ನೂತನ ಡಿಜಿ & ಐಜಿಪಿಯಾಗಿ ಪ್ರವೀಣ್ ಸೂದ್ ಅಧಿಕಾರ ಸ್ವೀಕಾರ
Recommended Video
ಬೆಂಗಳೂರು, ಜನವರಿ 31 : "ಕರ್ನಾಟಕದ ಆರೂವರೆ ಕೋಟಿ ಕನ್ನಡಿಗರ ಸೇವೆ ಮಾಡಲು ಅವಕಾಶ ಸಿಕ್ಕಿದೆ" ಎಂದು ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಹೇಳಿದರು.
ಶುಕ್ರವಾರ ಕರ್ನಾಟಕ ಸರ್ಕಾರ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಿತ್ತು. ಸಂಜೆ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅವರು ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಡಿಜಿ & ಐಜಿಪಿ ನೀಲಮಣಿ ಎನ್. ರಾಜು ಪ್ರವೀಣ್ ಸೂದ್ ಅವರಿಗೆ ಅಧಿಕಾರವನ್ನು ಹಸ್ತಾಂತರ ಮಾಡಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಪ್ರವೀಣ್ ಸೂದ್, ಕರ್ನಾಟಕದ ಜನರ ಸೇವೆ ಮಾಡಲು ಅವಕಾಶ ಕೊಟ್ಟ ಮುಖ್ಯಮಂತ್ರಿ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಧನ್ಯವಾದ ಹೇಳಿದರು.

"ನೀಲಮಣಿ ರಾಜು ಅವರು ಜವಾಬ್ದಾರಿ ಹಸ್ತಾಂತರ ಮಾಡಿದ್ದಾರೆ. ಸಂಘಟನಾತ್ಮಕವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. 6 ಕೋಟಿ ಜನರ ರಕ್ಷಣೆಯ ಹೊಣೆ ಒಂದ ಲಕ್ಷ ಪೊಲೀಸರ ಮೇಲಿದೆ" ಎಂದು ಪ್ರವೀಣ್ ಸೂದ್ ಹೇಳಿದರು.
ಐಪಿಎಸ್ ಅಧಿಕಾರಿಗಳ ವರ್ಗಾವಣೆ : ನೂತನ ಪೊಲೀಸ್ ಆಯುಕ್ತರ ನೇಮಕವಾಗುತ್ತಿದ್ದಂತೆ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ ಮಾಡಿದೆ. ಶುಕ್ರವಾರ ರಾತ್ರಿ 23 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.












Click it and Unblock the Notifications