ವಕ್ಫ್ ಆಸ್ತಿ ಸಂರಕ್ಷಣೆ ದೇವರ ಕೆಲಸ: ಸಚಿವ ಜಮೀರ್ ಅಹಮದ್ ಖಾನ್
ವಕ್ಫ್ ಆಸ್ತಿ ಸಂರಕ್ಷಣೆ ದೇಶದಲ್ಲಿ ವಿವಾದದ ಸ್ವರೂಪ ಪಡೆದುಕೊಂಡಿದೆ. ಇದೀಗ ಕೇಂದ್ರ ಸರ್ಕಾರ ಮತ್ತು ಮುಸ್ಲಿಂರ ನಡುವೆ ಮುನಿಸಿಗೆ ಕಾರಣವಾಗಿದೆ. ಈ ಬಗ್ಗೆ ಈಗಾಗಲೇ ಸಿ.ಎಂ ಸಿದ್ದರಾಮಯ್ಯ ಅವರಿಗೂ ಮುಸ್ಲಿಂ ಮುಖಂಡರು ಮನವಿ ಸಲ್ಲಿಸಿದ್ದಾರೆ. ವಕ್ಫ್ ಆಸ್ತಿ ಸಂರಕ್ಷಣೆ ದೇವರ ಕೆಲಸ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ವಕ್ಫ್ ಆಸ್ತಿ ಸಂರಕ್ಷಣೆ ಮಾಡುವುದು ದೇವರ ಕೆಲಸ. ನಿಮ್ಮ ಕೈಮುಗಿದು ಮನವಿ ಮಾಡುತ್ತೇನೆ. ಈ ಆಸ್ತಿಯನ್ನು ನಮ್ಮ ಸಮುದಾಯದ ಒಳಿತಿಗಾಗಿ ಬಳಸಿ ಎಂದು ಸಚಿವ ಜಮೀರ್ ಅಹಮದ್ ಅವರು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ವಕ್ಫ್ ಅದಾಲತ್ ಉದ್ಘಾಟನೆ ಮಾಡಿ ಮಾತನಾಡಿದ ಅವರು, ವಕ್ಫ್ ಆಸ್ತಿ ಸರಿಯಾಗಿ ನಿರ್ವಹಣೆ ಮಾಡಿಕೊಂಡರೆ ಸಾಕು. ನೀವು ವಾಕ್ಪ್ ಆಸ್ತಿಯನ್ನು ಉತ್ತಮವಾಗಿ ಬಳಸಿಕೊಂಡರೆ, ಸರ್ಕಾರದಿಂದ ನಾವು ಅನುದಾನ ಕೇಳುವ ಪರಿಸ್ಥಿತಿಯೇ ಉದ್ಭವಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

23 ಸಾವಿರ ಆಸ್ತಿ ವಿವಿಧ ಹಂತದಲ್ಲಿ
ರಾಜ್ಯದಲ್ಲಿ ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಬರೋಬ್ಬರಿ 47 ಸಾವಿರ ವಕ್ಫ್ ಆಸ್ತಿಯಿದೆ. ಆದರೆ, ಇದರಲ್ಲಿ 23 ಸಾವಿರ ಆಸ್ತಿಗಳು ಒತ್ತುವರಿ, ವಿವಾದ, ನ್ಯಾಯಾಲಯದಲ್ಲಿ ದಾವೆ ಇದೆ. ಈ ಆಸ್ತಿ ಸಂರಕ್ಷಣೆ ನಮ್ಮ ಕರ್ತವ್ಯ ಆಗಬೇಕು. ವಖ್ಫ್ ಆಸ್ತಿ ಸಂರಕ್ಷಣೆ ಮಾಡಿ ತಾಲ್ಲೂಕಿಗೊಂದು ಆಸ್ಪತ್ರೆ, ಜಿಲ್ಲೆಗೊಂದು ಮಹಿಳಾ ಕಾಲೇಜು ನಿರ್ಮಾಣ ಮಾಡಲಾಗುವುದು. ವಕ್ಪ್ ಮಂಡಳಿಯಲ್ಲಿ ಕೆಲಸ ಮಾಡುವವರಿಗೆ ಸಮುದಾಯದ ಸೇವೆ ಮಾಡುವ ಅವಕಾಶ ಸಿಗುತ್ತದೆ. ಇದೊಂದು ಪುಣ್ಯದ ಕೆಲಸ ಎಂದರು.
