ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಏನೇನು ಸಿದ್ಧತೆ ಆಗಿದೆ? ಸಚಿವ ಸುರೇಶ್ ಕುಮಾರ್ ಮಾಹಿತಿ!

|
Google Oneindia Kannada News

ಬೆಂಗಳೂರು, ಜು. 15: "ಇದೇ ತಿಂಗಳಿನಲ್ಲಿ ನಿಗದಿಯಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿಯ ಸಿಇಒಗಳು ಈಗಾಗಲೇ ಸಿದ್ಧತೆಯ ಕುರಿತಂತೆ ಪರಿಶೀಲನೆ ನಡೆಸಿದ್ದಾರೆ" ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಸಿದ್ಧತೆ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ದೇಶಕರ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಸಭೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸುರೇಶ್ ಕುಮಾರ್, "ಯಾವುದೇ ಒಂದು ಮಗುವಿಗೂ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು' ಎಂದು ಸೂಚನೆ ನೀಡಿದ್ದಾರೆ.

SSLC Exam 2021: ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶSSLC Exam 2021: ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ

"ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಸಿದ್ಧತೆ ಕುರಿತು ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆಗಳು ನಡೆದಿವೆ. ಡಿಸಿಗಳ ನೇತೃತ್ವದಲ್ಲಿ ಸಿಇಒ, ಎಸ್.ಪಿ ಡಿಎಚ್ಒ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆಗಳು ನಡೆದಿದ್ದು, ಪರೀಕ್ಷಾ ಸಿದ್ಧತೆ ಮತ್ತು ಎಸ್ಒಪಿ ಪಾಲನೆ ಕುರಿತಂತೆ ನಿರ್ದೇಶನ ನೀಡಿದ್ದು, ಆಯಾ ಮಟ್ಟದ ಅಧಿಕಾರಿಗಳು ಕ್ರಮ ವಹಿಸಿದ್ದಾರೆ' ಎಂದು ಸುರೇಶ್ ಕುಮಾರ್ ಹೇಳಿದರು.

ಮಕ್ಕಳಲ್ಲಿ ಸುರಕ್ಷತಾ ಮನೋಭಾವನೆ

ಮಕ್ಕಳಲ್ಲಿ ಸುರಕ್ಷತಾ ಮನೋಭಾವನೆ

"ಮಕ್ಕಳಿಗೆ ಪರೀಕ್ಷೆ ಬರೆಯುವ ಕೊಠಡಿಯಲ್ಲಿ ಸುರಕ್ಷತೆ ಮತ್ತು ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಈಗಾಗಲೇ ಪರೀಕ್ಷೆ ಬೆರುವ ಕುರಿತು ಹಲವು ಬಾರಿ ತಿಳಿವಳಿಕೆ ಮೂಡಿಸಲಾಗಿದೆ. ಪರೀಕ್ಷಾ ಕೊಠಡಿಯಲ್ಲೂ ಪ್ರತಿ ವಿದ್ಯಾರ್ಥಿಗೂ ಕೊಠಡಿ ಮೇಲ್ವಿಚಾರಕರು ಈ ಕುರಿತು ಸೂಕ್ತ ಮಾರ್ಗದರ್ಶನ ನೀಡಲು ಸೂಚನೆ ನೀಡಲಾಗಿದೆ. ಯಾವುದೇ ರೀತಿಯಲ್ಲೂ ಗೊಂದಲವಾಗದಂತೆ ಗಮನ ಹರಿಸಲಾಗುತ್ತದೆ" ಎಂದು ಸುರೇಶ್ ಕುಮಾರ್ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಕಳೆದ ಬಾರಿಗಿಂತ ಹೆಚ್ಚಿನ ಸುರಕ್ಷತೆ

ಕಳೆದ ಬಾರಿಗಿಂತ ಹೆಚ್ಚಿನ ಸುರಕ್ಷತೆ

"ಕಳೆದ ಬಾರಿಗಿಂತ ಹೆಚ್ಚಿನ ಸುರಕ್ಷಾ ವಾತಾವರಣದಲ್ಲಿ ಪರೀಕ್ಷೆಗಳು ನಡೆಯಲಿವೆ. ಪೋಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ಸಂಪರ್ಕದಲ್ಲಿದ್ದು, ಪರೀಕ್ಷೆಗೆ ಸರ್ಕಾರ ಕೈಗೊಂಡಿರುವ ಎಲ್ಲ ಕ್ರಮಗಳನ್ನು ವಿವರಿಸಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಧೈರ್ಯವಾಗಿ ಪರೀಕ್ಷೆಗೆ ಕಳಿಸಲು ಸಜ್ಜಾಗಿದ್ದಾರೆ. ಪರೀಕ್ಷೆ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ಡಿಡಿಪಿಐ ಅವರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ್ದೇನೆ' ಎಂದು ವಿವರಿಸಿದ್ದಾರೆ

ಪರೀಕ್ಷೆ ಬರೆಯಲು SSLC ವಿದ್ಯಾರ್ಥಿಗಳಿಗೆ ಎದುರಾಯ್ತು ಮತ್ತೊಂದು ಆತಂಕ!ಪರೀಕ್ಷೆ ಬರೆಯಲು SSLC ವಿದ್ಯಾರ್ಥಿಗಳಿಗೆ ಎದುರಾಯ್ತು ಮತ್ತೊಂದು ಆತಂಕ!

