ಜೆಡಿಎಸ್‌ನಿಂದ ಅಧ್ಯಕ್ಷ ಸಿಎಂ ಇಬ್ರಾಹಿಂ ಉಚ್ಛಾಟನೆ, ಹೀಗೊಂದು ಪತ್ರ ವೈರಲ್
ಬೆಂಗಳೂರು, ಅಕ್ಟೋಬರ್ 18: ಜೆಡಿಎಸ್ ಹಾಲಿ ಅಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಹೇಳಲಾದ ಪತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಇದರ ಸತ್ಯಾಸತ್ಯತೆ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್‌ಡಿ ದೇವೇಗೌಡ ಅವರ ಹೆಸರಿನ ಪತ್ರದಲ್ಲಿ ಈ ಕೂಡಲೇ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಅವರನ್ನು ಜಾತ್ಯತೀತ ಜನತಾದಳ (ಕರ್ನಾಟಕ) ದ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾ ಮಾಡಲಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌ಡಿ ದೇವೇಗೌಡರ ಲೆಟರ್ ಹೆಡ್ ಹೊಂದಿರುವ ಜೆಡಿಎಸ್ ಪಕ್ಷದ ಮತ್ತೊಂದು ನಕಲಿ ಪತ್ರಿಕಾ ಪ್ರಕಟಣೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗಿದ್ದು, ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಸಿಎಂ ಇಬ್ರಾಹಿಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಜೆಡಿಎಸ್‌ನಿಂದ ಉಚ್ಚಾಟಿಸಲಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ. ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟಿಸುವ ಬಗ್ಗೆ ದೇವೇಗೌಡರಿಂದಾಗಲಿ ಅಥವಾ ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿಯವರಿಂದಾಗಲಿ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.
ಇಬ್ರಾಹಿಂ ಅವರ ಹೆಸರನ್ನು ಹೊಂದಿರುವ ಮತ್ತೊಂದು ನಕಲಿ ಜೆಡಿಎಸ್ ಪತ್ರಿಕಾ ಪ್ರಕಟಣೆ ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಈಗ ಈ ಪತ್ರ ವೈರಲ್ ಆಗುತ್ತಿದೆ. ಇಬ್ರಾಹಿಂ ಅವರ ಲೆಟರ್ ಹೆಡ್ ಇರುವ ನಕಲಿ ಪತ್ರದಲ್ಲಿ ಕುಮಾರಸ್ವಾಮಿ ಮತ್ತು ಅವರ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್‌ನಿಂದ ಉಚ್ಚಾಟಿಸಲಾಗಿದೆ ಎಂದು ಹೇಳಲಾಗಿತ್ತು.

ಈ ಸಂಬಂಧ ಮಂಗಳವಾರ ಸಿಎಂ ಇಬ್ರಾಹಿಂ ಅವರು ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮ್ಮ ಲೆಟರ್‌ಹೆಡ್ ಹೊಂದಿರುವ ಪತ್ರಿಕಾ ಪ್ರಕಟಣೆ ಆನ್‌ಲೈನ್‌ನಲ್ಲಿ ಕಂಡು ಬಂದಿದೆ. ಈ ಪತ್ರ ನನಗೆ ಮತ್ತು ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ. ಪತ್ರವನ್ನು ಯಾರೋ ಕಿಡಿಗೇಡಿಗಳು ನಕಲಿ ಮಾಡಿ ಪ್ರಸಾರ ಮಾಡಿದ್ದಾರೆ ಎಂದು ದೂರು ದಾಖಲಿಸಿ ನಂತರ ಇಬ್ರಾಹಿಂ ಹೇಳಿದ್ದಾರೆ.
ಇಬ್ರಾಹಿಂ ಮತ್ತು ಕುಮಾರಸ್ವಾಮಿ ನಡುವೆ ಮನಸ್ತಾಪ:
ಬಿಜೆಪಿ ಜೊತೆ ಜೆಡಿಎಸ್ ಪಕ್ಷದ ಮೈತ್ರಿ ಬಗ್ಗೆ ಸಿಎಂ ಇಬ್ರಾಹಿಂ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ನಂತರ ಅವರು ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ದೇವೇಗೌಡರು ಬಿಜೆಪಿ ಜತೆಗಿನ ಮೈತ್ರಿಯ ಭಾಗವಾಗಿಲ್ಲ ಎಂದು ಇಬ್ರಾಹಿಂ ಸೋಮವಾರ ಹೇಳಿಕೊಂಡಿದ್ದರು.
ಇಬ್ರಾಹಿಂ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಕುರಿತು ಕ್ರಮ ಕೈಗೊಳ್ಳಲು ಜೆಡಿಎಸ್ ಶೀಘ್ರದಲ್ಲೇ ಕೋರ್ ಕಮಿಟಿ ಸಭೆ ನಡೆಸುವ ಸಾಧ್ಯತೆ ಇದೆ. ಇಬ್ರಾಹಿಂ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಚಟುವಟಿಕೆಗಳಿಂದಾಗಿ ಕೆಲವು ಜೆಡಿಎಸ್ ಶಾಸಕರು ಪಕ್ಷಕ್ಕೆ ನೋಟಿಸ್ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications