ಮೈಸೂರು ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪ್ ಸಿಂಹ ಕಣಕ್ಕೆ
ಬೆಂಗಳೂರು, ಮಾರ್ಚ್ 13- ಕನ್ನಡದ ಖ್ಯಾತ ಅಂಕಣಕಾರ ಪ್ರತಾಪ್ ಸಿಂಹ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದ್ದು, ಮೈಸೂರಿನಿಂದ ಕಣಕ್ಕಿಳಿಯುತ್ತಿದ್ದಾರೆ. ಈ ಬಗ್ಗೆ ಕನ್ನಡ ಪ್ರಭ ಪತ್ರಿಕೆಯಲ್ಲಿ ಇಂದು ಪ್ರಕಟವಾಗಿರುವ ವರದಿಯು ಇದನ್ನು ಖಚಿತಪಡಿಸಿದೆ. ರಾಜ್ಯ ನಾಯಕರು ಬುಧವಾರ ಅಂತಿಮ ಪಡಿಸಿರುವ ಪಟ್ಟಿಯಲ್ಲಿ ಪ್ರತಾಪ್ ಸಿಂಹ ಹೆಸರಿದ್ದು, ದಿಲ್ಲಿ ಬಿಜೆಪಿ ವರಿಷ್ಠರು ಇದಕ್ಕೆ ಅಸ್ತು ಅನ್ನಬೇಕಿದೆ.
ಗುರುವಾರ ಮಧ್ಯಾಹ್ನ ನಡೆಯುವ ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ಬಾಕಿಯಿರುವ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಅಧಿಕೃತವಾಗಿ ಹೊರಬೀಳುವ ಅಂದಾಜಿದೆ. ಅಂಕಣಕಾರ ಪ್ರತಾಪ್ ಸಿಂಹ ಸೇರಿದಂತೆ ಐವರು ಅಭ್ಯರ್ಥಿಗಳ ಹೆಸರನ್ನು ರಾಜ್ಯ ಬಿಜೆಪಿ ನಾಯಕರು ಬುಧವಾರ ಅಂತಿಮಗೊಳಿಸಿದ್ದಾರೆ.

5 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ರಾಜ್ಯ ಬಿಜೆಪಿ
3 ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಜವಾಬ್ದಾರಿಯು ದಿಲ್ಲಿ ನಾಯಕರ ಹೆಗಲೇರಿದೆ. ಅಂದರೆ ಬೀದರ್, ತುಮಕೂರು ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ದಿಲ್ಲಿಯಲ್ಲೇ ಆಗಲಿದೆ. ಇದೇ ಸಂದರ್ಭದಲ್ಲಿ ಬಿಎಸ್ಸಾರ್ ಕಾಂಗ್ರೆಸ್ ವಿಲೀನ ಪ್ರಕ್ರಿಯೆ ಬಗ್ಗೆಯೂ ರಾಜ್ಯ ನಾಯಕರು ಅಂತಿಮ ನಿರ್ಣಯ ತೆಗೆದುಕೊಂಡಿದ್ದು, ಅದನ್ನು ದಿಲ್ಲಿ ವರಿಷ್ಠರ ಗಮನಕ್ಕೆ ತಂದಿದ್ದಾರೆ ಎಂದು ತಿಳಿದುಬಂದಿದೆ.

ಉಡುಪಿ-ಚಿಕ್ಕಮಗಳೂರಿಗೆ ಶೋಭಾ, ಹಾಸನಕ್ಕೆ ವಿಜಯಶಂಕರ್
ಬೆಂಗಳೂರಿನಲ್ಲಿ ಬುಧವಾರ ನಡೆದ ರಾಜ್ಯ ಕಾರ್ಯಕಾರಿಣಿಯಲ್ಲಿ ಮೈಸೂರು (ಪ್ರತಾಪ್), ಉಡುಪಿ-ಚಿಕ್ಕಮಗಳೂರು (ಶೋಭಾ ಕರಂದ್ಲಾಜೆ), ಹಾಸನ (ಸಿಎಚ್ ವಿಜಯಶಂಕರ್), ಕೋಲಾರ (ಬಿ ನಾರಾಯಣಸ್ವಾಮಿ) ಹಾಗೂ ಮಂಡ್ಯ (ಬಿ ಶಿವಲಿಂಗಯ್ಯ) ಲೋಕಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಸೂಚಿಸಿ, ಬಿಜೆಪಿ ಕೇಂದ್ರ ಚುನಾವಣೆ ಸಮಿತಿಗೆ ಕಳುಹಿಸಲಾಗಿದೆ.

ತುಮಕೂರು, ಬೀದರ್ ಕ್ಷೇತ್ರಗಳಿಗೆ ಯಡಿಯೂರಪ್ಪ ಪಟ್ಟು
ಇನ್ನು, ತುಮಕೂರು ಹಾಗೂ ಬೀದರ್ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯ ಜವಾಬ್ದಾರಿಯನ್ನು ಕೇಂದ್ರ ಚುನಾವಣೆ ಸಮಿತಿಗೆ ನೀಡಲಾಗಿದೆ. ತುಮಕೂರಿನಿಂದ ಜಿಎಸ್ ಬಸವರಾಜ್ ಹಾಗೂ ಬೀದರ್‌ನಿಂದ ಗುರುಪಾದಪ್ಪ ನಾಗಮಾರಪಲ್ಲಿ ಅವರ ಪುತ್ರನಿಗೆ ಟಿಕೆಟ್ ನೀಡಬೇಕು ಎನ್ನುವುದು ಯಡಿಯೂರಪ್ಪ ಅವರ ಹಠವಾಗಿದೆ. ಆದರೆ ಇವೆರಡು ಕ್ಷೇತ್ರಗಳಲ್ಲಿ ಬೇರೊಂದು ಅಭ್ಯರ್ಥಿಯ ಆಯ್ಕೆಗೆ ರಾಜ್ಯ ಬಿಜೆಪಿಯ ಇತರ ಮುಖಂಡರು ಒಲವು ತೋರಿದ್ದಾರೆ.

ಶ್ರೀರಾಮುಲು ಬಳ್ಳಾರಿ ಬಿಜೆಪಿಯ ಅಭ್ಯರ್ಥಿ?
ಮತ್ತೊಂದು ಕ್ಷೇತ್ರವಾದ ಬಳ್ಳಾರಿ ಲೋಕಸಭೆಯ ಅಭ್ಯರ್ಥಿ ಆಯ್ಕೆ ಬಿಜೆಪಿಯಲ್ಲಿ ಬಿಎಸ್ಸಾರ್ ಕಾಂಗ್ರೆಸ್ ವಿಲೀನವನ್ನು ಅವಲಂಬಿಸಿದೆ. ವಿಲೀನ ಖಚಿತವಾದರೆ ಮಾಜಿ ಸಚಿವ ಬಿ ಶ್ರೀರಾಮುಲು ಅವರೇ ಬಿಜೆಪಿಯ ಅಭ್ಯರ್ಥಿಯಾಗಲಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications