ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆಬ್ರವರಿ 17 ರಂದು ರಾಜ್ಯ ಬಜೆಟ್; ಜನವರಿ 23ರಿಂದ ಸಿಎಂ ನೇತೃತ್ವದಲ್ಲಿ ಬಜೆಟ್ ಪೂರ್ವಭಾವಿ ಸಭೆ

|
Google Oneindia Kannada News

ಬೆಂಗಳೂರು,ಜನವರಿ 21: ವಿಧಾನಸಭಾ ಚುನಾವಣೆಗೆ ನಾಲ್ಕೈದು ತಿಂಗಳು ಮಾತ್ರ ಬಾಕಿ ಇದೆ. ಈ ನಡುವೆ 2023-2024 ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೂ ಸರ್ಕಾರ ಸಿದ್ದತೆಯನ್ನ ನಡೆಸುತ್ತಿದ್ದು, ಜನವರಿ 23 ರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಜೆಟ್​ ಪೂರ್ವಭಾವಿ ಸಭೆ ನಡೆಯಲಿದೆ.

ಬಜೆಟ್ ಅಧಿವೇಶನವು ಫೆಬ್ರವರಿ 10 ರಂದು ಆರಂಭವಾಗಲಿದ್ದು, ಫೆಬ್ರವರಿ 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಹೀಗಾಗಿ ಜನವರಿ 23, 24 ಮತ್ತು 25ರಂದು 3 ದಿನಗಳ ಕಾಲ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದ್ದು ಸಿಎಂ ಬಸವರಾಜ ಬೊಮ್ಮಾಯಿ 30ಕ್ಕೂ ಹೆಚ್ಚು ಇಲಾಖೆಗಳ ಜೊತೆ ಬಜೆಟ್ ಮಂಡಿಸಲು ಸಿದ್ಧತೆ ನಡೆಸಿದ್ದಾರೆ.

ಜನವರಿ 23 ರಿಂದ ಬಜೆಟ್​ ಪೂರ್ವಭಾವಿ ಸಭೆಯು ನಿತ್ಯ ಬೆಳಗ್ಗೆ 10.30 ರಿಂದ ಸಂಜೆ 6 ಗಂಟೆವರೆಗೂ ನಡೆಯಲಿವೆ. ಸಭೆಗೆ ನಿಗದಿತ ದಿನ ಹಾಗೂ ಸಮಯದಲ್ಲಿ ಆಯಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಅವಶ್ಯಕ ಮಾಹಿತಿಗಳು ಹಾಗೂ ಪ್ರಾತ್ಯಕ್ಷಿಕೆಯೊಂದಿಗೆ ಹಾಜರಾಗಲು ಆರ್ಥಿಕ ಇಲಾಖೆ ಸೂಚನೆ ನೀಡಿದೆ.

Pre Budget Meeting Led By CM Basavaraj Bommai From January 23

ಈಗಾಗಲೇ ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಹಲವು ರಾಜಕೀಯ ಪಕ್ಷಗಳು ಸಾಕಷ್ಟು ತಯಾರಿ ನಡೆಸಿದ್ದು, ಚುನಾವಣಾ ವರ್ಷವಾದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ, ಸಾಮಾನ್ಯ ಜನರ ನಿರೀಕ್ಷೆ ಬಸವರಾಜ ಬೊಮ್ಮಾಯಿ ಅವರ ಬಜೆಟ್ ಮೇಲೆ ಹೆಚ್ಚಿನ ಕುತೂಹಲ ಹೆಚ್ಚಾಗಿದೆ. ಹೀಗಾಗಿ ರಾಜ್ಯ ಬಜೆಟ್‌ ಮಂಡನೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಇದೇ ಜನವರಿ 23 ಸೋಮವಾರದಿಂದ ಸಿಎಂ ನೇತೃತ್ವದಲ್ಲಿ ಬಜೆಟ್​ ಪೂರ್ವಭಾವಿ ಸಭೆ ನಡೆಯಲಿದೆ.
Pre Budget Meeting Led By CM Basavaraj Bommai From January 23

ಸಭೆಗೆ ನಿಗದಿತ ದಿನ ಹಾಗೂ ಸಮಯದಲ್ಲಿ ಆಯಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಅವಶ್ಯಕ ಮಾಹಿತಿಗಳು ಹಾಗೂ ಪ್ರಾತ್ಯಕ್ಷಿಕೆಯೊಂದಿಗೆ ಹಾಜರಾಗಲು ಆರ್ಥಿಕ ಇಲಾಖೆ ಸೂಚಿಸಿದೆ. ಪ್ರತಿದಿನ ಯಾವ ಇಲಾಖೆಗಳ ಜೊತೆ ಸಭೆ ಎಂದು ವೇಳಾಪಟ್ಟಿ ನಿಗದಿಪಡಿಸಲಾಗಿದೆ.

English summary
State Budget on 17th February; Pre Budget meeting led by CM basavaraj bommai from January 23,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X