SSLC: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ
ಬೆಂಗಳೂರು, ಏಪ್ರಿಲ್ 17: 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 9ನೇ ತರಗತಿಯಿಂದ ಉತ್ತಿರ್ಣರಾಗಿ 10ನೇ ತರಗತಿಗೆ ದಾಖಲಾಗುತ್ತಿರುವ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಹಾಗೂ ಸಂಕಲ್ಪ್ ಲರ್ನಿಂಗ್ ಸಂಸ್ಥೆಯವರ ಸಹಯೋಗದೊಂದಿಗೆ ಏಪ್ರಿಲ್ 11 ರಿಂದ ಮೇ 2025ರ ಅಂತ್ಯದವರೆಗೆ ಬೇಸಿಗೆ ರಜೆಯಲ್ಲಿ ಎಸ್.ಎಸ್.ಎಲ್.ಸಿ "ತಯಾರಿ" ಪೂರ್ವ ಸಿದ್ದತೆ ಶೀರ್ಷಿಕೆಯಡಿ ಗಣಿತ, ವಿಜ್ಞಾನ ಮತ್ತು ಇಂಗ್ಲೀಷ್ ವಿಷಯಗಳಿಗೆ ಉಚಿತ ತರಗತಿಗಳನ್ನು ಪ್ರಾರಂಭಿಸಲಾಗಿದೆ.
ಸಂಕಲ್ಪ್ ಲರ್ನಿಂಗ್ ಸಂಸ್ಥೆಯವರ ಯೂಟೂಬ್ ಲೈವ್ www.you tube.com@sankalplearningsolutions ಮೂಲಕ ಭಾನುವಾರವೂ ಸೇರಿದಂತೆ ಪ್ರತಿ ದಿನ ಸಂಜೆ 6.30 ರಿಂದ 8.30ರ ವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳಲ್ಲಿ ನೇರ ಪ್ರಸಾರದಲ್ಲಿ ತರಗತಿಗಳು ನಡೆಯಲಿದ್ದು ಬೆಂಗಳೂರು ದಕ್ಷಿಣ ಜಿಲ್ಲೆಯ 89 ಸರ್ಕಾರಿ ಪ್ರೌಢಶಾಲೆಗಳ 7998 ವಿದ್ಯಾರ್ಥಿಗಳು ಹಾಗೂ 134 ಅನುದಾನಿತ ಪ್ರೌಢಶಾಲೆಗಳ 9,123 ವಿದ್ಯಾರ್ಥಿಗಳು ಒಟ್ಟು 17,121 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.

ಈ ಕಾರ್ಯಕ್ರಮದ ಪ್ರಯೋಜನವನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಪಡೆದುಕೊಳ್ಳಲು ಹಾಗೂ ತರಗತಿಗಳಿಗೆ ವಿದ್ಯಾರ್ಥಿಗಳು ನಿರಂತರವಾಗಿ ಹಾಜರಾಗುತ್ತಿರುವ ಬಗ್ಗೆ ಅನುಪಾಲನೆ ಹಾಗೂ ಸಮನ್ವಯ ಮಾಡಲು ಸಂಬಂಧಪಟ್ಟ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಬಿ.ಆರ್.ಪಿ ಮತ್ತು ಸಿ.ಆರ್.ಪಿ ರವರು ಅಗತ್ಯ ಕ್ರಮವಹಿಸುವುದು ಮತ್ತು ಪೋಷಕರು ವಿದ್ಯಾರ್ಥಿಗಳ ಮನವೊಲಿಸಿ ತರಗತಿಗಳ ಪ್ರಯೋಜನ ಪಡೆದುಕೊಳ್ಳುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ












Click it and Unblock the Notifications