ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏನಾಯಿತು? ಸಿದ್ದರಾಮಯ್ಯನವರ ಸಾಲುಸಾಲು ಬೇಸರದ ಟ್ವೀಟ್!

|
Google Oneindia Kannada News

ಬೆಂಗಳೂರು, ಫೆ 25: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಹಾಲೀ ವ್ಯವಸ್ಥೆಯ ಬಗ್ಗೆ ಸಾಲುಸಾಲು ಟ್ವೀಟ್ ಮಾಡಿ ಬೇಸರ ವ್ಯಕ್ತ ಪಡಿಸಿದ್ದಾರೆ. ಹಿಂದೆಲ್ಲಾ ಚುನಾವಣೆಗೆ ಜನರೇ ಅಭ್ಯರ್ಥಿಗೆ ದುಡ್ಡು ಕೊಟ್ಟು ಕಣಕ್ಕಿಳಿಸುತ್ತಿದ್ದರು, ಆದರೆ ಈಗ ಎಲ್ಲಾ ತದ್ವಿರುದ್ದವಾಗಿದೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಸಿದ್ದರಾಮಯ್ಯನವರು ಮಾಡಿರುವ ಟ್ವೀಟ್ ಹೀಗಿದೆ, "ಚುನಾವಣಾ ವ್ಯವಸ್ಥೆ ಬದಲಾಗದ ಹೊರತು ಸಂವಿಧಾನದ ಮೌಲ್ಯಗಳ ಕುಸಿತ ತಪ್ಪಿಸಲು ಸಾಧ್ಯವಿಲ್ಲ. ಚುನಾವಣೆಯನ್ನು ಸರ್ಕಾರವೇ ನಡೆಸುವ ವ್ಯವಸ್ಥೆ ಜಾರಿಗೆ ತರಬೇಕು. ನಾಮಪತ್ರ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಪ್ರಚಾರಕ್ಕೆ ಹೋಗುವಂತಿರಬಾರದು. ಒಟ್ಟಾರೆ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕಾದರೆ ರಾಜಕೀಯ ಪಕ್ಷಗಳಲ್ಲಿಯೂ ಬದಲಾವಣೆ ಅನಿವಾರ್ಯ".

"ಹುಲಿ ಅಂತ ಅಬ್ಬರಿಸುತ್ತಿದ್ದ ಸಿದ್ದರಾಮಯ್ಯರನ್ನು ಬೋನಿಗೆ ಹಾಕಿದ ಕುಮಾರಸ್ವಾಮಿ''

"ಮಾತೃ ಹೃದಯದವರು ಮಾತ್ರ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬಲ್ಲರು. ಕಲಾಪ ಎಷ್ಟು ದಿನ ನಡೆಸಬೇಕು ಎಂಬ ಸ್ವಾತಂತ್ಯ ವಿಧಾನಸಭೆಯ ಅಧ್ಯಕ್ಷರು ಮತ್ತು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ಇರಬೇಕು. ಕಲಾಪದ ಅವಧಿಯನ್ನು ಸರ್ಕಾರ ನಿರ್ಧಾರ ಮಾಡುವುದು ಸರಿಯಲ್ಲ. ವರ್ಷದಲ್ಲಿ 60 ದಿನಗಳ ಕಾಲ ಕಲಾಪ ನಡೆಯಲೇ ಬೇಕು".

 ಚಿಕ್ಕಬಳ್ಳಾಪುರ ಸ್ಫೋಟ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸಿಡಿಮಿಡಿ! ಚಿಕ್ಕಬಳ್ಳಾಪುರ ಸ್ಫೋಟ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸಿಡಿಮಿಡಿ!

"ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 1973ರಲ್ಲಿ ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರಲಾಯಿತು. ಅದಕ್ಕೆ ಪೂರ್ವಭಾವಿಯಾಗಿ ವಿಧಾನ ಮಂಡಲದ ಉಭಯ ಸದನಗಳಲ್ಲಿ ಭಾರಿ ಚರ್ಚೆ ನಡೆದಿತ್ತು. ಆದರೆ ಈಗ ತರಾತುರಿಯಲ್ಲಿ ಕಾನೂನುಗಳನ್ನು ರೂಪಿಸಿ ಜಾರಿಗೆ ತರಲಾಗುತ್ತಿದೆ".

ಸಂವಿಧಾನದ ಮೌಲ್ಯಗಳು ಕುಸಿಯುತ್ತಿದೆ

"ಯಾವುದೇ ಕಾನೂನು ಜಾರಿಗೆ ತರುವ ಮುನ್ನ ಚರ್ಚೆಗೆ ಅವಕಾಶ ಸಿಗಲೇಬೇಕು. ಅವಸರ ಮಾಡಬಾರದು. ವಿಧೇಯಕ ಮಂಡಿಸಿ ಒಂದೇ ದಿನದಲ್ಲಿ ಅಂಗೀಕಾರ ಮಾಡಿ, ಸುಗ್ರೀವಾಜ್ಞೆ ಜಾರಿಗೆ ತರುವ ಅಭ್ಯಾಸ ಒಳ್ಳೆಯದಲ್ಲ".

"ಶಾಸಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುವುದನ್ನು ತಪ್ಪಿಸಲು ಕಾನೂನು ಜಾರಿಗೆ ತರಲಾಯಿತು. ಆದರೂ ಶಾಸಕರು ರಂಗೋಲಿ ಕೆಳಗೆ ನುಸುಳುತ್ತಾರೆ. ಚುನಾವಣಾ ವ್ಯವಸ್ಥೆಯಲ್ಲಿ ಬದಲಾವಣೆ ತರದಿದ್ದರೆ ಸಂವಿಧಾನದ ಮೌಲ್ಯಗಳು ಕುಸಿಯುವುದನ್ನು ತಪ್ಪಿಸಲು ಸಾಧ್ಯವಿಲ್ಲ".

ಶ್ರೀಮಂತರು, ಹೊಡಿ-ಬಡಿ ಸಂಸ್ಕೃತಿಯವರು

ಶ್ರೀಮಂತರು, ಹೊಡಿ-ಬಡಿ ಸಂಸ್ಕೃತಿಯವರು

"ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಮೊದಲು ಮತದಾರರೇ ಹಣ ಕೊಟ್ಟು ಆಶೀರ್ವಾದ ಮಾಡುತ್ತಿದ್ದರು. ಆದರೆ ಪರಿಸ್ಥಿತಿ ಈಗ ಬದಲಾಗಿದೆ. ಮತ ಕೇಳಬೇಕಾದರೆ ಹಣ ಕೊಡಲೇಬೇಕು. ಕ್ರಿಮಿನಲ್‍ಗಳು, ಶ್ರೀಮಂತರು, ಹೊಡಿ-ಬಡಿ ಸಂಸ್ಕೃತಿಯವರು ಚುನಾವಣಾ ಕಣಕ್ಕೆ ಇಳಿಯುತ್ತಿದ್ದಾರೆ".

"ಚುನಾವಣೆ ಎಂದರೆ ವ್ಯಾಪಾರ, ಹರಾಜು ಎನ್ನುವಂತಾಗಿದೆ. ಹೀಗಾಗಿ ಚುನಾವಣಾ ವ್ಯವಸ್ಥೆ ದಿಕ್ಕಾಪಾಲಾಗಿದೆ. ಮಾಧ್ಯಮದವರಂತೂ ಉದ್ಯಮಿ, ಪತ್ರಕರ್ತ, ರಾಜಕಾರಣಿ ಹೀಗೆ ಎಲ್ಲ ಪಾತ್ರ ನಿಭಾಯಿಸುವುದರಿಂದ ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ಥಂಭ ಗಟ್ಟಿಯಾಗಿ ನಿಲ್ಲುವುದಾದರೂ ಹೇಗೆ?".