"ಎಲ್ಲರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿ ಕೊನೆ ಕ್ಷಣದ ಸೂಚನೆಗಳನ್ನು ನೀಡಿದ್ದೇನೆ. ಪ್ರತಿಯೊಬ್ಬ ಅಧಿಕಾರಿಗಳು ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಂಡಿದ್ದಾರೆ. ಯಾವುದೇ ಒಂದು ಮಗುವೂ ಸಹ ವಾಹನ ಸೌಲಭ್ಯವಿಲ್ಲದೇ ಪರೀಕ್ಷೆಗೆ ಗೈರು ಹಾಜರಾಗದಂತೆ ಗಮನಹರಿಸಲು ಕ್ರಮ ವಹಿಸಬೇಕೆಂದು ಸೂಚನೆಗಳನ್ನು ನೀಡಲಾಗಿದೆ. ಮಕ್ಕಳ ಪರೀಕ್ಷಾ ಪ್ರವೇಶ ಪತ್ರ ಪ್ರದರ್ಶಿಸಿ ಮಕ್ಕಳು ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಿ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ" ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪರೀಕ್ಷಾಂಗಣವಲ್ಲ, ಕ್ರೀಡಾಂಗಣ!

ಪರೀಕ್ಷಾಂಗಣವಲ್ಲ, ಕ್ರೀಡಾಂಗಣ!

"ಅನೇಕ ಸಂಸ್ಥೆಗಳು, ಆಯಾ ಶಾಸಕರು, ಜನಪ್ರತಿನಿಧಿಗಳು ಆಯಾ ಭಾಗದ ಮಕ್ಕಳಿಗೆ ಪರೀಕ್ಷಾವಧಿ ನಂತರ ಅಲ್ಲಲ್ಲಿ ನೀರಿನ ಬಾಟಲ್ ಮತ್ತು ಬಿಸ್ಕತ್, ಬ್ರೆಡ್ ಸೇರಿದಂತೆ ಸಿದ್ದಪಡಿಸಿದ ಅಹಾರಗಳಂತಹ ಲುಘು ಉಪಹಾರ ವ್ಯವಸ್ಥೆ ಸಹ ಮಾಡಿವೆ. ಪರೀಕ್ಷೆಗೆ ಎಲ್ಲರ ಸಹಾಯ ಸಹಕಾರದ ಹಸ್ತ ಚಾಚಿದ್ದಾರೆ. ಪರೀಕ್ಷಾ ಕೇಂದ್ರಗಳು ಮಕ್ಕಳ ಸುರಕ್ಷಾ ಕೇಂದ್ರವಾಗಿರಲಿವೆ. ಪರೀಕ್ಷೆಯು ಮಕ್ಕಳಿಗೆ ಸಂಭ್ರಮದ ಹಬ್ಬವಾಗಿರಲಿದೆ. ಪರೀಕ್ಷಾಂಗಣವನ್ನು ಕ್ರೀಡಾಂಗಣವೆಂದು ಭಾವಿಸಿ ಖುಷಿಯ ವಾತಾವರಣದಲ್ಲಿ ಪರೀಕ್ಷೆ ಬರೆಯಬೇಕು" ಎಂದು ಸಚಿವ ಸುರೇಶ್ ಕುಮಾರ್ ಅವರು ಮಕ್ಕಳಿಗೆ ಮನವಿ ಮಾಡಿದ್ದಾರೆ.

Recommended Video

ಚಂದ್ರನ ಮೇಲೆ ಮನೆ ಕಟ್ಟಲು ನಾಸಾದಿಂದ ಕಾಂಟ್ರ್ಯಾಕ್ಟ್ | Oneindia Kannada
ಪರೀಕ್ಷಾ ಕೊಠಡಿ ಸ್ಯಾನಿಟೈಸ್

ಪರೀಕ್ಷಾ ಕೊಠಡಿ ಸ್ಯಾನಿಟೈಸ್

"ಎಸ್ಒಪಿ ಪಾಲನೆಯೊಂದಿಗೆ ಪರೀಕ್ಷೆಗೆ ಮೊದಲು ಮತ್ತು ನಂತರ ಪರೀಕ್ಷಾ ಕೇಂದ್ರದ ಆವರಣ ಮತ್ತು ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲು ಸಂಬಂಧಿಸಿದ ಅಧಿಕಾರಿಗಳು ಆಯಾ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದ್ದಾರೆ. ಡಿಡಿಪಿಐ ಮತ್ತು ಬಿಇಒಗಳು ತಮ್ಮ ವ್ಯಾಪ್ತಿಯ ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈಗಾಗಲೇ ಶೇ. 100ರಷ್ಟು ಪರೀಕ್ಷಾ ಸಿಬ್ಬಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆದವರಷ್ಟೇ ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ" ಎಂದು ಸಚಿವ ಸುರೇಶ್ ಕುಮಾರ್ ಅವರು ಭರವಸೆ ನೀಡಿದ್ದಾರೆ.

ಎಸ್ಎಸ್ಎಲ್‌ಸಿ ಪರೀಕ್ಷೆ - 2021 : ಪರೀಕ್ಷೆಗೆ ಹೋಗುವ ಮುನ್ನ ಈ ವಿಷಯ ಗೊತ್ತಿರಲಿ !ಎಸ್ಎಸ್ಎಲ್‌ಸಿ ಪರೀಕ್ಷೆ - 2021 : ಪರೀಕ್ಷೆಗೆ ಹೋಗುವ ಮುನ್ನ ಈ ವಿಷಯ ಗೊತ್ತಿರಲಿ !

English summary
Education Minister S Suresh Kumar said that, the preparations for the SSLC examination, which is scheduled for the same month, have been completed in all the districts of the state. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X