ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕ

ಬೆಂಗಳೂರು, ಜನವರಿ 31 : ಕರ್ನಾಟಕದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕಗೊಂಡಿದ್ದಾರೆ. ನೀಲಮಣಿ ಎನ್. ರಾಜು ಅವರು ಜನವರಿ 31ರಂದು ನಿವೃತ್ತರಾದರು.

ಶುಕ್ರವಾರ ಕರ್ನಾಟಕ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್‌ರನ್ನು ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಪ್ರವೀಣ್ ಸೂದ್ 1986ನೇ ಬ್ಯಾಚ್ ಐಪಿಎಸ್ ಅಧಿಕಾರಿ.

New DG & IGP

ಸಿಐಡಿಯ ಡಿಜಿಪಿಯಾಗಿರುವ ಪ್ರವೀಣ್ ಸೂದ್ ಅವರು ಸೇರಿದಂತೆ ಇಬ್ಬರ ಹೆಸರನ್ನು ಸರ್ಕಾರ ಶಿಫಾರಸು ಮಾಡಿತ್ತು. ಅಂತಿಮವಾಗಿ ಪ್ರವೀಣ್ ಸೂದ್ ನೇಮಕವಾಗಿದೆ. 2024ರ ತನಕ ಪ್ರವೀಣ್ ಸೂದ್ ಅವರ ಅಧಿಕಾರಾವಧಿ ಇದೆ.

ಪ್ರವೀಣ್ ಸೂದ್ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿದ್ದಾರೆ. 2024ರ ಏಪ್ರಿಲ್ ತನಕ ಅವರ ಅಧಿಕಾವಾಧಿ ಇದ್ದು, ನಾಲ್ಕು ವರ್ಷ ಡಿಜಿ & ಐಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.

ಕರ್ನಾಟಕದ ಡಿಜಿ & ಐಜಿಪಿಯಾಗಿದ್ದ ನೀಲಮಣಿ ಎನ್. ರಾಜು ಅವರು ಶುಕ್ರವಾರ ನಿವೃತ್ತರಾದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಪ್ರವೀಣ್ ಸೂದ್ ಅವರು ಅಧಿಕಾರ ವಹಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ.

ಜನವರಿ 31ರ ಶುಕ್ರವಾರ ಮೂವರು ಐಪಿಎಸ್ ಅಧಿಕಾರಿಗಳು ನಿವೃತ್ತರಾಗಿದ್ದಾರೆ. ನೀಲಮಣಿ ಎನ್. ರಾಜು, ಎಂ. ಎನ್. ರೆಡ್ಡಿ ಮತ್ತು ರಾಘವೇಂದ್ರ ಔರಾದ್ಕರ್ ನಿವೃತರಾದವರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+