ವಾಟಾಳ್ ನಾಗರಾಜ್

ವಾಟಾಳ್ ನಾಗರಾಜ್

"ವಾಟಾಳ್ ನಾಗರಾಜ್ ಅವರು ಶಾಸಕರಾಗಿದ್ದಾಗ ಬೆಳಗ್ಗೆ ಬಂದರೆ ಕಲಾಪ ಮುಗಿಯುವ ವರೆಗೆ ಹೋಗುತ್ತಿರಲಿಲ್ಲ. ಸಚಿವರೇ ಈಗ ಕಲಾಪದಲ್ಲಿ ಭಾಗವಹಿಸುವುದಿಲ್ಲ. ಇನ್ನು ಶಾಸಕರಿಗೆ ಬುದ್ದಿ ಹೇಳುವುದಾದರೂ ಹೇಗೆ?".

"ಸಂಸದೀಯ ವ್ಯವಸ್ಥೆ ನಮ್ಮ ದೇಶಕ್ಕೆ ಹೊಸದೇನೂ ಅಲ್ಲ. ಬುದ್ಧ ಮತ್ತು ಬಸವಣ್ಣನವರ ಕಾಲದಲ್ಲಿಯೇ ಸಂಸದೀಯ ವ್ಯವಸ್ಥೆ ಇತ್ತು. ಈ ಕಾರಣಕ್ಕಾಗಿಯೇ ಬಸವಣ್ಣನವರು ಅನುಭವ ಮಂಟಪ ಸ್ಥಾಪನೆ ಮಾಡಿದರು".

Recommended Video

ಮತ್ತೆ ಜನಸಾಮಾನ್ಯರಿಗೆ ಅನಿಲಾಘಾತ- ಅಡುಗೆ ಅನಿಲ ದರ 25 ರೂಪಾಯಿ ಹೆಚ್ಚಳ..! | Oneindia Kannada
ಸರ್ವಾಧಿಕಾರಿ ಮನಸ್ಥಿತಿ ನಮ್ಮಿಂದ ದೂರ ಆಗಬೇಕು

ಸರ್ವಾಧಿಕಾರಿ ಮನಸ್ಥಿತಿ ನಮ್ಮಿಂದ ದೂರ ಆಗಬೇಕು

"ಮೌಲ್ಯಗಳ ರಕ್ಷಣೆ ಮತ್ತು ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ಈಗ ಗಂಭೀರವಾದ ಚಿಂತನೆ ನಡೆಯಬೇಕು. ಸರ್ವಾಧಿಕಾರಿ ಮನಸ್ಥಿತಿ ನಮ್ಮಿಂದ ದೂರ ಆಗಬೇಕು. ಇದು ಪ್ರತಿಯೊಬ್ಬರ ಜವಾಬ್ದಾರಿ".

"ಕೇವಲ ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು. ಸ್ವಾತಂತ್ರ್ಯ, ಸಮಾನತೆ ಹಾಗೂ ಭಾತೃತ್ವವನ್ನು ಪ್ರಜಾಪ್ರಭುತ್ವ ಒಳಗೊಂಡಿರಬೇಕು. ಈ ಯಾವುದೂ ಇಲ್ಲದಿದ್ದರೆ ದೇಶ ಉಳಿಯುವುದು ಕಷ್ಟ".

"ಯಾವುದೇ ಬದಲಾವಣೆಗೆ ನಮ್ಮ ಸಂಪೂರ್ಣ ಸಹಮತ ಇದೆ. ಓದಿಕೊಂಡವರು ಹೆಚ್ಚಿನ ಸಂಖ್ಯೆಯಲ್ಲಿ ವಿಧಾನಸಭೆ, ವಿಧಾನ ಪರಿಷತ್ತು ಮತ್ತು ಸಂಸತ್ತಿಗೆ ಆಯ್ಕೆಯಾಗಿ ಬರಬೇಕು ಎಂಬುದೇನೋ ಸರಿ. ಆದರೆ ಜಾತಿಭಾವನೆ ವಿದ್ಯಾವಂತರಲ್ಲಿಯೇ ಹೆಚ್ಚು. ಇದು ಅತ್ಯಂತ ಅಪಾಯಕಾರಿ" - ಸಿದ್ದರಾಮಯ್ಯ ಮಾಡಿರುವ ಟ್ವೀಟ್.

English summary
Present Politics And Election: Opposition Leader Siddaramaiah Series Of Tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X