ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್ಐಎಯಿಂದ 15ನೇ ಆರೋಪಿ ಬಂಧನ

ಬೆಂಗಳೂರು, ನ.13: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಹದಿನೈದನೇ ಆರೋಪಿಯನ್ನು ಬಂಧಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಹದಿನೈದನೇ ಆರೋಪಿಯನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾನುವಾರ ತಿಳಿಸಿದೆ.

ಜುಲೈ 26 ರಂದು ದಕ್ಷಿಣ ಕನ್ನಡದ ಬೆಳ್ಳಾರೆ ಗ್ರಾಮದ ನಿವಾಸಿ ಮತ್ತು ಬಿಜೆಪಿಯ ಯುವ ಘಟಕ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ನೆಟ್ಟಾರು ಅವರ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರು ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

Praveen Nettaru murder case: NIA arrests 15th accused

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಈ ವರ್ಷದ ಆಗಸ್ಟ್ 4 ರಂದು ಎನ್ಐಎ ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಈಗಾಗಲೇ ಪ್ರಕರಣದಲ್ಲಿ ಇತರ 14 ಆರೋಪಿಗಳನ್ನು ಬಂಧಿಸಿದೆ.

ಮಸೂದ್ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಾಯಕರು ಮತ್ತು ಸದಸ್ಯರು ಪರ್ವೀನ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಎನ್‌ಐಎ ತನಿಖೆಯಿಂದ ತಿಳಿದುಬಂದಿದೆ.

ಇನ್ನು, ದಕ್ಷಿಣ ಕನ್ನಡದಲ್ಲಿ ಭಯೋತ್ಪಾದನಾ ನಿಗ್ರಹ ತನಿಖಾ ಸಂಸ್ಥೆ ಶನಿವಾರ ಶೋಧ ನಡೆಸಿದ್ದು ಬೆಳ್ಳಾರೆ ನಿವಾಸಿ ಶಹೀದ್ ಎಂ. ಅವರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 302 ಮತ್ತು 34 ಮತ್ತು ಯುಎ (ಪಿ) ಎ (ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ) ಸೆಕ್ಷನ್ 16 ಮತ್ತು 18 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Praveen Nettaru murder case: NIA arrests 15th accused

ಶೋಧದ ವೇಳೆ ಆರೋಪಿಯ ಮನೆಯಿಂದ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎನ್ಐಎ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+