ಹಾಸನದಲ್ಲಿ ಮೈತ್ರಿ ಮುನಿಸಿಗೆ ಬಿತ್ತಾ ಬ್ರೇಕ್; ಎಲ್ಲಿಯೂ ಪ್ರಜ್ವಲ್ ರೇವಣ್ಣ ಹೆಸರು ಹೇಳದೆ ಪ್ರಚಾರ ಆರಂಭಿಸಿದ ಪ್ರೀತಂ ಗೌಡ

ಹಾಸನ, ಏಪ್ರಿಲ್‌ 11: ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆರಂಭದಿಂದಲೂ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಹಾಸನದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಗೆ ಎದುರಾಗಿರುವ ಸಂಕಷ್ಟವನ್ನು ನಿವಾರಿಸುವಲ್ಲಿ ಇದೀಗ ಬಿಜೆಪಿ ನಾಯಕರು ಯಶಸ್ವಿಯಾಗಿದ್ದು, ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಪರ ಪ್ರೀತಂ ಗೌಡ ಪ್ರಚಾರ ಆರಂಭಿಸಿದ್ದಾರೆ.

ಎಲ್ಲಿಯೂ ಪ್ರಜ್ವಲ್‌ರೇವಣ್ಣ ಅವರ ಹೆಸರು ಹೇಳದೆ ಪ್ರಚಾರ ನಡೆಸಿದ್ದಾರೆ. ಅವರು ಆರು ಭಾರಿ ಶಾಸಕರು, ಅವರ ತಂದೆ ಪ್ರಧಾನಮಂತ್ರಿ ಆಗಿದ್ದವರು. ಎನ್‌ಡಿಎ ಅಭ್ಯರ್ಥಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಎಷ್ಟು ಮತ ತೆಗೆದುಕೊಳ್ಳುತ್ತಾರೆ ಅದಕ್ಕಿಂತ ಒಂದು ಮತ ಹೆಚ್ಚಿಗೆ ಕೊಡಿಸುತ್ತೇನೆ, ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದೇನೆ. ನಾನು ಸೋತಿರುವವನು, ನನ್ನ ಬಳಿ ಶ್ರಮ ಇದೆ. ಅವರ ಶಾಸಕರು ಇದ್ದಾರೆ ಶಕ್ತಿ ಅವರ ಬಳಿ ಇದೆ ಎಂದು ಪ್ರಜ್ವಲ್‌ರೇವಣ್ಣ, ಜೆಡಿಎಸ್ ಪಕ್ಷ ಚಿಹ್ನೆಯ ಹೆಸರನ್ನು ಹೇಳದ ಪ್ರೀತಂಗೌಡ ಮಾತನಾಡಿದ್ದಾರೆ.

Preetham Gowda Starts Election Campaign For Prajwal Revanna

ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾ‌ನಿ ಆಗಬೇಕೆಂದು ಕೋಟ್ಯಾಂತರ ಜನರು ಕನಸು ಕಟ್ಟಿಕೊಂಡಿದ್ದಾರೆ. ನಾನು ಕಳೆದ ಆರು ತಿಂಗಳಿನಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಅದಕ್ಕೂ ಮುನ್ನ ಬಿಜೆಪಿ 28 ಕ್ಕೆ 28 ಗೆಲ್ಲಬೇಕೆಂಬ ಕನಸಿನಿಂದ ಪ್ರಚಾರ ಮಾಡಿದ್ದೇನೆ. ಬೂತ್ ಗೆದ್ದರೆ ದೇಶಗೆದ್ದಂತೆ, ನಮ್ಮ ಬೂತ್ ಅಧ್ಯಕ್ಷರ ಮನೆಗೆ ಭೇಟಿ‌ ಕೊಟ್ಟು ಪ್ರಚಾರಕ್ಕೆ ವಿದ್ಯಕ್ತ ಚಾಲನೆ ಕೊಟ್ಟಿದ್ದೇನೆ. ಬಿಜೆಪಿ ಜಿಲ್ಲಾಧ್ಯಕ್ಷರಿಗೂ ಹಾಗೂ ಸಕಲೇಶಪುರ ಶಾಸಕರಾದ ಸಿಮೆಂಟ್ ಮಂಜು ಅವರಿಗೂ ಮನವಿ ಮಾಡಿದ್ದೇನೆ ಎಂದು ಪ್ರೀತಂ ಗೌಡ ಹೇಳಿದರು.

ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗೋದಕ್ಕೆ ಶಕ್ತಿ ತುಂಬುತ್ತೇವೆ. ಹೊಳೆನರಸೀಪುರ ವಿಧಾನಸಭಾ ಕ್ಷೇತ್ರಕ್ಕಿಂತ ಒಂದು ಮತ ಎನ್ ಡಿಎ ಅಭ್ಯರ್ಥಿಗೆ ಕೊಡಿಸುತ್ತೇವೆ, ಇದನ್ನ ನಾನು ಚಾಲೆಂಜ್ ಆಗಿ ತೆಗೆದುಕೊಂಡಿದ್ದೇನೆ. ಒಬ್ಬ ಬಿಜೆಪಿ ಕಾರ್ಯಕರ್ತನಾಗಿ ನರೇಂದ್ರಮೋದಿ ಅವರು ಪ್ರಧಾನಮಂತ್ರಿ ಆಗಬೇಕು ಎಂದು ಪ್ರಚಾರ ಆರಂಭಿಸಿದ್ದೇನೆ ಎಂದರು.

ರಾಜ್ಯದಲ್ಲಿ 28 ಕ್ಕೆ 28 ಸ್ಥಾನ ಗೆಲ್ಲುವ ಮೂಲಕ ಇಡೀ ದೇಶದಲ್ಲಿ 400 ಕ್ಕೂ ಹೆಚ್ಚು ಸೀಟ್‌ಗಳನ್ನು ಗೆಲ್ಲಬೇಕು. ಹಿರಿಯರು ನಮಗೆ ಒಂದು ಜವಾಬ್ದಾರಿ ಕೊಟ್ಟಿದ್ದಾರೆ,ನಮ್ಮ ಬೂತ್ ನಂಬರ್ 89 ರಿಂದ ಪ್ರಚಾರ ಆರಂಭಿಸಿದ್ದೇವೆ ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ದೊಡ್ಡದು. 2021 ಬೂತ್ ಹಾಸನ ಲೋಕಸಭಾ ಕ್ಷೇತ್ರಕ್ಕೆ ಬರುತ್ತದೆ. ನಾಳೆ ಸಿಮೆಂಟ್ ಮಂಜು, ಜಿಲ್ಲಾ ಬಿಜೆಪಿ ಅಧ್ಯಕ್ಷರು ಆಲೂರಿನಲ್ಲಿ ಪ್ರಚಾರ ಮಾಡಲು ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ಎನ್‌ಡಿಎ ಕೂಟ ಗೆಲ್ಲಿಸುವುದೇ ನಮ್ಮ ಗುರಿ. ಹೊಳೆನರಸೀಪುರ ವಿಧಾನಸಭಾ ಕ್ಷೇತ್ರಕ್ಕಿಂತ ಒಂದು ಮತವನ್ನು ಹೆಚ್ಚಿಗೆ ಕೊಡಿಸಲು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದೇನೆ, ಹೊಳೆನರಸೀಪುರ ಕಾಂಗ್ರೆಸ್ ಅಭ್ಯರ್ಥಿಗಿಂತ ಎನ್‌ಡಿಎ ಅಭ್ಯರ್ಥಿ ಎಷ್ಟು ಲೀಡ್ ತೆಗೆಯುತ್ತಾರೋ ಅದಕ್ಕಿಂತ ಒಂದು ಮತ ಹೆಚ್ಚಿಗೆ ಕೊಡಿಸುವುದು ನನ್ನ ಗುರಿ. ಯಾರೇ ಆದರೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರಿನಲ್ಲೇ ಓಟು ಕೇಳಬೇಕು, ಕರ್ನಾಟಕದಿಂದ ಕಾಶ್ಮೀರದವರೆಗೂ ಮೋದಿ ಅವರ ಹೆಸರಿನಲ್ಲಿ ಮತ ಕೇಳಬೇಕು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+