ರಾಜ್ಯದ ಪರಿಸ್ಥಿತಿ ಹದಗೆಡಲು ಸರ್ಕಾರವೇ ಕಾರಣ: ಡಿಕೆಶಿ

ಬೆಂಗಳೂರು,ಜುಲೈ. 28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವೀಣ್ ಕೊಲೆ ಪ್ರಕರಣ ಬಹಳ ಅನ್ಯಾಯ. ನಾವು ಇದನ್ನು ಖಂಡಿಸುತ್ತೇವೆ. ರಾಜ್ಯದಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಯಾರಿಗೂ ರಕ್ಷಣೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದರು.

ಅವರು ತಮ್ಮ ಸದಾಶಿವನಗರ ನಿವಾಸದ ಬಳಿ ಮಾಧ್ಯಮ ಪ್ರತಿಕ್ರಿಯೆ ನೀಡಿ, ಸರ್ಕಾರವೇ ನೈತಿಕ ಪೊಲೀಸ್‌ಗಿರಿಗೆ ಪ್ರೋತ್ಸಾಹ ನೀಡಿದೆ. ಆ ಮೂಲಕ ಪರಿಸ್ಥಿತಿ ಹದಗೆಡಲು ಕಾರಣವಾಗಿದೆ. ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ. ನಮಗೆ ಇದರಲ್ಲಿ ರಾಜಕಾರಣ ಬೇಕಿಲ್ಲ. ನಾವು ಸರ್ಕಾರದ ಕ್ರಮಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಕಾನೂನು ತನ್ನ ಕೆಲಸ ಮಾಡಲಿ. ಆದರೆ ಸರ್ಕಾರ ತನ್ನ ತಪ್ಪನ್ನು ತಿದ್ದಿಕೊಳ್ಳಬೇಕು. ನಾವು ಜನರ ಭಾವನೆಗೆ ಗೌರವ ನೀಡುತ್ತೇವೆ. ಜನರೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಎಂದು ಆರೋಪಿಸಿದರು.

ಸರ್ಕಾರದ ಮೇಲೆ ಜನರ ಆಕ್ರೋಶ ಮೊದಲಿನಿಂದಲೇ ಇತ್ತು. ಆದರೆ ಸರ್ಕಾರ ಆರಂಭದಿಂದಲೇ ಪರಿಸ್ಥಿತಿ ನಿಯಂತ್ರಣ ಮಾಡಿದ್ದರೆ ಈ ದುಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. ಸರ್ಕಾರ ಯಾವುದೇ ತನಿಖೆ ಮಾಡಲಿ, ಯಾವುದೇ ಸಂಘಟನೆಯನ್ನು ನಿಷೇಧಿಸಲಿ. ಆದರೆ ಮೊದಲು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಲಿ. ರಾಜ್ಯದ ಕರಾವಳಿ ಭಾಗದಲ್ಲಿ ಶಾಂತಿ ಸ್ಥಾಪಿಸುವ ಕೆಲಸ ಮಾಡಲಿ ಎಂದು ಹೇಳಿದರು.

ಸ್ವಾತಂತ್ರ್ಯವಾಗಿ ತನಿಖೆ ಮಾಡಲು ಬಿಡಿ

ಸ್ವಾತಂತ್ರ್ಯವಾಗಿ ತನಿಖೆ ಮಾಡಲು ಬಿಡಿ

ಎಲ್ಲರೂ ತಮ್ಮ, ತಮ್ಮ ಧರ್ಮ ರಕ್ಷಣೆ ಮಾಡಿಕೊಳ್ಳುತ್ತಾರೆ. ಪೊಲೀಸರು ಸ್ವಾತಂತ್ರ್ಯವಾಗಿ ತನಿಖೆ ಮಾಡಲು ಬಿಡಿ. ಪೊಲೀಸ್ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಪ್ರಕರಣ ದಾರಿ ತಪ್ಪಿಸಬಾರದು. ನಾನು ನಿನ್ನೆ ಸಂಜೆಯೇ ಬೆಳ್ಳಾರೆಗೆ ತೆರಳಲು ನಿರ್ಧರಿಸಿದ್ದೆ. ಆದರೆ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿ ತಿಳಿಯಾದ ನಂತರ ಭೇಟಿ ನೀಡಿ ಎಂದು ಸಲಹೆ ನೀಡಿದರು. ಇಂತಹ ಘಟನೆಗಳು ಇನ್ನು ಮುಂದೆ ನಡೆಯಬಾರದು. ಸರ್ಕಾರ ಮಾಡುತ್ತಿರುವ ಉತ್ಸವ ಇದು ಜನೋತ್ಸವ ಅಲ್ಲ, ಭ್ರಷ್ಟೋತ್ಸವ. ನಾವು ಈ ಪಟ್ಟ ಈಗಾಗಲೇ ನೀಡಿದ್ದೇವೆ. ಸರ್ಕಾರ ಸರಿಯಾಗಿ ಇದ್ದಿದ್ದರೆ ಯಾಕೆ ಹೆದರಬೇಕು? ಕಾರ್ಯಕ್ರಮ ಮಾಡಬೇಕಿತ್ತು. ಅವರು ಸಾಧನೆ ಮಾಡದೇ ಈ ಕಾರ್ಯಕ್ರಮ ಮಾಡಲು ಮುಂದಾಗಿದ್ದೇ ತಪ್ಪು ಎಂದರು.

ಸಿದ್ಧಾಂತದ ಮೇಲೆ ಕೆಲಸ ಮಾಡುತ್ತಾರೆ

ಸಿದ್ಧಾಂತದ ಮೇಲೆ ಕೆಲಸ ಮಾಡುತ್ತಾರೆ

ಬಿಜೆಪಿ ನಾಯಕರು ಅನಗತ್ಯವಾಗಿ ಕಾಂಗ್ರೆಸ್ ನಾಯಕರನ್ನು ಎಳೆದು ತಂದು ರಾಜಕಾರಣ ಮಾಡಬಾರದು. ಕಾರ್ಯಕರ್ತರು ಯಾವುದೇ ಪಕ್ಷದವರಾದರೂ ಅವರ ಭಾವನೆಗೆ ಗೌರವ ನೀಡಲೇಬೇಕು. ಅವರು ಒಂದು ಸಿದ್ಧಾಂತದ ಮೇಲೆ ಕೆಲಸ ಮಾಡುತ್ತಾರೆ. ಅದನ್ನು ತಪ್ಪು ಎಂದು ಹೇಳಲು ಸಾಧ್ಯವೇ? ಅವರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಾರೆ. ಈ ಸಂದರ್ಭದಲ್ಲಿ ನಾನು ರಾಜಕಾರಣ ಮಾಡಲು ಇಚ್ಛಿಸುವುದಿಲ್ಲ. ಆ ಬಗ್ಗೆ ಬೇರೆ ಸಮಯದಲ್ಲಿ ಮಾತನಾಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಹಾಗಿದ್ದರೆ ಸರ್ಕಾರ ಏಕೆ ಇರಬೇಕು?

ಹಾಗಿದ್ದರೆ ಸರ್ಕಾರ ಏಕೆ ಇರಬೇಕು?

ಎಲ್ಲರಿಗೂ ರಕ್ಷಣೆ ಅಸಾಧ್ಯ ಎಂಬ ತೇಜಸ್ವಿ ಸೂರ್ಯ ಅವರ ಹೇಳಿಕೆ ವಿಚಾರವಾಗಿ, ಹಾಗಿದ್ದರೆ ಸರ್ಕಾರ ಏಕೆ ಇರಬೇಕು? ಮೈಸೂರಿನಲ್ಲಿ ಅತ್ಯಾಚಾರ ಆದಾಗ ಅಷ್ಟು ಹೊತ್ತಲ್ಲಿ ಆಕೆ ಹೊರಗೆ ಯಾಕೆ ಹೋಗಬೇಕಿತ್ತು? ಎಂದು ಗೃಹ ಸಚಿವರೇ ಕೇಳಿದ್ದರು. ನಾಲ್ಕೈದು ದಿನಗಳ ಹಿಂದೆಯೂ ಆ ಭಾಗದಲ್ಲಿ ಕೊಲೆಯಾಗಿದೆ. ಇವರು ಯಾವ ಕ್ರಮ ಕೈಗೊಂಡಿದ್ದಾರೆ? ನಾನು ನಿನ್ನೆ ರಾತ್ರಿ ಡಿಐಜಿ ಜತೆ ಮಾತನಾಡಿದ್ದು, ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಮುಕ್ತ ತನಿಖೆ ಆಗಬೇಕು. ರಾಜಕಾರಣಿಗಳು ಮಾತು ಕಡಿಮೆ ಮಾಡಬೇಕು. ಪೊಲೀಸರು ಕೆಲಸ ಮಾಡಬೇಕು ಎಂದರು.

ಆರೋಪ ಸಾಬೀತುಪಡಿಸಿ, ಶಿಕ್ಷೆ ನೀಡಲಿ

ಆರೋಪ ಸಾಬೀತುಪಡಿಸಿ, ಶಿಕ್ಷೆ ನೀಡಲಿ

ಕಾಂಗ್ರೆಸ್ ಕಾಲದಲ್ಲಿ 22 ಕೊಲೆಯಾಗಿತ್ತು ಎಂಬ ಬಿಜೆಪಿ ಟೀಕೆ ಬಗ್ಗೆ, ನಮ್ಮ ಕಾಲದಲ್ಲಿ 25 ಆಗಿತ್ತೋ, ಇವರ ಕಾಲದಲ್ಲಿ 35 ಆಗಿದೆಯೋ, 100 ಆಗಿದೆಯೋ ಎಂಬ ಬಗ್ಗೆ ಮಾಧ್ಯಮಗಳೇ ಪಟ್ಟಿ ಪ್ರಕಟಿಸಿವೆ. ಕಾಂಗ್ರೆಸ್ ಬೆಂಬಲಿತ ಮತಾಂಧ ಶಕ್ತಿಗಳು ಈ ಕೃತ್ಯದ ಹಿಂದೆ ಇವೆ ಎಂಬ ಆರೋಪ ಸಂಬಂಧ ಅವರು ಕೇವಲ ರಾಜಕೀಯ ಆರೋಪ ಮಾಡುತ್ತಾರೆ. ಆ ರೀತಿ ಇದ್ದರೆ ಅದನ್ನು ಸಾಬೀತುಪಡಿಸಿ, ಶಿಕ್ಷೆ ನೀಡಲಿ. ಯಾರು ಬೇಡ ಎಂದವರು? ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+