ವಕ್ಪ್ ಬೋರ್ಡ್‌ನಲ್ಲಿ ವಿವಿಧ ಸಮುದಾಯಕ್ಕೆ ನೆರವು
ವಕ್ಪ್ ಬೋರ್ಡ್‌ನಲ್ಲಿ ವಿವಿಧ ಸಮುದಾಯಕ್ಕೆ ನೆರವಾಗುವ ಕೆಲಸ ಮಾಡಿದ್ದೇವೆ. ತಾಲ್ಲೂಕಿಗೆ ಒಂದು ಫ್ರೀಜರ್, ಜಿಲ್ಲೆಗೆ ಒಂದು ಆ್ಯಂಬುಲೆನ್ಸ್ ಸೇವೆ ನೀಡಲಾಗಿದೆ. ಪ್ರತಿ ಜಿಲ್ಲೆಗೆ ಒಂದು ವಾಹನ ವ್ಯವಸ್ಥೆ ಮಾಡಲಾಗಿದೆ. ಪ್ರಮುಖ ದರ್ಗಗಳನ್ನು ಅಭಿವೃದ್ಧಿಪಡಿಸಲು 25 ಕೋಟಿ ರೂಪಾಯಿ ಯೋಜನೆ ಸಿದ್ಧಪಡಿಸಲಾಗಿದೆ ಎಂದರು. ಸಮುದಾಯದ ಜನ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಹಾಗೂ ಉತ್ತಮ ರೀತಿಯಲ್ಲಿ ಅದನ್ನು ಬಳಸಿಕೊಳ್ಳಬೇಕು ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರದ ಕ್ರಮಕ್ಕೆ ವಿರೋಧ
ಕೇಂದ್ರ ಸರ್ಕಾರ ಉದ್ದೇಶಿತ ವಕ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ಕರ್ನಾಟಕದ ಮುಸ್ಲಿಂ ಸಮುದಾಯ ಸೇರಿದಂತೆ ದೇಶದ ವಿವಿಧ ಭಾಗದಿಂದ ಈಗಾಗಲೇ ವಿರೋಧ ವ್ಯಕ್ತವಾಗಿದೆ. ಕೇಂದ್ರ ಬಿಜೆಪಿ ಸರ್ಕಾರದ ಉದ್ದೇಶಿತ ವಕ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ರಾಜ್ಯ ವಕ್ಫ್ ಬೋರ್ಡ್ ಸಹ ಈಗಾಗಲೇ ವಿರೋಧ ವ್ಯಕ್ತಪಡಿಸಿದೆ.
ಭಾರತದಲ್ಲಿ ಎಷ್ಟಿದೆ ವಕ್ಫ್ ಆಸ್ತಿ ?
ಭಾರತದಾದ್ಯಂತ ಕೋಟ್ಯಾಂತರ ರೂಪಾಯಿಯ ವಕ್ಫ್ ಆಸ್ತಿ ಇದೆ. ದೇಶದ ವಿವಿಧೆಡೆ ಕಾರಣಾಂತರಗಳಿಂದ ವಕ್ಫ್ ಆಸ್ತಿ ವಿವಾದಕ್ಕೆ ಕಾರಣವಾಗಿದ್ದೂ ಸಹ ಇದೆ. ಇದೀಗ ದೇಶದಾದ್ಯಂತ 8 ಲಕ್ಷದ 70 ಸಾವಿರ ವಕ್ಫ್ ಆಸ್ತಿ ಇರುವುದು ವರದಿಯಾಗಿದೆ. ದೇಶದ 9.40 ಲಕ್ಷ ಎಕರೆ ಪ್ರದೇಶದಲ್ಲಿ ವಕ್ಫ್ ಆಸ್ತಿ ಇದೆ ಎಂದು ಅಂದಾಜಿಸಲಾಗಿದೆ. ಈ ಆಸ್ತಿಯು ಕೋಟ್ಯಾಂತರ ರೂಪಾಯಿಗೆ ಸಮಾನವಾಗಿದೆ. ಮಾರುಕಟ್ಟೆಯ ಆಧಾರದ ಮೇಲೆ ದೇಶದ ವಿವಿಧ ವಕ್ಪ್ ಆಸ್ತಿ ನಿರ್ಧಾರವಾಗುತ್ತದೆ.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications