ಎಚ್.ಡಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಪ್ರತಾಪ್ ಸಿಂಹ ಹೇಳಿದ್ದೇನು, ಏನಿದು ಹಾಸನ ಟಿಕೆಟ್ ಚರ್ಚೆ ?!
H.D. Kumaraswamy: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿರುವ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಭೇಟಿ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕೆಲವೊಂದು ಮಹತ್ವದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸಾರ್ವಜನಿಕರೊಬ್ಬರು ಎಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದು ಇದಕ್ಕೆ ಪ್ರತಾಪ್ ಸಿಂಹ ಅವರು ರಿಯಾಕ್ಟ್ ಮಾಡಿದ್ದಾರೆ. ಈ ನಡುವೆ ಹಾಸನ ಟಿಕೆಟ್ ಬಗ್ಗೆಯೂ ಚರ್ಚೆ ನಡೆದಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.
ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಣ್ಣ ಅವರನ್ನು ದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದೆವು. ಕುಮಾರಣ್ಣ ಚಟುವಟಿಕೆಯಿಂದಿರುವುದು ದೊಡ್ಡ ಧೈರ್ಯ ಮತ್ತು ಬಲವಿದ್ದಂತೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಈ ಫೋಟೋವನ್ನು ನೋಡಿರುವ ಎಚ್.ಡಿ ಕುಮಾರಸ್ವಾಮಿ ಅವರ ಹಲವು ಅಭಿಮಾನಿಗಳು ಯಾಕೋ ಕುಮಾರಣ್ಣನ ಆರೋಗ್ಯದಲ್ಲಿ ಏರುಪೇರಾದಂತೆ ಕಾಣಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದಕ್ಕೆ ರಿಯಾಕ್ಟ್ ಮಾಡಿರುವ ಪ್ರತಾಪ್ ಸಿಂಹ ಅವರು, ಎಚ್.ಡಿ ಕುಮಾರಸ್ವಾಮಿ ಅವರು "ಆರಾಮಾಗಿ ಇದ್ದಾರೆ. Dont worry" ಎಂದಿದ್ದಾರೆ.

ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು, ಮಾಜಿ ಸಂಸದರಾದ ಪ್ರತಾಪ್ ಸಿಂಹ ಹಾಗೂ ಮುನಿಸ್ವಾಮಿ ಅವರು ನವದೆಹಲಿಯ ನನ್ನ ನಿವಾಸದಲ್ಲಿ ಸೌಹಾರ್ದ ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದಿದ್ದಾರೆ.
ಹಾಸನ ಟಿಕೆಟ್ - ಬಿಜೆಪಿ ರಾಜ್ಯಾಧ್ಯಕ್ಷ ಚರ್ಚೆ: ಇನ್ನು ಪ್ರತಾಪ್ ಸಿಂಹ ಅವರು ಸೋಷಿಯಲ್ ಮೀಡಿಯಾದಲ್ಲಿ ಎಚ್.ಡಿ ಕುಮಾರಸ್ವಾಮಿ ಅವರ ಫೋಟೋವನ್ನು ಹಂಚಿಕೊಂಡ ಕೂಡಲೇ ಹಲವರು ಕುಮಾರಸ್ವಾಮಿ ಅವರ ಆರೋಗ್ಯ ಕಾಳಜಿ ವಹಿಸಿದ್ದಾರೆ. ಇನ್ನೂ ಹಲವರು ಏನಿದು ಹೊಸ ಬೆಳವಣಿಗೆ, ಯಾವ ರಾಜಕೀಯ ತಿರುವನ್ನು ಈ ಬೆಳವಣಿಗೆ ಪಡೆದುಕೊಳ್ಳಲಿದೆ ಎನ್ನುವ ಕುತೂಹಲದಲ್ಲಿ ಇದ್ದಾರೆ.

ಮುಖ್ಯವಾಗಿ ಹಲವರು ಇದು ಮುಂದಿನ ದಿನಗಳಲ್ಲಿ ಹಾಸನ ಟಿಕೆಟ್‌ಗಾಗಿ ನಡೆದಿರುವ ಭೇಟಿ ಆಗಿರಬಹುದು ಎಂದು ಅಂದಾಜಿಸಿದ್ದಾರೆ. ಹಾಸನದಲ್ಲಿ ಜೆಡಿಎಸ್ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟಾಗಿದೆ. ಇಲ್ಲಿ ಕಾಂಗ್ರೆಸ್ ಚಿಗುರುತ್ತಿದ್ದು ಮುಂದಿನ ದಿನಗಳಲ್ಲಿ ಈ ಕ್ಷೇತ್ರವನ್ನು ಉಳಿಸಿಕೊಳ್ಳುವುದು ಜೆಡಿಎಸ್‌ಗೂ ಸವಾಲಿನದ್ದಾಗಿದೆ ಎಂದು ಹೇಳಲಾಗುತ್ತಿದೆ. ಮತ್ತೊಂದು ಕಡೆ ಬಿಜೆಪಿ ರಾಜ್ಯಾಧ್ಯಕ್ಷರ ಚರ್ಚೆ ನಡೆದಿರುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ. ರಾಜ್ಯದಲ್ಲಿ ಯುವ ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಗಬೇಕು ಎಂದು ಪ್ರತಾಪ್ ಸಿಂಹ ಅವರ ಅಭಿಮಾನಿಗಳು ಒತ್ತಾಯಿಸಿದ್ದಾರೆ. ಹಲವರು ಕುಮಾರಸ್ವಾಮಿ ಹಾಗೂ ಪ್ರತಾಪ್ ಸಿಂಹ ಅವರ ಆತ್ಮೀಯತೆ ನೋಡಿ ಪ್ರತಾಪ್ ಸಿಂಹ ಅವರೂ ಅಧಿಕಾರದಲ್ಲಿ ಇರಬೇಕಿತ್ತು ಎಂದು ಕಮೆಂಟ್ ಮಾಡಿದ್ದಾರೆ.












Click it and Unblock the Notifications