾರ ಸೇರಿದ್ದರು. ಆದರೆ ಕೋರ್ಟ್ ಆದೇಶದ ಕಾರಣ ಇದಕ್ಕೆ ಹಿನ್ನಡೆ ಉಂಟಾಯಿತು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications